AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 105 ಕೋಟಿ ಡೋಸ್​​ಗೂ ಹೆಚ್ಚು ಕೊವಿಡ್​ 19 ಲಸಿಕೆ ನೀಡಿಕೆ; ಆರೋಗ್ಯ ಸಚಿವರಿಂದ ಟ್ವೀಟ್​​

ಭಾರತ ಅಕ್ಟೋಬರ್​ 21ರಂದು 100 ಕೋಟಿ ಡೋಸ್​ ಲಸಿಕೆ ನೀಡಿಕೆಯ ದಾಖಲೆ ನಿರ್ಮಿಸಿದೆ. ಅಂದು ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಸೇರಿ ಅನೇಕ ಗಣ್ಯರು ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದರು.

ಭಾರತದಲ್ಲಿ 105 ಕೋಟಿ ಡೋಸ್​​ಗೂ ಹೆಚ್ಚು ಕೊವಿಡ್​ 19 ಲಸಿಕೆ ನೀಡಿಕೆ; ಆರೋಗ್ಯ ಸಚಿವರಿಂದ ಟ್ವೀಟ್​​
ಕೊರೊನಾ ಲಸಿಕೆ ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 30, 2021 | 9:44 AM

Share

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ (Covid 19 Vaccine Drive) ವೇಗದಿಂದ ಸಾಗುತ್ತಿದೆ. ಈಗಾಗಲೇ 100 ಕೋಟಿ ಡೋಸ್​ ನೀಡಿಕೆ ಮುಗಿದು ದಾಖಲೆ ಸೃಷ್ಟಿಯಾಗಿದೆ. ಶುಕ್ರವಾರ ಅಂದರೆ ಅಕ್ಟೋಬರ್​ 29ರ ವೇಳೆಗೆ 105 ಕೋಟಿಗೂ ಹೆಚ್ಚು ಡೋಸ್​ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  ಶುಕ್ರವಾರ ಒಂದೇ ದಿನ ಸಂಜೆ 7ಗಂಟೆವರೆಗೆ 51 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ನೀಡಲಾಗಿತ್ತು ಎಂದು ಹೇಳಿದೆ. 

ಟ್ವೀಟ್​ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಇಲ್ಲಿಯವರೆಗೆ 105 ಕೋಟಿ ಡೋಸ್​ ಲಸಿಕೆ ನೀಡಲಾಗಿದೆ. ಇದು ವಿಜಯ.. ಭಾರತದ ಜನರಿಗೆ ಅಭಿನಂದನೆಗಳು. ಕೊವಿಡ್​ 19 ಲಸಿಕೆ ಅಭಿಯಾನ ಹೊಸ ದಾಖಲೆಗಳನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್​​ ವಿರುದ್ಧ ಲಸಿಕೆ ಅಭಿಯಾನ ಜನವರಿ 16ರಂದು ಶುರುವಾಗಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್​ಗೆ ನೀಡಲಾಗಿತ್ತು. ಎರಡನೇ ಹಂತದ ಕೊರೊನಾ ಲಸಿಕೆ ನೀಡಿಕೆ ಮಾರ್ಚ್​ 1ರಿಂದ ಪ್ರಾರಂಭವಾಗಿ, 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟು, ಬೇರೆ ಕೆಲವು ರೋಗಗಳಿಂದ ಬಳಲುತ್ತಿರುವವರಿಗೆ ನೀಡಲಾಯಿತು. ಹಾಗೇ, ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಲು ಶುರು ಮಾಡಲಾಯಿತು. ಅದಾದ ನಂತರ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಪ್ರಾರಂಭ ಮಾಡಲಾಯಿತು.

ಭಾರತ ಅಕ್ಟೋಬರ್​ 21ರಂದು 100 ಕೋಟಿ ಡೋಸ್​ ಲಸಿಕೆ ನೀಡಿಕೆಯ ದಾಖಲೆ ನಿರ್ಮಿಸಿದೆ. ಅಂದು ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಸೇರಿ ಅನೇಕ ಗಣ್ಯರು ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದರು. ದೇಶದ ಜನರ ಸಹಕಾರಕ್ಕೆ ಕೃತಜ್ಞತೆಯನ್ನೂ ಹೇಳಿದ್ದರು. ಭಾರತದ ಲಸಿಕೆ ಅಭಿಯಾನದ ಸಾಧನೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಶತಕೋಟಿ ಡೋಸ್​ ಲಸಿಕೆ ನೀಡಿದ ಎರಡನೇ ದೇಶ ಭಾರತ. ಅದರ ಬೆನ್ನಲ್ಲೇ ಇಲ್ಲಿ ಲಸಿಕೆ ಅಭಿಯಾನವನ್ನು ಇನ್ನಷ್ಟು ವೇಗಗೊಳಿಸಲಾಗಿದೆ.

ಇದನ್ನೂ ಓದಿ: Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?

ಜಿಮ್​ನಲ್ಲಿ ಪುನೀತ್ ರಾಜ್​ಕುಮಾರ್ ವರ್ಕೌಟ್​​: ಹೇಗಿರುತ್ತಿತ್ತು ಗೊತ್ತಾ ಅಪ್ಪು ಕಸರತ್ತು​? ಇಲ್ಲಿದೆ ವಿಡಿಯೋ​

Published On - 9:40 am, Sat, 30 October 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್