Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕುಟುಂಬ ಆಡಳಿತ: ತಮಿಳುನಾಡಿನಲ್ಲಿ ಪ್ರಧಾನಿ ಮೋದಿ

ಕಾಂಗ್ರೆಸ್ ಮತ್ತು ಡಿಎಂಕೆ ಹೊಂದಿರುವ ಇಂಡಿಯಾ ಮೈತ್ರಿಯು ಇದನ್ನು ನಾಶಪಡಿಸುತ್ತದೆ ಎಂದು ಹೇಳುತ್ತದೆ." ಶಕ್ತಿಯು ದೈವಿಕತೆಯನ್ನು ಸೂಚಿಸುತ್ತದೆ. ರಾಜ್ಯದಲ್ಲಿ ಮಾರಿಯಮ್ಮ, ಮಧುರೈ ಮೀನಾಕ್ಷಿಯಮ್ಮ ಮತ್ತು ಕಾಂಚಿ ಕಾಮಾಕ್ಷಿಯಮ್ಮನಂತಹ ವಿವಿಧ ದೇವತೆಗಳ ರೂಪದಲ್ಲಿ ಪ್ರಕಟವಾಗುತ್ತದೆ. ರಾಷ್ಟ್ರಕವಿ ಸುಬ್ರಮಣ್ಯ ಭಾರತಿ ಅವರು ಭಾರತ ಮಾತೆಯನ್ನು ‘ಶಕ್ತಿ’ ಎಂದು ಪೂಜಿಸಿದರು. "ಶಕ್ತಿಯನ್ನು ನಾಶಪಡಿಸುವ ಮಾತನಾಡುವವರಿಗೆ ತಮಿಳುನಾಡು ಶಿಕ್ಷೆ ನೀಡಲಿದೆ ಎಂದು ಸೇಲಂನಲ್ಲಿ ನಡೆದ ರ‍್ಯಾಲಿಯಲ್ಲಿ ಮೋದಿ ಹೇಳಿದ್ದಾರೆ.

ಡಿಎಂಕೆ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕುಟುಂಬ ಆಡಳಿತ: ತಮಿಳುನಾಡಿನಲ್ಲಿ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 19, 2024 | 8:35 PM

ಸೇಲಂ ಮಾರ್ಚ್ 19: ಇಂದು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ (Salem) ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಡಿಎಂಕೆ ಮತ್ತು ಕಾಂಗ್ರೆಸ್ (Congress) ಒಂದೇ ನಾಣ್ಯದ ಎರಡು ಮುಖಗಳು. ಅವರ ಮೈತ್ರಿ ಎಂದರೆ ಭ್ರಷ್ಟಾಚಾರ ಮತ್ತು ಒಂದು ಕುಟುಂಬ ಆಡಳಿತ ಎಂದು ಆರೋಪಿಸಿದ್ದಾರೆ.  ಕಾಂಗ್ರೆಸ್​​ನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರ ದೇಶವು 5G ತಂತ್ರಜ್ಞಾನವನ್ನು ತಲುಪಿತು. ಆದರೆ ತಮಿಳುನಾಡಿನಲ್ಲಿ ಡಿಎಂಕೆ ತನ್ನದೇ ಆದ 5ಜಿ ನಡೆಸುತ್ತಿದೆ. ತಮಿಳುನಾಡಿನ ಮೇಲೆ ನಿಯಂತ್ರಣ ಹೊಂದಲು ಒಂದು ಕುಟುಂಬದ ಐದನೇ ಪೀಳಿಗೆ ಇದೆ ಎಂಬುದನ್ನು ಸೂಚಿಸಲು ಮೋದಿ ಇಲ್ಲಿ 5ಜಿ ಎಂದು ಬಳಸಿದ್ದಾರೆ.

“ದಿವಂಗತ ಜಯಲಲಿತಾ ಅವರೊಂದಿಗೆ ಡಿಎಂಕೆ ಹೇಗೆ ವರ್ತಿಸಿತು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದು ಡಿಎಂಕೆಯ ನಿಜವಾದ ಮುಖ,” ಎಂದಿದ್ದಾರೆ ಮೋದಿ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ಶಕ್ತಿ’ ಹೇಳಿಕೆ ಬಗ್ಗೆ ಇಂಡಿಯಾ ಬಣದ ಮೇಲೆ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ಮೋದಿ, ಶಕ್ತಿಯನ್ನು ನಾಶಮಾಡಲು ಘೋಷಿಸುವ ಮೂಲಕ ವಿರೋಧ ಪಕ್ಷವು ತನ್ನ “ದುರುದ್ದೇಶ” ವನ್ನು ಪ್ರದರ್ಶಿಸಿದೆ ಎಂದು ಹೇಳಿದರು.

ವೇದಿಕೆಯಲ್ಲಿ 11 ‘ಶಕ್ತಿ ಅಮ್ಮ’

ತಮಿಳುನಾಡಿನ ಸೇಲಂನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ‍್ಯಾಲಿಯಲ್ಲಿ ‘ನಾರಿ ಶಕ್ತಿ’ಯನ್ನು ಗೌರವಿಸುವ ಮೂಲಕ ವಯನಾಡ್ ಸಂಸದ ರಾಹುಲ್ ಗಾಂಧಿ ‘ಶಕ್ತಿ’ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಪ್ರಧಾನಮಂತ್ರಿಯವರೊಂದಿಗೆ ವೇದಿಕೆ ಹಂಚಿಕೊಳ್ಳಲು ಅಮ್ಮ ವೇಷಧಾರಿಗಳಾದ ಹೆಣ್ಮಕ್ಕಳನ್ನು ಕರೆಯಲಾಗಿದೆ. ಈ ಸಮಯದಲ್ಲಿ ಅವರೆಲ್ಲರೂ ಪ್ರಧಾನಿ ಮೋದಿಯವರೊಂದಿಗೆ ಸಂವಾದ ನಡೆಸಿದರು. ಸಾಂಪ್ರದಾಯಿಕ ಉಡುಗೆ ಧರಿಸಿದ ‘ಶಕ್ತಿ ಅಮ್ಮಾ’ಗಳು ಪ್ರಧಾನಮಂತ್ರಿಯವರೊಂದಿಗೆ ಫೋಟೊಗೆ ಪೋಸ್ ಕೂಡಾ ನೀಡಿದ್ದಾರೆ.

ಇಂಡಿಯಾ ಮೈತ್ರಿಕೂಟ  ಹಿಂದೂ ಧರ್ಮವನ್ನು ಅವಮಾನಿಸುತ್ತದೆ: ಮೋದಿ

ಕಾಂಗ್ರೆಸ್ ಮತ್ತು ಡಿಎಂಕೆ ಪ್ರಮುಖ ಘಟಕಗಳಾಗಿರುವ ವಿರೋಧ ಪಕ್ಷದ ಮೈತ್ರಿಯು ಪದೇ ಪದೇ ಹಿಂದೂ ಧರ್ಮವನ್ನು ಅವಮಾನಿಸುತ್ತದೆ. ಅವರ ಹೇಳಿಕೆಗಳು ಹಿಂದೂ ಧರ್ಮದ ವಿರೋಧಿಯೇ ಆಗಿರುತ್ತದೆ. ಇಂಡಿಯಾ ಮೈತ್ರಿಕೂಟದ ಜನರು ಪದೇ ಪದೇ ಉದ್ದೇಶಪೂರ್ವಕವಾಗಿ ಹಿಂದೂ ನಂಬಿಕೆಯನ್ನು ಅವಮಾನಿಸುತ್ತಾರೆ. ಅವರು ನೀಡುವ ಪ್ರತಿಯೊಂದು ಹೇಳಿಕೆಯೂ ಅದೇ ಉದ್ದೇಶದ್ದು. ಹಿಂದೂ ಧರ್ಮದಲ್ಲಿ, ಶಕ್ತಿ ಎಂದರೆ “ಮಾತೃ ಶಕ್ತಿ, ನಾರಿ ಶಕ್ತಿ” ಎಂದಿದ್ದಾರೆ ಪ್ರಧಾನಿ.

ಇದನ್ನೂ ಓದಿ: ನಿಮ್ಮ ಬೆಂಬಲ, ಪ್ರೀತಿ ಮತ್ತು ಉತ್ಸಾಹ ನೋಡುತ್ತಿದ್ದರೆ ಕರ್ನಾಟಕದಲ್ಲಿ ಬಿಜೆಪಿಗೆ ಈಗಾಗಲೇ ಸಮರ್ಥನೆ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

“ಕಾಂಗ್ರೆಸ್ ಮತ್ತು ಡಿಎಂಕೆ ಹೊಂದಿರುವ ಇಂಡಿಯಾ ಮೈತ್ರಿಯು ಇದನ್ನು ನಾಶಪಡಿಸುತ್ತದೆ ಎಂದು ಹೇಳುತ್ತದೆ.” ಶಕ್ತಿಯು ದೈವಿಕತೆಯನ್ನು ಸೂಚಿಸುತ್ತದೆ. ರಾಜ್ಯದಲ್ಲಿ ಮಾರಿಯಮ್ಮ, ಮಧುರೈ ಮೀನಾಕ್ಷಿಯಮ್ಮ ಮತ್ತು ಕಾಂಚಿ ಕಾಮಾಕ್ಷಿಯಮ್ಮನಂತಹ ವಿವಿಧ ದೇವತೆಗಳ ರೂಪದಲ್ಲಿ ಪ್ರಕಟವಾಗುತ್ತದೆ. ರಾಷ್ಟ್ರಕವಿ ಸುಬ್ರಮಣ್ಯ ಭಾರತಿ ಅವರು ಭಾರತ ಮಾತೆಯನ್ನು ‘ಶಕ್ತಿ’ ಎಂದು ಪೂಜಿಸಿದರು. “ಶಕ್ತಿಯನ್ನು ನಾಶಪಡಿಸುವ ಮಾತನಾಡುವವರಿಗೆ ತಮಿಳುನಾಡು ಶಿಕ್ಷೆ ನೀಡಲಿದೆ. ನಾನು ಶಕ್ತಿಯ ಆರಾಧಕ” ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Tue, 19 March 24