PM Modi Speech: ಇಂದು ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಯಾವಾಗ, ಹೇಗೆ ವೀಕ್ಷಿಸಬಹುದು?

Independence Day 2024: ಭಾರತವು ತನ್ನ 78ನೇ ಸ್ವಾತಂತ್ರ್ಯ ದಿನವನ್ನು ಇಂದು ಆಚರಿಸಲಿದೆ. ಇಂದು (ಆಗಸ್ಟ್ 15) ಬೆಳಗ್ಗೆ 7.30ರ ಸುಮಾರಿಗೆ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣವನ್ನು ಯಾವಾಗ ಮತ್ತು ಎಲ್ಲಿ ವೀಕ್ಷಿಸಬಹುದು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

PM Modi Speech: ಇಂದು ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಯಾವಾಗ, ಹೇಗೆ ವೀಕ್ಷಿಸಬಹುದು?
ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
| Updated By: ಆಯೇಷಾ ಬಾನು

Updated on:Aug 15, 2024 | 6:26 AM

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸತತ 11ನೇ ಬಾರಿಗೆ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಇದು ಅವರ ಮೊದಲ ಭಾಷಣವಾಗಿದೆ. ಹಾಗಾದರೆ, ಮೋದಿಯವರ ಭಾಷಣ ಮತ್ತು ಕೆಂಪುಕೋಟೆಯ ಸ್ವಾತಂತ್ರ್ಯ ದಿನಾಚರಣೆಯನ್ನು ವೀಕ್ಷಿಸುವುದು ಹೇಗೆಂಬ ಗೊಂದಲ ನಿಮ್ಮಲ್ಲಿದ್ದರೆ ಆ ಕುರಿತು ಮಾಹಿತಿ ಇಲ್ಲಿದೆ.

ಕೆಂಪುಕೋಟೆಯಲ್ಲಿ ಧ್ವಜಾರೋಹಣ ಸಮಾರಂಭವು ಇಂದು ಬೆಳಗ್ಗೆ ಸುಮಾರು 7.30ಕ್ಕೆ ಪ್ರಾರಂಭವಾಗಲಿದೆ. ಈ ವರ್ಷದ ಭಾಷಣವು ಪ್ರಧಾನಿ ಮೋದಿಯವರ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣವವಾಗಿದೆ. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡುವ ಭಾಷಣವನ್ನು ನೀವು ಟಿವಿ9 ಚಾನೆಲ್ ನೇರಪ್ರಸಾರದಲ್ಲಿ ವೀಕ್ಷಿಸಬಹುದು. ಟಿವಿ9 ಯೂಟ್ಯೂಬ್ ಚಾನೆಲ್, ಟಿವಿ9 ಡಿಜಿಟಲ್​ನಲ್ಲಿಯೂ ಮೋದಿಯವರ ಭಾಷಣವನ್ನು ವೀಕ್ಷಿಸಬಹುದು.

ಇದನ್ನೂ ಓದಿ: Independence Day: ನಮ್ಮ ರಾಷ್ಟ್ರಧ್ವಜದ ಇತಿಹಾಸದ ಬಗ್ಗೆ ನಿಮಗೆಷ್ಟು ಗೊತ್ತು?

2024ರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮತ್ತು ಪ್ರಧಾನಿ ಮೋದಿಯವರ ಭಾಷಣವನ್ನು ದೂರದರ್ಶನದಲ್ಲಿ ಲೈವ್ ಆಗಿ ವೀಕ್ಷಿಸಬಹುದು. ಹಾಗೇ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯೂಟ್ಯೂಬ್ ಚಾನೆಲ್‌ನಲ್ಲಿ ಹಾಗೂ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ Xನಲ್ಲಿ @PIB_India ಮತ್ತು PMO X ಹ್ಯಾಂಡಲ್ ಮೂಲಕ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.

ಯೂಟ್ಯೂಬ್ ಚಾನಲ್‌ಗಳು:

ಕೆಳಗಿನ YouTube ಚಾನಲ್‌ಗಳಲ್ಲಿ ದೆಹಲಿಯ 2024ರ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಗಳನ್ನು ಸಹ ವೀಕ್ಷಿಸಬಹುದು:

www.youtube.com/user/narendramodi

www.youtube.com/user/PMOfficeIndia

www.youtube.com/user/DoordarshanNational

ಫೇಸ್​ಬುಕ್ ಹ್ಯಾಂಡಲ್ಸ್:

ಈ ಕೆಳಗಿನ ಫೇಸ್‌ಬುಕ್ ಹ್ಯಾಂಡಲ್‌ಗಳಲ್ಲಿ ಪಿಎಂ ಮೋದಿಯವರ ಸ್ವಾತಂತ್ರ್ಯ ದಿನಾಚರಣೆ 2024 ರ ಭಾಷಣವನ್ನು ಸಹ ವೀಕ್ಷಿಸಬಹುದು:

www.facebook.com/narendramodi

www.facebook.com/PMOIndia/

www.facebook.com/DoordarshanNational/

www.facebook.com/BJP4India/

ಇದನ್ನೂ ಓದಿ: Independence Day 2024: ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಗೆ 6,000 ಅತಿಥಿಗಳಿಗೆ ಆಹ್ವಾನ; ಹೇಗಿರಲಿದೆ ಸಂಭ್ರಮಾಚರಣೆ?

2024ರ ಸ್ವಾತಂತ್ರ್ಯ ದಿನಾಚರಣೆಯ ಥೀಮ್ “ವಿಕ್ಷಿತ್ ಭಾರತ್” ಆಗಿದೆ. ಇದು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಸರ್ಕಾರದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಈ ಥೀಮ್ ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಭಾರತದ ಜಾಗತಿಕ ಸ್ಥಾನವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 am, Thu, 15 August 24

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್