ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಒಪ್ಪಂದ

No Cross Border Firing in Kashmir: ಎರಡೂ ರಾಷ್ಟ್ರಗಳು ಗಡಿ ನಿಯಂತ್ರಣ ರೇಖೆ ಮತ್ತು ಇತರ ವಲಯಗಳಲ್ಲಿ ಕದನ ವಿರಾಮವನ್ನು ಪಾಲಿಸಲು ಒಪ್ಪಿಕೊಂಡಿವೆ. ಈ ನಿಯಮ ಫೆಬ್ರವರಿ 24-25 ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ

ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಒಪ್ಪಂದ
ಭಾರತ- ಪಾಕಿಸ್ತಾನ ಧ್ವಜ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 25, 2021 | 5:43 PM

ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ (LOC) ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಗಡಿದಾಟಿ ಗುಂಡಿನ ಚಕಮಕಿ ನಡೆಸುವುದಿಲ್ಲ ಎಂದು ಭಾರತ ಮತ್ತು ಪಾಕಿಸ್ತಾನದ ಸೇನೆಗಳು ಒಪ್ಪಿಕೊಂಡಿವೆ. ಈ ನಿರ್ಧಾರವು ಫೆಬ್ರವರಿ 24-25 ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿರುವುದಾಗಿ ಉಭಯ ಸೇನಾಪಡೆಗಳು ಹೇಳಿವೆ.

ಈ ಬಗ್ಗೆ ಜಂಟಿ ಪ್ರಕಟಣೆ ಹೊರಡಿಸಿದ ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರು, ಎರಡೂ ದೇಶದ ಅಧಿಕಾರಿಗಳು ದೂರವಾಣಿ ಹಾಟ್‌ಲೈನ್‌ನಲ್ಲಿ ಸಂಪರ್ಕಿಸಿದ್ದಾರೆ. ಯಾವುದೇ ಅನಿರೀಕ್ಷಿತ ಪರಿಸ್ಥಿತಿ ಎದುರಾದಾಗ ಈಗಾಗಲೇ ಚಾಲ್ತಿಯಲ್ಲಿರುವ ಹಾಟ್‌ಲೈನ್ ಸಂಪರ್ಕ ಮತ್ತು ಗಡಿ ಧ್ವಜ ಸಭೆಗಳ ಕಾರ್ಯವಿಧಾನಗಳನ್ನು ಬಳಸಿಕೊಳ್ಳಲಾಗುವುದು ಎಂದಿದ್ದಾರೆ.

ಹಾಟ್‌ಲೈನ್‌ ಸಂಪರ್ಕ ಬಳಸಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಯ ಮಹಾನ ನಿರ್ದೇಶಕರು ಚರ್ಚೆ ನಡೆಸಿದ್ದಾರೆ. ಎರಡೂ ರಾಷ್ಟ್ರಗಳು ಗಡಿ ನಿಯಂತ್ರಣಾ ರೇಖೆ ಮತ್ತು ಇನ್ನಿತರ ವಲಯಗಳಲ್ಲಿ ಮುಕ್ತ, ಸರಳ ಹಾಗೂ ಸೌಹಾರ್ದಯುತ ವಾತಾವರಣ ನೆಲೆಸುವಂತೆ ಮಾಡಲು ಪರಿಸ್ಥಿತಿಯ ಅವಲೋಕನ ನಡೆಸಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎರಡೂ ರಾಷ್ಟ್ರಗಳು ಗಡಿ ನಿಯಂತ್ರಣ ರೇಖೆ ಮತ್ತು ಇತರ ವಲಯಗಳಲ್ಲಿ ಕದನ ವಿರಾಮವನ್ನು ಪಾಲಿಸಲು ಒಪ್ಪಿಕೊಂಡಿವೆ. ಈ ನಿಯಮ ಫೆಬ್ರವರಿ 24-25 ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ ಎಂದು ಸೇನಾಪಡೆಯ ಜಂಟಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ನಿಯಂತ್ರಣಗಳ ನಡುವೆಯೂ ಆಗಾಗ ಗುಂಡಿನ ಚಕಮಕಿ ನಡೆಯುತ್ತಿದರೂ ಉಭಯ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ನಿರ್ದೇಶನಾಲಯದ ಅಧಿಕಾರಿಗಳ ನಡುವೆ ವಾರದಲ್ಲಿ ನಿಯಮಿತ ಸಂವಹನ ಇತ್ತೀಚಿನ ತಿಂಗಳುಗಳಲ್ಲಿ ಮುಂದುವರೆದಿದೆ. ಒಂದು ಕಡೆಯಿಂದ ನಿರ್ದಿಷ್ಟ ಮನವಿ ಇದ್ದಾಗ ಮಾತ್ರ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರು( ಡಿಜಿಎಂಒ) ಹಾಟ್‌ಲೈನ್‌ನಲ್ಲಿ ಮಾತನಾಡುತ್ತಾರೆ.  2019 ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ಮತ್ತು 2019 ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ಜಮ್ಮ ಮತ್ತು ಕಾಶ್ಮೀರಕ್ಕಿರುವ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಬಾಂಧವ್ಯ ಮತ್ತಷ್ಟು ಬಿಗಡಾಯಿಸಿತ್ತು. ಭಾರತ ಕದನ ವಿರಾಮಕ್ಕೆ ಒಪ್ಪಿದ್ದರೂ ಗಡಿ ಪ್ರದೇಶದಲ್ಲಿ ಉಗ್ರರು ನುಸುಳದಂತೆ ಕಟ್ಟೆಚ್ಚರ ವಹಿಸಿ ಕಾರ್ಯಾಚರಣೆ ಮುಂದುವರಿಯಲಿದೆ. ಗಡಿ ನಿಯಂತ್ರಣ ರೇಖೆ ಬಳಿ ಶಾಂತಿ ಸ್ಥಾಪನೆ ಮತ್ತು ಅಲ್ಲಿರುವ ಜನರು ಯಾವುದೇ ಸಂಕಷ್ಟಕ್ಕೊಳಗಾಗಬಾರದು ಎಂಬುದು ಇದರ ಆಶಯ ಎಂದು  ಹೆಸರು ಹೇಳಲಿಚ್ಚಿಸದ, ಈ ಬೆಳವಣಿಗೆಗಳ ಬಗ್ಗೆೆ ಪರಿಚಯವಿರುವ ವ್ಯಕ್ತಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಭಾರತ ಮತ್ತು ಪಾಕಿಸ್ತಾನ 2003 ನವೆಂಬರ್ ತಿಂಗಳಲ್ಲಿ ಕದನ ವಿರಾಮಕ್ಕೆ ಒಪ್ಪಿಕೊಂಡಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಅದ ಪದೇ ಪದೇ ಉಲ್ಲಂಘನೆಯಾಗುತ್ತಿದೆ. ಭಾರತ ತನ್ನ ಎಲ್ಲ ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಬಯಸುತ್ತಿದೆ. ಅದು ಗಡಿ ನಿಯಂತ್ರಣ ರೇಖೆ, ವಾಸ್ತವ ಗಡಿ ರೇಖೆ (LAC) ಅಥವಾ ಮ್ಯಾನ್ಮಾರ್​ನ ಸೀಮಾರೇಖೆಯೇ ಇರಲಿ ಭಾರತ ಶಾಂತಿ ಬಯಸುತ್ತಿದೆ ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಬುಧವಾರ ಹೇಳಿದ್ದರು. ಪಾಕಿಸ್ತಾನದೊಂದಿಗೆ ನಮ್ಮ ನಿರಂತರ ಕದನಗಳಲ್ಲಿ ನಾವು ಅವರ ವಿರುದ್ಧ ಮೇಲುಗೈ ಸಾಧಿಸಿದ್ದೇವೆ ಎಂದು ಹೇಳಿದ್ದ ನರವಾಣೆ, ಗಡಿ ನಿಯಂತ್ರಣ ರೇಖೆಗಳಲ್ಲಿ ಉಗ್ರರ ಶಿಬಿರಗಳು ಸಕ್ರಿಯವಾಗಿದ್ದು, ನುಸುಳುಕೋರನ್ನು ಸದೆಬಡಿಯಲು ಸೇನೆ  ಸದಾ ಸಿದ್ದವಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಭಾರತೀಯ ಸೇನೆಯ ದಿಟ್ಟ ಹೆಜ್ಜೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 35ರಷ್ಟು ಕಡಿಮೆಯಾದ ಉಗ್ರರ ಸಂಖ್ಯೆ

Published On - 4:29 pm, Thu, 25 February 21

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ