ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ: ಮೋದಿ

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಈ ವಿಚಾರವನ್ನು ಉಲ್ಲೇಖಿಸಿದರು.

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ: ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Aug 15, 2024 | 10:56 AM

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಈ ವಿಚಾರವನ್ನು ಉಲ್ಲೇಖಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವನ್ನು ಒತ್ತಿ ಹೇಳಿದ ಅವರು, ಆಗಾಗ ಚುನಾವಣೆಗಳು ನಡೆಯುತ್ತಿದ್ದರೆ ಅದು ದೇಶದ ಅಭಿವೃದ್ಧಿ ಹಾಗೂ ಪ್ರಗತಿಯನ್ನು ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದರು. ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುವುದರಿಂದ ಯಾವುದೇ ಅಭಿವೃದ್ಧಿ ಯೋಜನೆಯನ್ನು ಚುನಾವಣೆಯೊಂದಿಗೆ ಜೋಡಿಸುವುದು ಇಂದು ರೂಢಿಯಾಗಿದೆ.

ಈ ಕುರಿತು ದೇಶಾದ್ಯಂತ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ, ಒಂದು ರಾಷ್ಟ್ರ, ಒಂದು ಚುನಾವಣೆ ಗುರಿಯನ್ನು ಸಾಧಿಸಲು ಎಲ್ಲರೂ ಒಗ್ಗೂಡಬೇಕೆಂದು ಪ್ರಧಾನಿ ಮೋದಿ ಒತ್ತಾಯಿಸಿದರು. ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ರಾಜಕೀಯ ಸ್ಥಿರತೆ ಮತ್ತು ಆಡಳಿತಾತ್ಮಕ ಪರಿಣಾಮಕಾರಿತ್ವವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಮತ್ತಷ್ಟು ಓದಿ: Independence Day: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರಿಂದ ಸ್ವಾತಂತ್ರ್ಯ ಬಂತು, ನೀವು ದೇಶಕ್ಕಾಗಿ ಬದುಕಿ, ಸಮೃದ್ಧಿ ಬರುತ್ತದೆ: ಮೋದಿ

-2047 ರ ವೇಳೆಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ನಾನು ಹಗಲಿರುಳು ಶ್ರಮಿಸಲು ಬದ್ಧನಾಗಿದ್ದೇನೆ. -ಸ್ವಜನಪಕ್ಷಪಾತ, ಜಾತೀಯತೆ ಸಮಾಜಕ್ಕೆ ಹಾನಿ; ಇವುಗಳನ್ನು ರಾಜಕೀಯದಿಂದ ದೂರವಿಡಬೇಕು -ಜನಸಾಮಾನ್ಯರನ್ನು ಲೂಟಿ ಮಾಡುವ ಸಂಪ್ರದಾಯವನ್ನು ನಿಲ್ಲಿಸಲು ಭ್ರಷ್ಟರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸಬೇಕು. -ದೇಶದ ಒಳಗೆ ಮತ್ತು ಹೊರಗೆ ಸವಾಲುಗಳಿವೆ; ನಾವು ಹೆಚ್ಚು ಶಕ್ತಿಶಾಲಿಯಾಗುತ್ತಿದ್ದಂತೆ, ಸವಾಲುಗಳು ಹೆಚ್ಚಾಗುತ್ತವೆ. -2036 ರ ಒಲಿಂಪಿಕ್ಸ್ ದೇಶದಲ್ಲಿ ನಡೆಸುವುದು ಭಾರತದ ಕನಸಾಗಿದೆ , ಅದಕ್ಕಾಗಿ ನಾವು ತಯಾರಿ ನಡೆಸುತ್ತಿದ್ದೇವೆ. -ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಬೇಕಾಗಿಲ್ಲದಂತಹ ಶಿಕ್ಷಣ ವ್ಯವಸ್ಥೆಯನ್ನು ದೇಶದಲ್ಲಿ ನಿರ್ಮಿಸಲು ನಾವು ಬಯಸುತ್ತೇವೆ.

ಸ್ವಾತಂತ್ರ್ಯ ದಿನದ ವಿಶೇಷ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್
ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್