Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಉಗ್ರರ ಹತ್ಯೆಗೂ ಮೋದಿಗೂ ಸಂಬಂಧವಿದೆ ಎಂದ ಬ್ರಿಟಿಷ್ ಪತ್ರಿಕೆ, ಭಾರತ ಪ್ರತಿಕ್ರಿಯಿಸಿದ್ದು ಹೀಗೆ

ಭಾರತ ಈಗ ಪ್ರತಿಯೊಂದು ವಿಚಾರದಲ್ಲೂ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಅದು ಸರ್ಜಿಕಲ್ ಸ್ಟ್ರೈಕ್ ಆಗಿರಲಿ ಅಥವಾ ಅಂತಾರಾಷ್ಟ್ರೀಯ ವೇದಿಕೆಯಾಗಿರಲಿ, ಪಾಕಿಸ್ತಾನಕ್ಕೆ ಮುಕ್ತವಾಗಿ ಪ್ರತಿಕ್ರಿಯಿಸಲಾಗುತ್ತಿದೆ. ಇದೀಗ ಬ್ರಿಟಿಷ್ ಪತ್ರಿಕೆ ದಿ ಗಾರ್ಡಿಯನ್ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಉಗ್ರರ ಹತ್ಯೆಯ ಹಿಂದೆ ಮೋದಿಯವರ ಕೈವಾಡವಿದೆ ಎಂದು ಆರೋಪಿಸಿದೆ.

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಉಗ್ರರ ಹತ್ಯೆಗೂ ಮೋದಿಗೂ ಸಂಬಂಧವಿದೆ ಎಂದ ಬ್ರಿಟಿಷ್ ಪತ್ರಿಕೆ, ಭಾರತ ಪ್ರತಿಕ್ರಿಯಿಸಿದ್ದು ಹೀಗೆ
Follow us
ನಯನಾ ರಾಜೀವ್
|

Updated on: Apr 05, 2024 | 10:22 AM

ಕಳೆದ ಕೆಲವು ವರ್ಷಗಳಿಂದ ಪಾಕಿಸ್ತಾನ(Pakistan)ದಲ್ಲಿ ಅಡಗಿರುವ ಭಾರತದ ಶತ್ರುಗಳನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರ ಹಿಂದೆ ಭಾರತದ ಗುಪ್ತಚರ ಸಂಸ್ಥೆ ‘ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್’ (RAW) ಕೈವಾಡವಿದೆ ಎಂದು ಬ್ರಿಟಿಷ್ ಪತ್ರಿಕೆ ದಿ ಗಾರ್ಡಿಯನ್ ತನ್ನ ವರದಿಯಲ್ಲಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ವರದಿ ಸಲ್ಲಿಸುವ ರಾ, ಅವರ ಸೂಚನೆಯ ಮೇರೆಗೆ ಪಾಕಿಸ್ತಾನದಲ್ಲಿ ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳನ್ನು ಕೊಲ್ಲುತ್ತಿದೆ ಎಂದು ಹೇಳಿದೆ. ಇದೀಗ ಭಾರತವೂ ಇದಕ್ಕೆ ಪ್ರತ್ಯುತ್ತರ ನೀಡಿದೆ.

ಭಾರತದ ಪ್ರತಿಕ್ರಿಯೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಹತ್ಯೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ, ಭಾರತದ ವಿದೇಶಾಂಗ ಸಚಿವಾಲಯವು ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ನೆರೆಯ ದೇಶದಲ್ಲಿ ನಡೆಯುತ್ತಿರುವ ಕೊಲೆಗಳಲ್ಲಿ ಭಾರತದ ಕೈವಾಡವಿದೆ ಎಂಬ ಹೇಳಿಕೆ ಸುಳ್ಳು ಎಂದು ಸಚಿವಾಲಯ ಹೇಳಿದೆ. ಈ ವಿಚಾರದಲ್ಲಿ ದುರುದ್ದೇಶಪೂರಿತವಾಗಿ ಭಾರತದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್​ ಜೈಶಂಕರ್ ಮಾತನಾಡಿ ಭಾರತ ಎಂದೂ ಉದ್ದೇಶಿತ ಹತ್ಯೆಗಳನ್ನು ನಡೆಸುವುದಿಲ್ಲ ಇದು ಭಾರತ ಸರ್ಕಾರದ ನೀತಿಯಲ್ಲ ಎಂದು ಹೇಳಿದ್ದಾರೆ.

ಹತ್ಯೆಯಲ್ಲಿ ಭಾರತದ ಕೈವಾಡ: ಪಾಕಿಸ್ತಾನಿ ಅಧಿಕಾರಿಗಳು ಪಾಕಿಸ್ತಾನದ ಎರಡು ಗುಪ್ತಚರ ಸಂಸ್ಥೆಗಳ ಹಿರಿಯ ಅಧಿಕಾರಿಗಳು ತಮ್ಮ ದೇಶದಲ್ಲಿ 2020 ರಿಂದ ನಡೆದ ಸುಮಾರು 20 ಕೊಲೆಗಳಲ್ಲಿ ಭಾರತದ ಕೈವಾಡವಿದೆ ಎಂದು ಹೇಳಿದ್ದಾರೆ. ಏಳು ಪ್ರಕರಣಗಳನ್ನು ತನಿಖೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. 2023ರಲ್ಲಿ ಸಂಖ್ಯೆ ಅತ್ಯಧಿಕವಾಗಿದೆ ಎಂದು ಹೇಳಿದ್ದಾರೆ. ಅಪರಿಚಿತ ವ್ಯಕ್ತಿಗಳು ಸಮೀಪದಿಂದ ಗುಂಡು ಹಾರಿಸಿದ್ದರಿಂದ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ.

ಯುಎಇಯಲ್ಲಿ ಕುಳಿತು ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ ಪಾಕಿಸ್ತಾನಿ ತನಿಖಾಧಿಕಾರಿಗಳ ಪ್ರಕಾರ, ಈ ಸಾವುಗಳು ಹೆಚ್ಚಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿಂದ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಗುಪ್ತಚರ ಸ್ಲೀಪರ್-ಸೆಲ್‌ಗಳ ಮೂಲಕ ನಡೆಸಲ್ಪಟ್ಟಿವೆ. ಈ ಸ್ಲೀಪರ್ ಸೆಲ್‌ಗಳು ಪಾಕಿಸ್ತಾನದ ಅಪರಾಧಿಗಳಿಗೆ ತಮ್ಮ ಶತ್ರುಗಳನ್ನು ತೊಡೆದುಹಾಕಲು ಲಕ್ಷಗಟ್ಟಲೆ ರೂಪಾಯಿಗಳನ್ನು ನೀಡಿದ್ದಾರೆ. ಏಜೆಂಟರು ಜಿಹಾದಿಗಳನ್ನು ಸಹ ನೇಮಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಭಾರತೀಯ ಏಜೆಂಟರು ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಕೊಲ್ಲುತ್ತಿಲ್ಲ, ಆದರೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕರನ್ನು ವಿದೇಶಗಳಲ್ಲಿಯೂ ಕೊಲ್ಲುತ್ತಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಸುದ್ದಿಯಲ್ಲಿ ಹೇಳಲಾಗಿದೆ. ಕೆನಡಾ ಮತ್ತು ಅಮೆರಿಕ ಕೂಡ ಇದನ್ನು ಒಪ್ಪಿಕೊಂಡಿವೆ. ಇದಲ್ಲದೇ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಭಾರತ ಯತ್ನಿಸಿದ ಆರೋಪವೂ ಕೇಳಿಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ