ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸನಾತನ ಧರ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ನರೇಂದ್ರ ಮೋದಿ

ಪ್ರತಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ವು ಸನಾತನ ಧರ್ಮ(Sanatana Dharma)ವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಪತ್ರಿಪಕ್ಷಗಳ ಒಕ್ಕೂಟವು ಸನಾತನ ಧರ್ಮ, ದೇಶದ ಮೂಲ ಸಂಸ್ಕೃತಿ ಹಾಗೂ ನಾಗರಿಕರಿಗೆ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾಗೆ ಹೋಲಿಕೆ ಮಾಡಿದ್ದರು.

ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸನಾತನ ಧರ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ನರೇಂದ್ರ ಮೋದಿ
ನರೇಂದ್ರ ಮೋದಿImage Credit source: India Today
Follow us
ನಯನಾ ರಾಜೀವ್
|

Updated on:Sep 14, 2023 | 1:16 PM

ಸಾಗರ್, ಸೆಪ್ಟೆಂಬರ್ 14: ಪ್ರತಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ವು ಸನಾತನ ಧರ್ಮ(Sanatana Dharma)ವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಪತ್ರಿಪಕ್ಷಗಳ ಒಕ್ಕೂಟವು ಸನಾತನ ಧರ್ಮ, ದೇಶದ ಮೂಲ ಸಂಸ್ಕೃತಿ ಹಾಗೂ ನಾಗರಿಕರಿಗೆ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾಗೆ ಹೋಲಿಕೆ ಮಾಡಿದ್ದರು.

ಹೇಗೆ ಈ ರೋಗಗಳ ವಿರುದ್ಧ ಹೋರಾಡಿದರೆ ಯಾವುದೇ ಪ್ರಯೋಜನವಿಲ್ಲವೋ, ಅದನ್ನು ಬುಡದಿಂದಲೇ ನಿರ್ಮೂಲನೆ ಮಾಡುವ ಅಗತ್ಯವಿದೆಯೋ ಹಾಗೆಯೇ ಸನಾತನ ಧರ್ಮವನ್ನು ಕೂಡ ನಿರ್ಮೂಲನೆ ಮಾಬೇಕು ಎಂಬ ಹೇಳಿಕೆ ವಿವಾದವನ್ನು ಹುಟ್ಟುಹಾಕಿದೆ.

ಈ ಹೇಳಿಕೆಗೆ ಸರಿಯಾದ ಪ್ರತಿಕ್ರಿಯೆ ನೀಡುವಂತೆ ಪ್ರಧಾನಿ ಮೋದಿ ತನ್ನ ಸಚಿವರಿಗೆ ಒತ್ತಾಯಿಸಿದ್ದಾರೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳ ‘ಘಮಂಡಿಯಾ’ ಮೈತ್ರಿಯು ಸನಾತನ ಧರ್ಮವನ್ನು ನಾಶಮಾಡಲು ಬಯಸುತ್ತಿದೆ ಎಂದು ಹೇಳಿದರು.

ಮತ್ತಷ್ಟು ಓದಿ: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದ: ತಕ್ಕ ಉತ್ತರ ನೀಡಬೇಕು ಎಂದ ನರೇಂದ್ರ ಮೋದಿ

ಕೆಲವು ಗುಂಪುಗಳು ದೇಶ ಮತ್ತು ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿವೆ, ಅವು ಈಗ ಒಟ್ಟಾಗಿ ಇಂಡಿಯಾ ಎಂಬ ಕೂಟವನ್ನು ರಚಿಸಿದ್ದಾರೆ. ಭಾರತದ ಸಂಸ್ಕೃತಿಯ ಮೇಲೆ ದಾಳಿ ಮಾಡಲು ಗುಪ್ತ ಕಾರ್ಯಸೂಚಿಯನ್ನು ಸಹ ಸಿದ್ಧಪಡಿಸಿದ್ದಾರೆ.

ಇಂಡಿಯಾ ಮೈತ್ರಿಯು ಸನಾತನ ಧರ್ಮವನ್ನು ಕೊನೆಗೊಳಿಸುವ ಉದ್ದೇಶದಿಂದಲೇ ಹುಟ್ಟಿಕೊಂಡಿದೆ ಎಂದು ಮೋದಿ ದಾಳಿ ನಡೆಸಿದ್ದಾರೆ. ಸನಾತನ ಧರ್ಮದ ನಿರ್ಮೂಲನೆ ಎಂಬ ಕೂಗು ಎಲ್ಲೆ ಮೀರಿದ್ದು, ಅದನ್ನು ವಿರೋಧಿಸದೆ ಇರಬಾರದು.

ಇಂದು ಅವರು ಬಹಿರಂಗವಾಗಿ ಸನಾತನವನ್ನು ಗುರಿಯಾಗಿಸಲು ಪ್ರಾರಂಭಿಸಿದ್ದಾರೆ, ನಾಳೆ ಅವರು ನಮ್ಮ ಮೇಲೆ ದಾಳಿಯನ್ನು ಹೆಚ್ಚಿಸುತ್ತಾರೆ. ದೇಶಾದ್ಯಂತ ಇರುವ ಎಲ್ಲಾ ಸನಾತನಿಗಳು ಮತ್ತು ನಮ್ಮ ದೇಶವನ್ನು ಪ್ರೀತಿಸುವ ಜನರು ಎಚ್ಚರವಾಗಿರಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:14 pm, Thu, 14 September 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್