AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pahalgam Attack: ಗಡಿಯಲ್ಲಿ ಉದ್ವಿಗ್ನತೆ; ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳಿಗೆ ಭಾರತ ನಿಷೇಧ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆಯನ್ನು ಕಾಪಾಡಲು ಮತ್ತು ಸಾರ್ವಜನಿಕ ನೀತಿಯನ್ನು ಎತ್ತಿಹಿಡಿಯಲು ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಆಮದು ನಿಷೇಧಕ್ಕೆ ಯಾವುದೇ ವಿನಾಯಿತಿಗೆ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

Pahalgam Attack: ಗಡಿಯಲ್ಲಿ ಉದ್ವಿಗ್ನತೆ; ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳಿಗೆ ಭಾರತ ನಿಷೇಧ
Pakistan Border
ಸುಷ್ಮಾ ಚಕ್ರೆ
|

Updated on: May 03, 2025 | 1:12 PM

Share

ನವದೆಹಲಿ, ಮೇ 3: ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ (Pakistan) ವಿರುದ್ಧ ಮತ್ತೊಂದು ಕಠಿಣ ಕ್ರಮವಾಗಿ, ನೆರೆಯ ದೇಶ ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ತಿಳಿಸಿದೆ. ಈ ನಿಟ್ಟಿನಲ್ಲಿ ಹೊಸ ನಿಬಂಧನೆಯನ್ನು ವಿದೇಶಿ ವ್ಯಾಪಾರ ನೀತಿ (FTP) 2023ಗೆ ಸೇರಿಸಲಾಗಿದೆ ಎಂದು ಅದು ಹೇಳಿದೆ. ಈ ನಿಯಮವನ್ನು ತಕ್ಷಣವೇ ಜಾರಿಗೆ ತರಲಾಗುವುದು.

“ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸಲಾಗುವುದು” ಎಂದು ವಾಣಿಜ್ಯ ಸಚಿವಾಲಯದ ಮೇ 2ರ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತಾಸಕ್ತಿಯಲ್ಲಿ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ. ಈ ನಿಷೇಧಕ್ಕೆ ಯಾವುದೇ ವಿನಾಯಿತಿ ನೀಡಬೇಕಾದರೆ ಭಾರತ ಸರ್ಕಾರದ ಅನುಮೋದನೆಯ ಅಗತ್ಯವಿರುತ್ತದೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಭೇಟಿ ನೀಡಬೇಡಿ; ಕಾಶ್ಮೀರದ ಉಗ್ರರ ದಾಳಿ ಬಳಿಕ ತನ್ನ ಪ್ರಜೆಗಳಿಗೆ ರಷ್ಯಾ ಎಚ್ಚರಿಕೆ

ಇದನ್ನೂ ಓದಿ
Image
ಯುದ್ಧದ ಭಯ; ಆಹಾರ ಸಂಗ್ರಹಿಸಿಟ್ಟುಕೊಳ್ಳಲು ಗಡಿಯ ಜನರಿಗೆ ಪಾಕಿಸ್ತಾನ ಸೂಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಏಕೈಕ ವ್ಯಾಪಾರ ಮಾರ್ಗವಾದ ವಾಘಾ-ಅಟ್ಟಾರಿ ಗಡಿಯನ್ನು ಭಾರತ ಈಗಾಗಲೇ ಮುಚ್ಚಿದೆ. ಇದು ಎರಡು ನೆರೆಯ ರಾಷ್ಟ್ರಗಳ ನಡುವಿನ ಸಂಬಂಧಗಳಲ್ಲಿ ಮತ್ತಷ್ಟು ಕ್ಷೀಣಿಸಲು ಕಾರಣವಾಯಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಲಷ್ಕರ್ ಸಂಬಂಧಿತ ಭಯೋತ್ಪಾದಕರು ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದರು, ಇದರಲ್ಲಿ ವಿದೇಶಿ ಪ್ರವಾಸಿಗರು ಸೇರಿದಂತೆ 26 ಜನರು ಸಾವನ್ನಪ್ಪಿದರು ಮತ್ತು ಅನೇಕರು ಗಾಯಗೊಂಡರು. ಲಷ್ಕರ್‌ನ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತು. ಆದರೆ ನಂತರ ಜಾಗತಿಕವಾಗಿ ಭಾರಿ ಆಕ್ರೋಶದ ನಂತರ ಅದು ತನಗೂ ಈ ದಾಳಿಗೂ ಸಂಬಂಧವಿಲ್ಲ ಎಂದು ಹೇಳಿತು.

ಇದನ್ನೂ ಓದಿ: ಉಗ್ರರ ದಾಳಿ ಬೆನ್ನಲ್ಲೇ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ

ಉಗ್ರರ ದಾಳಿಯ ನಂತರ, ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಇಸ್ಲಾಮಾಬಾದ್ ಮಿಷನ್ ಬಲವನ್ನು ಕಡಿತಗೊಳಿಸುವುದು, ಪಾಕಿಸ್ತಾನಿ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದು ಮತ್ತು ತನ್ನ ಮಿಲಿಟರಿ ಅಟ್ಯಾಚ್‌ಗಳನ್ನು ಹೊರಹಾಕುವುದು ಸೇರಿದಂತೆ ಹಲವಾರು ಕ್ರಮಗಳೊಂದಿಗೆ ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕೆಳಮಟ್ಟಕ್ಕಿಳಿಸಿತು. ಭಾರತವು ಪಾಕಿಸ್ತಾನಿ ಪ್ರಜೆಗಳ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿತು ಮತ್ತು ವೈದ್ಯಕೀಯ ವೀಸಾ ಹೊಂದಿರುವ ಪಾಕಿಸ್ತಾನಿಗಳು ಸೇರಿದಂತೆ ಭಾರತದಲ್ಲಿ ವಾಸಿಸುವ ಎಲ್ಲರಿಗೂ ಮನೆಗೆ ಮರಳಲು ಗಡುವು ನೀಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನವು ಭಾರತದೊಂದಿಗಿನ ವ್ಯಾಪಾರವನ್ನು ಸ್ಥಗಿತಗೊಳಿಸಿತು ಮತ್ತು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ