ಡೇಂಜರ್! ಬ್ರಿಟನ್ ಹಿಂದಿಕ್ಕಿ, ಕೊರೊನಾ ಸೋಂಕಿನಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದ ಭಾರತ

|

Updated on: Jun 12, 2020 | 2:19 PM

ದೆಹಲಿ: ಡೆಡ್ಲಿ ಕೊರೊನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ ಸಿಕ್ಕಿದೆ. ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಇರುವ ದೇಶಗಳನ್ನು ಪಟ್ಟಿಮಾಡಲಾಗಿತ್ತು. ಅದರಲ್ಲಿ ನಮ್ಮ ಭಾರತ ಬ್ರಿಟನ್ ದೇಶವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನದಲ್ಲಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 10,956 ಜನರಿಗೆ ಸೋಂಕು ತಗುಲಿದೆ. 24 ಗಂಟೆಯಲ್ಲಿ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಹತ್ತು ಸಾವಿರ ಗಡಿ ದಾಟಿದೆ. ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2.97 ಲಕ್ಷ ಇದೆ. ಹಾಗೂ ಕಳೆದ […]

ಡೇಂಜರ್! ಬ್ರಿಟನ್ ಹಿಂದಿಕ್ಕಿ, ಕೊರೊನಾ ಸೋಂಕಿನಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದ ಭಾರತ
Follow us on

ದೆಹಲಿ: ಡೆಡ್ಲಿ ಕೊರೊನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ ಸಿಕ್ಕಿದೆ. ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಇರುವ ದೇಶಗಳನ್ನು ಪಟ್ಟಿಮಾಡಲಾಗಿತ್ತು. ಅದರಲ್ಲಿ ನಮ್ಮ ಭಾರತ ಬ್ರಿಟನ್ ದೇಶವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನದಲ್ಲಿದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 10,956 ಜನರಿಗೆ ಸೋಂಕು ತಗುಲಿದೆ. 24 ಗಂಟೆಯಲ್ಲಿ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಹತ್ತು ಸಾವಿರ ಗಡಿ ದಾಟಿದೆ. ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2.97 ಲಕ್ಷ ಇದೆ. ಹಾಗೂ ಕಳೆದ 24 ಗಂಟೆಯಲ್ಲಿ 396 ಮಂದಿ ಮೃತಪಟ್ಟಿದ್ದಾರೆ.

ಒಟ್ಟಾರೆ ಕೊರೊನಾ ಸಾವಿನ ಸಂಖ್ಯೆ 8,498 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 1.47 ಲಕ್ಷ. ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 1.42 ಲಕ್ಷ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

Published On - 10:18 am, Fri, 12 June 20