ರಾಜ್ಯಸಭೆಯಲ್ಲಿ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಇಂಡಿಯಾ ಬಣ ನಾಯಕರ ಪ್ಲಾನ್

|

Updated on: Dec 09, 2024 | 6:36 PM

50ಕ್ಕೂ ಹೆಚ್ಚು ರಾಜ್ಯಸಭಾ ಸದಸ್ಯರು ಸಹಿ ಹಾಕಿ ಕರಡು ಸಿದ್ಧಗೊಂಡ ಬಳಿಕ ರಾಜ್ಯಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯಲ್ಲಿ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಇಂಡಿಯಾ ಬಣ ನಾಯಕರ ಪ್ಲಾನ್
ಜಗದೀಪ್ ಧಂಖರ್
Follow us on

ನವದೆಹಲಿ: ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ರಾಜ್ಯಸಭೆಯಲ್ಲಿ ಇಂಡಿಯಾ ಬಣದ ನಾಯಕರು ಸಿದ್ಧತೆ ನಡೆಸಿದ್ದಾರೆ. ಇದುವರೆಗೆ 50ಕ್ಕೂ ಹೆಚ್ಚು ಸಂಸದರು ಈ ಮಸೂದೆಗೆ ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ಇಂಡಿಯಾ ಬಣದ ಎಲ್ಲಾ ಪಕ್ಷಗಳಲ್ಲಿ ಈ ಬಗ್ಗೆ ಒಮ್ಮತವಿದೆ.

50ಕ್ಕೂ ಹೆಚ್ಚು ಸಂಸದರು ಸಹಿ ಹಾಕಿ ಕರಡು ಸಿದ್ಧಗೊಂಡ ಬಳಿಕ ರಾಜ್ಯಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ರಾಜ್ಯಸಭಾ ಸ್ಪೀಕರ್ ವಿಪಕ್ಷ ನಾಯಕರು ಮಾತನಾಡುವಾಗ ಅಡ್ಡಿಪಡಿಸಿ, ಸಮಯ ಮೀಸಲಿಡುವ ಮೂಲಕ ವಿಪಕ್ಷ ನಾಯಕರ ವಿರುದ್ಧ ತಾರತಮ್ಯ ಮಾಡುತ್ತಿದ್ದಾರೆ ಎಂದು ಇಂಡಿಯಾ ಬ್ಲಾಕ್ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ನೀರಿನ ಬಾಟಲ್ ನೀಡಿದ ಸುಧಾ ಮೂರ್ತಿ; ಮಾತೃತ್ವಕ್ಕೆ ಸಲಾಂ ಎಂದ ಕೇಂದ್ರ ಸಚಿವ ರಾಮಮೋಹನ್ ನಾಯ್ಡು

ಕಾಂಗ್ರೆಸ್ ಈ ವಿಷಯದ ಬಗ್ಗೆ ಮುಂದಾಳತ್ವ ವಹಿಸಿದೆ. ಟಿಎಂಸಿ ಮತ್ತು ಸಮಾಜವಾದಿ ಪಕ್ಷ, ಇತರ ಇಂಡಿಯಾ ಬ್ಲಾಕ್ ಪಕ್ಷಗಳು ಈ ಕ್ರಮಕ್ಕೆ ಬೆಂಬಲ ನೀಡಿವೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ