ಎಲ್ಲರಿಗೂ ನ್ಯಾಯ ಕೊಡಿಸುವ ಉದ್ದೇಶದಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತಂದಿದ್ದೇವೆ: ಮೋದಿ
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವು ಈ ವರ್ಷದ ಜುಲೈನಲ್ಲಿ ಜಾರಿಗೆ ತಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಎಲ್ಲರಿಗೂ ನ್ಯಾಯ ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ತಂದಿದ್ದೇವೆ. ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ನಾವು ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು.
ಈ ವರ್ಷದ ಜುಲೈನಲ್ಲಿ ಜಾರಿಗೆ ತಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಎಲ್ಲರಿಗೂ ನ್ಯಾಯ ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ತಂದಿದ್ದೇವೆ. ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ನಾವು ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು.
ಈ ವರ್ಷದ ಜುಲೈನಲ್ಲಿ, ಮೂರು ಹೊಸ ಕ್ರಿಮಿನಲ್ ಕಾನೂನುಗಳು — ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ (BSA)ಜಾರಿಗೆ ತರಲಾಗಿದೆ. ಕೆಲಸ ಮಾಡುವ ಮಹಿಳೆಯರಿಗೆ, ಹೆರಿಗೆ ರಜೆಯನ್ನು 12 ವಾರಗಳಿಂದ 26 ವಾರಗಳಿಗೆ ಹೆಚ್ಚಿಸಲಾಗಿದೆ.
ನಾವು ಮಹಿಳೆಯರನ್ನು ಗೌರವಿಸುವುದು ಮಾತ್ರವಲ್ಲ ಹೆಣ್ಣುಮಕ್ಕಳ ವಿಚಾರದಲ್ಲಿ ಸೂಕ್ಷ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ತನ್ನ ಮಗುವನ್ನು ಗುಣಮಟ್ಟದ ನಾಗರಿಕನನ್ನಾಗಿ ಮಾಡಲು ತಾಯಿಯ ಅವಶ್ಯಕತೆಗಳಿಗೆ ಅಡ್ಡಿಯಾಗುವುದಿಲ್ಲ ಎಂದರು.
ಮತ್ತಷ್ಟು ಓದಿ: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರಿಂದ ಸ್ವಾತಂತ್ರ್ಯ ಬಂತು, ನೀವು ದೇಶಕ್ಕಾಗಿ ಬದುಕಿ, ಸಮೃದ್ಧಿ ಬರುತ್ತದೆ: ಮೋದಿ
ಲೆಕ್ಕವಿಲ್ಲದಷ್ಟು ಸವಾಲುಗಳಿವೆ. ಒಳಗೆ ಸವಾಲುಗಳಿವೆ, ಹೊರಗೆಯೂ ಸವಾಲುಗಳಿವೆ. ನಾವು ಬಲಶಾಲಿಯಾದಂತೆ, ಗಮನ ಹೆಚ್ಚಾದಂತೆ ಸವಾಲುಗಳೂ ಹೆಚ್ಚುತ್ತಿವೆ. ಅಂತಹ ಶಕ್ತಿಗಳಿಗೆ ನಾನು ಹೇಳಲು ಬಯಸುತ್ತೇನೆ – ಭಾರತದ ಅಭಿವೃದ್ಧಿಯು ಯಾರಿಗೂ ತೊಂದರೆ ತರುವುದಿಲ್ಲ, ಬುದ್ಧನ ಆದೇಶ ಪಾಲಿಸುತ್ತೇವೆ.
ಯುದ್ಧ ನಮ್ಮ ಮಾರ್ಗವಲ್ಲ,ಆದ್ದರಿಂದ ಭಾರತದ ಪ್ರಗತಿಯ ಬಗ್ಗೆ ಜಗತ್ತು ಚಿಂತಿಸಬೇಕಾಗಿಲ್ಲ,ನೀವು ಭಾರತದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು, ಭಾರತದ ಸಾವಿರಾರು ವರ್ಷಗಳ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು, ನಮ್ಮನ್ನು ಬಿಕ್ಕಟ್ಟು ಎಂದು ಪರಿಗಣಿಸಬೇಡಿ ಎಂದಿದ್ದಾರೆ.
ಸ್ವಾತಂತ್ರ್ಯ ದಿನದ ವಿಶೇಷ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ