Har Ghar Tiranga: ಹರ್​ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

|

Updated on: Aug 09, 2024 | 3:14 PM

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಎಕ್ಸ್​ ಖಾತೆಯ ಪ್ರೊಫೈಲ್ ಫೋಟೊವನ್ನು ತ್ರಿವಣಕ್ಕೆ ಬದಲಾಯಿಸುವಂತೆ ಕೇಳಿಕೊಂಡಿದ್ದಾರೆ.ನಾನು ನನ್ನ ಪ್ರೊಫೈಲ್ ಫೋಟೋವನ್ನು ಬದಲಾಯಿಸುತ್ತಿದ್ದೇನೆ ಮತ್ತು ಹಾಗೆ ಮಾಡುವ ಮೂಲಕ ನಮ್ಮ ತ್ರಿವರ್ಣ ಧ್ವಜವನ್ನು ಗೌರವಿಸಲು ನನ್ನೊಂದಿಗೆ ನೀವೂ ಕೂಡ ಕೈಜೋಡಿಸಿ ಎಂದು ಹೇಳಿದ್ದಾರೆ.

Har Ghar Tiranga: ಹರ್​ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ
ನರೇಂದ್ರ ಮೋದಿ
Follow us on

ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು : ಹರ್​ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​ ಎಕ್ಸ್​​ನಲ್ಲಿ ತಮ್ಮ ಪ್ರೊಫೈಲ್ ಚಿತ್ರವನ್ನು ತ್ರಿವರ್ಣಕ್ಕೆ ಬದಲಾಯಿಸಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ದೇಶವಾಸಿಗಳಿಗೆ ಕರೆ ನೀಡಿದರು.

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದೆ, ಮತ್ತೊಮ್ಮೆ ಹರ್ ಘರ್ ತಿರಂಗಾ ಅಭಿಯಾನವನ್ನು ಸ್ಮರಣೀಯ ಜನಾಂದೋಲನವನ್ನಾಗಿ ಮಾಡೋಣ ಎಕ್ಸ್​ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಬರೆದಿದ್ದಾರೆ. ನಾನು ನನ್ನ ಪ್ರೊಫೈಲ್ ಫೋಟೋವನ್ನು ಬದಲಾಯಿಸುತ್ತಿದ್ದೇನೆ ಮತ್ತು ಹಾಗೆ ಮಾಡುವ ಮೂಲಕ ನಮ್ಮ ತ್ರಿವರ್ಣ ಧ್ವಜವನ್ನು ಗೌರವಿಸಲು ನನ್ನೊಂದಿಗೆ ನೀವೂ ಕೂಡ ಕೈಜೋಡಿಸಿ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ಮಹಾ ಹಬ್ಬವನ್ನು ವಿಶೇಷವಾಗಿಸಲು ಕೇಂದ್ರ ಸರ್ಕಾರವು ಆಗಸ್ಟ್ 9 ರಿಂದ ದೇಶದಾದ್ಯಂತ ಪ್ರತಿ ಮನೆಗಳಲ್ಲಿ ತ್ರಿವರ್ಣ ಅಭಿಯಾನವನ್ನು ನಡೆಸುತ್ತದೆ. ಇದು ಆಗಸ್ಟ್ 15 ರಂದು ಕೊನೆಗೊಳ್ಳುತ್ತದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ದೇಶಾದ್ಯಂತ ರ್ಯಾಲಿಗಳನ್ನು ಕೈಗೊಳ್ಳುವಂತೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದ ಕಾರ್ಯಕರ್ತರನ್ನು ಕೇಳಿದೆ. ಈ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ.

ಮತ್ತಷ್ಟು ಓದಿ:ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ಬಿಜೆಪಿಯಿಂದ ಭಾರತದಾದ್ಯಂತ ‘ಹರ್ ಘರ್ ತಿರಂಗ’ ಅಭಿಯಾನ

ಏನಿದು ಹರ್ ಘರ್ ತಿರಂಗಾ ಅಭಿಯಾನ?
ಈ ಅಭಿಯಾನವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಅಡಿಯಲ್ಲಿ ಜುಲೈ 22, 2022 ರಂದು ಪ್ರಾರಂಭಿಸಲಾಯಿತು.  ರಂದು, ಪ್ರಧಾನಿ ಮೋದಿ ಅವರೇ ದೇಶದ ಜನರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಮನವಿ ಮಾಡಿದ್ದರು. ಅಂದಿನಿಂದ ಈ ಅಭಿಯಾನವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ಅಭಿಯಾನವನ್ನು ಘೋಷಿಸಿದ ಪ್ರಧಾನಿ, ಈ ಅಭಿಯಾನವು ತ್ರಿವರ್ಣ ಧ್ವಜದೊಂದಿಗೆ ನಮ್ಮ ಸಂಪರ್ಕವನ್ನು ಇನ್ನಷ್ಟು ಗಾಢಗೊಳಿಸುತ್ತದೆ ಎಂದು ಹೇಳಿದ್ದರು. 1947ರ ಜುಲೈ 22ರಂದು ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜವಾಗಿ ಅಂಗೀಕರಿಸಲಾಯಿತು ಎಂದು ಅವರು ಉಲ್ಲೇಖಿಸಿದ್ದರು.

ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದವರಿಗೆ ಪ್ರಧಾನಿ ಮೋದಿ ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಇದೊಂದು ಐತಿಹಾಸಿಕ ಕ್ಷಣವಾಗಿದೆ ಎಂದು ಹೇಳಿದರು.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ದೇಶದಲ್ಲಿ ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾಯಿತು ಮತ್ತು ಈ ಚಳುವಳಿ ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಚಳವಳಿ ಪ್ರಾರಂಭವಾದ ಐದು ವರ್ಷಗಳ ನಂತರ 15 ಆಗಸ್ಟ್ 1947 ರಂದು ದೇಶವು ಸ್ವತಂತ್ರವಾಯಿತು. ಕ್ವಿಟ್ ಇಂಡಿಯಾ ಚಳವಳಿಯ 82 ನೇ ವಾರ್ಷಿಕೋತ್ಸವದ ‘ಎಕ್ಸ್’ ಪೋಸ್ಟ್‌ನಲ್ಲಿ ಪಿಎಂ ಮೋದಿ, ಬಾಪು ಅವರ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ನಮನಗಳು ಎಂದು ಹೇಳಿದ್ದಾರೆ. ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಇದೊಂದು ಐತಿಹಾಸಿಕ ಕ್ಷಣ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 11:31 am, Fri, 9 August 24