AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2030ರ ಹೊತ್ತಿಗೆ ಭಾರತದಲ್ಲಿ 6G ನೆಟ್​ವರ್ಕ್​: ಪ್ರಧಾನಿ ನರೇಂದ್ರ ಮೋದಿ

PM Narendra Modi: ಈ ದಶಕದ ಅಂತ್ಯದೊಳಗೆ ಭಾರತದಲ್ಲಿ 6ಜಿ ನೆಟ್​ವರ್ಕ್​ ಸೇವೆ ಒದಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

2030ರ ಹೊತ್ತಿಗೆ ಭಾರತದಲ್ಲಿ 6G ನೆಟ್​ವರ್ಕ್​: ಪ್ರಧಾನಿ ನರೇಂದ್ರ ಮೋದಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 17, 2022 | 2:55 PM

ದೆಹಲಿ: ಭಾರತದಲ್ಲಿ 6G ನೆಟ್​ವರ್ಕ್​ಗೆ (6G Network) ಚಾಲನೆ ನೀಡಲು ಸಿದ್ಧತೆ ಆರಂಭವಾಗಿದೆ. ಅತ್ಯಂತ ವೇಗದ ಇಂಟರ್ನೆಟ್ ಸಂಪರ್ಕ ಒದಗಿಸುವ 6ಜಿ ನೆಟ್​ವರ್ಕ್​ ಸೇವೆಯನ್ನು ಈ ದಶಕದ ಅಂತ್ಯದೊಳಗೆ (2030ರ ಒಳಗೆ) ಒದಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು. ಭಾರತದಲ್ಲಿ ಪ್ರಸ್ತುತ 3ಜಿ, 4ಜಿ ಸೇವೆಗಳು ಸಿಗುತ್ತಿವೆ. ಕೆಲವೇ ತಿಂಗಳುಗಳಲ್ಲಿ 5ಜಿ ಸೇವೆ ಒದಗಿಸಲು ಹಲವು ಕಂಪನಿಗಳು ಸಿದ್ಧತೆ ಪೂರ್ಣಗೊಳಿಸಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗುವಂತೆ ಮಾಡಲು ಕೊನೆ ಹಂತದ ಕೆಲಸಗಳನ್ನು ನಿರ್ವಹಿಸುತ್ತಿವೆ.

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (Telephone Regulatory Authority of India – TRAI) ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 5ಜಿ ನೆಟ್​ವರ್ಕ್​ ಸಾರ್ವಜನಿಕರಿಗೆ ಲಭ್ಯವಾದರೆ ದೇಶದ ಆರ್ಥಿಕತೆಗೆ 450 ಶತಕೋಟಿ ಅಮೆರಿಕನ್ ಡಾಲರ್ ಮೊತ್ತದಷ್ಟು ಸಂಪನ್ಮೂಲ ಹರಿದುಬರಲಿದೆ. 5ಜಿ ನೆಟ್​ವರ್ಕ್​ನಿಂದ ಕೇವಲ ಇಂಟರ್ನೆಟ್​ ವೇಗ ಹೆಚ್ಚಾಗುವುದಷ್ಟೇ ಅಲ್ಲ, ಸಾಕಷ್ಟು ಹೊಸ ಉದ್ಯೋಗಾವಕಾಶಗಳೂ ಸಿಗುತ್ತವೆ’ ಎಂದು ಮೋದಿ ಹೇಳಿದರು. ಆಡಳಿತದಲ್ಲಿಯೂ ಸಕಾರಾತ್ಮಕ ಬದಲಾವಣೆ ಸಾಧ್ಯವಾಗುತ್ತದೆ. ಸಾಮಾನ್ಯ ಜನರ ಬದುಕು, ವ್ಯಾಪಾರ ಮತ್ತು ವ್ಯವಹಾರಗಳು ಸುಗಮವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕೃಷಿ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಮತ್ತು ಸರಕು ಸಾಗಣೆ ವ್ಯವಸ್ಥೆ ಸುಧಾರಿಸಲಿದೆ. 21ನೇ ಶತಮಾನದ ಅಗತ್ಯಗಳಿಗೆ ತಕ್ಕಂತೆ ಭಾರತದಲ್ಲಿ ಎಲ್ಲ ಅತ್ಯಾಧುನಿಕ ಮೂಲಸೌಕರ್ಯಗಳು ಲಭ್ಯವಾಗಲಿವೆ ಎಂದು ಹೇಳಿದರು. ಈ ದಶಕದ ಅಂತ್ಯದಲ್ಲಿ 6ಜಿ ಸಂಪರ್ಕ ವ್ಯವಸ್ಥೆ ಸಾಕಾರಗೊಳ್ಳಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲು ಕಾರ್ಯಪಡೆಯೊಂದನ್ನು ರಚಿಸಲಾಗುವುದು ಎಂದು ಹೇಳಿದರು. ಯುಪಿಎ ಕಾಲದಲ್ಲಿದ್ದ 2ಜಿ ಯುಗವು ನೀತಿ ನಿರೂಪಣೆಯು ನಿಧಾನಗತಿಯಲ್ಲಿ ಸಾಗುತ್ತಿತ್ತು. ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದು ವಿಶ್ಲೇಷಿಸಿದರು.

ತಮ್ಮ ಆಡಳಿತ ಅವಧಿಯಲ್ಲಿ ದೇಶವು ಪಾರದರ್ಶಕವಾಗಿ 4ಜಿ ತಂತ್ರಜ್ಞಾನ ಅಳವಡಿಸಿಕೊಂಡಿತು. ಇದೀಗ 5ಜಿ ಕಡೆಗೆ ಹೊರಳಿಕೊಳ್ಳುತ್ತಿದೆ. ದೇಶದ ಟೆಲಿಡೆನ್​ಸಿಟಿ ಮತ್ತು ಇಂಟರ್ನೆಟ್ ಬಳಕೆದಾರರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ದೇಶದಲ್ಲಿ ಮೊಬೈಲ್ ಉತ್ಪಾದನೆ ಘಟಕಗಳು ಸುಮಾರು 200 ಇವೆ. ಭಾರತವು ಈಗ ವಿಶ್ವದಲ್ಲಿಯೇ ಅತಿಹೆಚ್ಚು ಪ್ರಮಾಣದಲ್ಲಿ ಮೊಬೈಲ್ ಉತ್ಪಾದಿಸುತ್ತಿದೆ ಎಂದು ಹೇಳಿದರು.

ಭಾರತದಲ್ಲಿ ಆರೋಗ್ಯಕರ ಸ್ಪರ್ಧೆಗೆ ನಾವು ಮುಕ್ತ ಅವಕಾಶ ನೀಡಿದ್ದೇವೆ. ಹೀಗಾಗಿಯೇ ಭಾರತದಲ್ಲಿ ವಿಶ್ವದಲ್ಲಿಯೇ ಅತ್ಯಂತ ಕಡಿಮೆ ದರದಲ್ಲಿ ಇಂಟರ್ನೆಟ್ ಸಿಗುತ್ತಿದೆ. 5ಜಿ ಎನ್ನುವುದು ಟಲಿಕಾಂ ವಲಯಕ್ಕೆ ಅತ್ಯಂತ ಪ್ರಮುಖ ಮೆಟ್ಟಿಲಾಗಿದೆ. ಭಾರತದ ಸ್ವಾವಲಂಬನೆಗೂ ಇದು ಅತ್ಯಗತ್ಯ ಎಂದು ಪ್ರಧಾನಿ ಹೇಳಿದರು.

ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Tue, 17 May 22

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್