ಹರಿಯಾಣದಲ್ಲಿ ಕಾಂಗ್ರೆಸ್‌ಗಾದ ಸೋಲಿನ ಗಾಯಕ್ಕೆ ಉಪ್ಪು ಸವರಿದ ಇಂಡಿಯ ಬ್ಲಾಕ್ ಮಿತ್ರಪಕ್ಷಗಳು

|

Updated on: Oct 09, 2024 | 4:40 PM

ಹರಿಯಾಣದಲ್ಲಿ ಮುಜುಗರದ ಸೋಲಿನ ನಂತರ ಜಾರ್ಖಂಡ್, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಮುಂಬರುವ ಹಂತದ ವಿಧಾನಸಭಾ ಚುನಾವಣೆಯ ಕಾರ್ಯತಂತ್ರವನ್ನು ಗಂಭೀರವಾಗಿ ಮರುಪರಿಶೀಲಿಸುವಂತೆ ಕಾಂಗ್ರೆಸ್‌ಗೆ ಇಂಡಿಯಾ ಬ್ಲಾಕ್ ಪಾಲುದಾರರು ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್‌ಗಾದ ಸೋಲಿನ ಗಾಯಕ್ಕೆ ಉಪ್ಪು ಸವರಿದ ಇಂಡಿಯ ಬ್ಲಾಕ್ ಮಿತ್ರಪಕ್ಷಗಳು
ಕಾಂಗ್ರೆಸ್
Follow us on

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಸಲಹೆ ನೀಡುತ್ತಿವೆ.

ಹರಿಯಾಣದಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿಗೆ ಯತ್ನಿಸಿದ ಎಎಪಿಯ ನಾಯಕರು ಇತ್ತೀಚಿನ ಚುನಾವಣೆಗಳಲ್ಲಿ “ಅತಿಯಾದ ಆತ್ಮವಿಶ್ವಾಸ” ಇಟ್ಟುಕೊಳ್ಳಲಾಗಿತ್ತು ಎಂದು ಒತ್ತಿ ಹೇಳಿದರು. ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದ ಬಗ್ಗೆ ಮಿತ್ರಪಕ್ಷಗಳು ಕಳವಳ ವ್ಯಕ್ತಪಡಿಸಿವೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ-ಯುಬಿಟಿ ಮತ್ತು ಸಿಪಿಐ ಕೂಡ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿಧಾನದ ವಿರುದ್ಧ ವಾಗ್ದಾಳಿ ನಡೆಸಿವೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದೇ ಅಭಿಪ್ರಾಯವನ್ನು ಪ್ರತಿಧ್ವನಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗಳ ಪ್ರಾಥಮಿಕ ಪಾಠವೆಂದರೆ “ಅತಿಯಾದ ಆತ್ಮವಿಶ್ವಾಸ”ವನ್ನು ತಪ್ಪಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂಗಳ ನಡುವೆ ಜಗಳ ತರಲು ಕಾಂಗ್ರೆಸ್‌ ಷಡ್ಯಂತ್ರ; ಮೋದಿ ಆರೋಪ

ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಪ್ರಸ್ತುತ ಶಿವಸೇನೆ-ಯುಬಿಟಿ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ-ಎಸ್‌ಪಿ ಜೊತೆ ಚರ್ಚೆ ನಡೆಸುತ್ತಿದೆ. ಹಾಗೇ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಪ್ರಮುಖ ಪಕ್ಷವಾಗಿದೆ ಎಂದು ಮಹಾರಾಷ್ಟ್ರದ ಮಿತ್ರಪಕ್ಷಗಳಿಗೆ ನೆನಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೊದಲ ಸ್ಥಾನದಲ್ಲಿತ್ತು. ನಾವು ನಮ್ಮ ನಡುವಿನ ಸಮಸ್ಯೆಗಳನ್ನು ಚರ್ಚಿಸುವುದು ‘ಸಮ್ಮಿಶ್ರ ಧರ್ಮ’ ಎಂದು ನಾನು ನೆನಪಿಸಲು ಬಯಸುತ್ತೇನೆ. ಆದರೆ ಮಾಧ್ಯಮಗಳ ಮೂಲಕ ಈ ಬಗ್ಗೆ ಚರ್ಚೆ ಸರಿಯಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ನಾವು ಮಹಾರಾಷ್ಟ್ರದಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿಯನ್ನು ಬಲಪಡಿಸುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಮಿತ್ರಪಕ್ಷಗಳ ಬಗ್ಗೆ ನಾವು ಏನನ್ನೂ ಹೇಳುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್ ಸೋಲು; ರಾಹುಲ್ ಗಾಂಧಿ ಮನೆಗೆ 1 ಕೆಜಿ ಜಿಲೇಬಿ ಕಳುಹಿಸಿದ ಬಿಜೆಪಿ

ಜಾರ್ಖಂಡ್ ರಾಜ್ಯದಲ್ಲಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದೆ. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ 2013ರಲ್ಲಿ ಕಾಂಗ್ರೆಸ್ ಅನ್ನು ಅಧಿಕಾರದಿಂದ ಹೊರಹಾಕಿತು. ಅಂದಿನಿಂದ 2015 ಮತ್ತು 2020ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಪಡೆಯಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗಲಿಲ್ಲ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ