ಹಂಗಾಮಿ ಸ್ಪೀಕರ್ ವಿವಾದ: ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ಇಂಡಿಯಾ ಬಣ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಸಂವಿಧಾನದ ಮೇಲಿನ ದಾಳಿಯನ್ನು ನಾವು ಅನುಮತಿಸುವುದಿಲ್ಲ. ಈ ದಾಳಿ ನಮಗೆ ಸ್ವೀಕಾರಾರ್ಹವಲ್ಲ. ನಮ್ಮ ಸಂದೇಶವು ಸಾರ್ವಜನಿಕರನ್ನು ತಲುಪುತ್ತಿದೆ.ಯಾವುದೇ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧ್ಯವಿಲ್ಲ. ನಾವು ಅದನ್ನು ರಕ್ಷಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಹಂಗಾಮಿ ಸ್ಪೀಕರ್ ವಿವಾದ: ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ಇಂಡಿಯಾ ಬಣ
ಇಂಡಿಯಾ ಬಣ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on: Jun 24, 2024 | 3:21 PM

ದೆಹಲಿ ಜೂನ್ 24: 18 ನೇ ಲೋಕಸಭೆಯ ಮೊದಲ ಅಧಿವೇಶನ (18th Lok Sabha session) ಪ್ರಾರಂಭವಾಗುತ್ತಿದ್ದಂತೆ, ವಿರೋಧ ಪಕ್ಷ ಇಂಡಿಯಾ ಬಣದ (INDIA bloc) ಹಲವಾರು ನಾಯಕರು ಸಂಸತ್ತಿನ ಗಾಂಧಿ ಪ್ರತಿಮೆಯ ಮುಂದೆ ಸಂವಿಧಾನದ ಪ್ರತಿಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ನಾಯಕರನ್ನು “ಪ್ರಜಾಪ್ರಭುತ್ವದ ರಕ್ಷಕರು” ಎಂದು ಕರೆದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ (K C Venugopal) ಇದರ ವಿಡಿಯೊವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೊದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಟಿಎಂಸಿ ನಾಯಕ ಮಹುವಾ ಮೊಯಿತ್ರಾ ಪ್ರತಿಭಟನೆ ನಡೆಸುತ್ತಿರುವುದನ್ನು ಕಾಣಬಹುದು. ನಾಯಕರು ತಮ್ಮ ಕೈಯಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡರಿದ್ದು, “ನಮ್ಮ ಸಂವಿಧಾನವು ಚಿರಾಯುವಾಗಲಿ, ಚಿರಾಯುವಾಗಲಿ” ಮತ್ತು “ಸಂವಿಧಾನವನ್ನು ಉಳಿಸುವವರು ಯಾರು? ನಾವು ಅದನ್ನು ಮಾಡುತ್ತೇವೆ ಎಂದು ಘೋಷಣೆ ಕೂಗಿದ್ದಾರೆ.

ಸಂವಿಧಾನವನ್ನು ರಕ್ಷಿಸಲು ಮತ್ತು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ. ಅನ್ಯಾಯದ ವಿರುದ್ಧ ಹೋರಾಡುವ ನಮ್ಮ ಸಂಕಲ್ಪದಲ್ಲಿ ನಾವು ಒಗ್ಗಟ್ಟಾಗಿದ್ದೇವೆ. ಬಾಪು ಅವರ ಆಶೀರ್ವಾದ ಪಡೆದು ಸಂಸತ್ತಿನಲ್ಲಿ ಜನರ ಸಮಸ್ಯೆಗಳು, ಸವಾಲುಗಳು, ಆಶಯಗಳು ಮತ್ತು ಆಕಾಂಕ್ಷೆಗಳಿಗೆ ಧ್ವನಿ ನೀಡುವ ಮತ್ತು ಸರ್ಕಾರವನ್ನು ಪ್ರತಿ ಕ್ಷಣವೂ ನಿಯಂತ್ರಣದಲ್ಲಿಡುವ ಹೊಸ ಸಂಕಲ್ಪದೊಂದಿಗೆ ಇಂಡಿಯಾ ಮೈತ್ರಿಕೂಟವು 18 ನೇ ಲೋಕಸಭೆಗೆ ಪ್ರವೇಶಿಸಿದೆ” ಎಂದು ವೇಣುಗೋಪಾಲ್ ವಿಡಿಯೊ ಪೋಸ್ಟ್ ಮಾಡಿ ಬರೆದಿದ್ದಾರೆ.

ವಿಪಕ್ಷಗಳ ಪ್ರತಿಭಟನೆ

ಬಿಜೆಪಿ ನಾಯಕ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿರುವುದು, NEET UG-2024 ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಸಂಸತ್ತಿನ ಕಟ್ಟಡ ಸಂಕೀರ್ಣದೊಳಗೆ ಪ್ರತಿಮೆ ಸ್ಥಳಾಂತರದ ವಿರುದ್ಧ ಇಂಡಿಯಾ ಬ್ಲಾಕ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಪಕ್ಷಗಳ ಪ್ರಕಾರ, ಹಂಗಾಮಿ ಸ್ಪೀಕರ್ ಹುದ್ದೆಗೆ ದಲಿತ ಮುಖಂಡರಾದ ಎಂಟು ಅವಧಿಯ ಸದಸ್ಯ ಕೆ.ಸುರೇಶ್ ಅವರನ್ನು ಕಡೆಗಣಿಸಲಾಗಿದೆ. ಬಿಜೆಪಿಯ ಮಹತಾಬ್ ಅವರ ನೇಮಕವು ಹಿರಿಯ ಸದಸ್ಯರನ್ನು ನೇಮಿಸುವ ಸಾಂಪ್ರದಾಯಿಕ ಪದ್ಧತಿಯಿಂದ ವಿಮುಖವಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಲೋಕಸಭೆಯಲ್ಲಿ ಹಿರಿಯ-ಅತಿ ಹೆಚ್ಚು ಸಂಸದರು ಹಂಗಾಮಿ ಸ್ಪೀಕರ್ ಆಗುವುದು “ಸ್ಥಾಪಿತ ಸಂಪ್ರದಾಯ”.

ಸರ್ಕಾರದ ಧೋರಣೆ ಈಗಲೂ ದುರಹಂಕಾರಿ ಆಗಿದೆ. 8 ಅವಧಿಯ ಸಂಸದರಾಗಿದ್ದ ದಲಿತ ಸಂಸದರನ್ನು ಅವರು ಕಡೆಗಣಿಸಿದರು. ಕೆ ಸುರೇಶ್ ಹಂಗಾಮಿ ಸ್ಪೀಕರ್ ಆಗಬೇಕಿತ್ತು. ವಿರೋಧ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಸಂಸದೀಯ ವ್ಯವಹಾರಗಳ ಸಚಿವರು ಇಂತಹ ನಿರ್ಧಾರ ಕೈಗೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.

ಇದೇ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮಾತನಾಡಿ,“ನರೇಂದ್ರ ಮೋದಿ ಸರ್ಕಾರದಿಂದ ಸಂವಿಧಾನವನ್ನು ಉಲ್ಲಂಘಿಸಲಾಗಿದೆ. ಹಂಗಾಮಿ ಸ್ಪೀಕರ್ ನೇಮಕ ಮಾಡಿರುವುದು ಸಾಂವಿಧಾನಿಕ ನಿಬಂಧನೆಗಳ ಸ್ಪಷ್ಟ ಉಲ್ಲಂಘನೆ ಮತ್ತು ಹಿಂದಿನ ಪೂರ್ವನಿದರ್ಶನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ: ಮೋದಿ

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಸಂವಿಧಾನದ ಮೇಲಿನ ದಾಳಿಯನ್ನು ನಾವು ಅನುಮತಿಸುವುದಿಲ್ಲ. ಈ ದಾಳಿ ನಮಗೆ ಸ್ವೀಕಾರಾರ್ಹವಲ್ಲ. ನಮ್ಮ ಸಂದೇಶವು ಸಾರ್ವಜನಿಕರನ್ನು ತಲುಪುತ್ತಿದೆ.ಯಾವುದೇ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧ್ಯವಿಲ್ಲ. ನಾವು ಅದನ್ನು ರಕ್ಷಿಸುತ್ತೇವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಸಂದೇಶ

18 ನೇ ಲೋಕಸಭೆಯ ಮೊದಲ ಅಧಿವೇಶನವು ಅಧ್ಯಕ್ಷ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಆಗಿ ಏಳು ಬಾರಿ ಸಂಸದ ಮಹತಾಬ್ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಪ್ರಾರಂಭವಾಯಿತು. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಮತ್ತು ಇತರ ಸಚಿವರು ಸಂಸತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿವೇಶನದ ಮೊದಲು, ಮೋದಿ ಅವರು ಪ್ರತಿಪಕ್ಷಗಳಿಗೆ ಸಂದೇಶವನ್ನು ಕಳುಹಿಸಿದ್ದು ದೇಶದ ಜನರು ಸಂಸತ್ತಿನ ಸದಸ್ಯರಿಂದ “ಚರ್ಚೆ ಮತ್ತು ಗಮನವನ್ನು ನಿರೀಕ್ಷಿಸುತ್ತಾರೆ ಗದ್ದಲವನ್ನಲ್ಲ ಎಂದಿದ್ದಾರೆ.

“ಭಾರತಕ್ಕೆ ಜವಾಬ್ದಾರಿಯುತ ವಿರೋಧ ಪಕ್ಷದ ಅಗತ್ಯವಿದೆ. ಜನರಿಗೆ ಸತ್ವ ಬೇಕು ಘೋಷಣೆಗಳಲ್ಲ, ಚರ್ಚೆ, ಗಮನ ಬೇಕು ಸಂಸತ್ತಿನಲ್ಲಿ ಗೊಂದಲವಲ್ಲ. ಪ್ರತಿಪಕ್ಷಗಳಿಂದ ಜನರು ಒಳ್ಳೆಯ ಹೆಜ್ಜೆಗಳನ್ನು ನಿರೀಕ್ಷಿಸುತ್ತಾರೆ. ಇದು ಇಲ್ಲಿಯವರೆಗೆ ನಿರಾಶಾದಾಯಕವಾಗಿದೆ, ಆದರೆ ಅದು ತನ್ನ ಪಾತ್ರವನ್ನು ಪೂರೈಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುತ್ತದೆ ಎಂದು ನಾನು ಭಾವಿಸುತ್ತೇನೆ ”ಎಂದು ಹೊಸ ಸಂಸತ್ತಿನ ಕಟ್ಟಡದ ಹೊರಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ ಹೇಳಿದರು.  ತುರ್ತು ಪರಿಸ್ಥಿತಿಯನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಮೋದಿ,  ಸಂವಿಧಾನವನ್ನು ಹೇಗೆ ನಾಶಪಡಿಸಿತು ಎಂಬುದನ್ನು ಹೊಸ ಪೀಳಿಗೆ ಎಂದಿಗೂ ಮರೆಯುವುದಿಲ್ಲ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್