ರಕ್ಷಣಾ ಸಹಕಾರವನ್ನು ಹೆಚ್ಚಿಸಲು ‘ಭವಿಷ್ಯದ ಮಾರ್ಗಸೂಚಿ’ ಕಾರ್ಯಪಡೆ ರಚಿಸಲು ಭಾರತ-ತಾಂಜಾನಿಯಾ ಒಪ್ಪಿಗೆ

ಭಾರತ ಮತ್ತು ತಾಂಜಾನಿಯಾ ಎರಡೂ ದೇಶಗಳ ನಡುವೆ ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಐದು ವರ್ಷಗಳ 'ಭವಿಷ್ಯದ ಮಾರ್ಗಸೂಚಿ'ಯನ್ನು ಸಿದ್ಧಪಡಿಸಲು ಕಾರ್ಯಪಡೆಯ ರಚನೆಗೆ ಒಪ್ಪಿಕೊಂಡಿವೆ. ತಾಂಜಾನಿಯಾದಲ್ಲಿ ಮುಂದಿನ ಜಂಟಿ ರಕ್ಷಣಾ ಸಹಕಾರ ಸಭೆಯನ್ನು ಮುಂಚಿನ ದಿನಾಂಕದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ರಕ್ಷಣಾ ಸಹಕಾರವನ್ನು ಹೆಚ್ಚಿಸಲು 'ಭವಿಷ್ಯದ ಮಾರ್ಗಸೂಚಿ' ಕಾರ್ಯಪಡೆ ರಚಿಸಲು ಭಾರತ-ತಾಂಜಾನಿಯಾ ಒಪ್ಪಿಗೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ತಾಂಜೇನಿಯಾದ ರಕ್ಷಣಾ ಸಚಿವೆ ಡಾ. ಸ್ಟೆರ್ಗೊಮೆನಾ ಲಾರೆನ್ಸ್ ಟ್ಯಾಕ್ಸ್Image Credit source: Twitter/@rajnathsingh
Follow us
TV9 Web
| Updated By: Rakesh Nayak Manchi

Updated on:Aug 27, 2022 | 7:29 AM

ದೆಹಲಿ: ಶುಕ್ರವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ತಾಂಜೇನಿಯಾದ ರಕ್ಷಣಾ ಮತ್ತು ರಾಷ್ಟ್ರೀಯ ಸೇವಾ ಸಚಿವ ಡಾ. ಸ್ಟೆರ್ಗೊಮೆನಾ ಲಾರೆನ್ಸ್ ಟ್ಯಾಕ್ಸ್ ನಡುವೆ ದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆದಿದ್ದು, ಹಲವಾರು ಸಮಸ್ಯೆಗಳ ಕುರಿತು ನವದೆಹಲಿಯಲ್ಲಿ ಚರ್ಚೆಗಳನ್ನು ನಡೆಸಿದ್ದಾರೆ. ಮಾತುಕತೆ ವೇಳೆ ಎರಡೂ ದೇಶಗಳ ನಡುವಿನ ರಕ್ಷಣಾ ಸಹಕಾರದ ವಿಚಾರವನ್ನೂ ಪ್ರಸ್ತಾಪಿಸಲಾಗಿದೆ. ಎರಡೂ ದೇಶಗಳ ನಡುವೆ ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಐದು ವರ್ಷಗಳ ‘ಭವಿಷ್ಯದ ಮಾರ್ಗಸೂಚಿ’ಯನ್ನು ಸಿದ್ಧಪಡಿಸಲು ಕಾರ್ಯಪಡೆಯ ರಚನೆಗೆ ಪರಸ್ಪರ ಒಪ್ಪಿಗೆ ಸೂಚಿಸಲಾಗಿದ್ದು, ತಾಂಜಾನಿಯಾದಲ್ಲಿ ಮುಂದಿನ ಜಂಟಿ ರಕ್ಷಣಾ ಸಹಕಾರ ಸಭೆಯನ್ನು ಮುಂಚಿನ ದಿನಾಂಕದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ರಕ್ಷಣಾ ಕೈಗಾರಿಕಾ ಸಹಕಾರಕ್ಕೆ ಸಂಬಂಧಿಸಿದ ವ್ಯಾಪಕ ಶ್ರೇಣಿಯ ವಿಷಯಗಳನ್ನು ಚರ್ಚಿಸಲಾಯಿತು. ಇಬ್ಬರು ರಕ್ಷಣಾ ಮಂತ್ರಿಗಳು ಮಿಲಿಟರಿ ಚಟುವಟಿಕೆಗಳನ್ನು ಪರಿಶೀಲಿಸಿದರು ಮತ್ತು ರಕ್ಷಣಾ ಉದ್ಯಮದ ಸಹಕಾರವನ್ನು ಕೇಂದ್ರೀಕರಿಸಿ ಎಲ್ಲಾ ಡೊಮೇನ್‌ಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದರು ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಅಕ್ಟೋಬರ್ 18 ರಿಂದ 22ರ ನಡುವೆ ಗುಜರಾತ್‌ನ ಗಾಂಧಿನಗರದಲ್ಲಿ ನಡೆಯಲಿರುವ ಭಾರತ-ಆಫ್ರಿಕಾ ಡಿಫೆನ್ಸ್ ಡೈಲಾಗ್ ಮತ್ತು ಡೆಫ್ ಎಕ್ಸ್‌ಪೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಾಂಜೇನಿಯಾದ ಪ್ರತಿನಿಧಿಯನ್ನು ಆಹ್ವಾನಿಸಿದ್ದಾರೆ. ಇದಕ್ಕೂ ಮುನ್ನ ತಾಂಜೇನಿಯಾದ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದರು.

ಭಾರತೀಯ ರಕ್ಷಣಾ ಕೈಗಾರಿಕೆಗಳೊಂದಿಗೆ ಸಂವಾದಕ್ಕಾಗಿ ಹೈದರಾಬಾದ್‌ಗೆ ಹೊರಡುವ ಮೊದಲು ಡಾ. ಟ್ಯಾಕ್ಸ್ ವಾರ್‌ಗೇಮಿಂಗ್ ಡೆವಲಪ್‌ಮೆಂಟ್ ಸೆಂಟರ್ ಮತ್ತು ಇನ್ಫರ್ಮೇಷನ್ ಫ್ಯೂಷನ್ ಸೆಂಟರ್ ಹಿಂದೂ ಮಹಾಸಾಗರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿಕೆ ಸೇರಿಸಲಾಗಿದೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Sat, 27 August 22

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ