ಅರವಿಂದ್ ಕೇಜ್ರಿವಾಲ್ ಅಕ್ರಮ ಬಂಧನ ವಿರೋಧಿಸಿ ಇಂಡಿಯಾ ಬಣದಿಂದ ಇಂದು ಪ್ರತಿಭಟನೆ

ಒಗ್ಗಟ್ಟಿನ ಪ್ರದರ್ಶನದ ಸಂಕೇತವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಇಂದು (ಮಂಗಳವಾರ) ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ಇಂಡಿಯಾ ಬ್ಲಾಕ್ ಪ್ರತಿಭಟನೆ ನಡೆಸಲಿದೆ. ಎಎಪಿ ಸಂಸದ ಸಂಜಯ್ ಸಿಂಗ್ ಅವರು ಕಾಂಗ್ರೆಸ್, ಸಮಾಜವಾದಿ ಪಕ್ಷ, ಟಿಎಂಸಿ, ಡಿಎಂಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ರ್ಯಾಲಿಯಲ್ಲಿ ಭಾಗವಹಿಸಲಿವೆ.

ಅರವಿಂದ್ ಕೇಜ್ರಿವಾಲ್ ಅಕ್ರಮ ಬಂಧನ ವಿರೋಧಿಸಿ ಇಂಡಿಯಾ ಬಣದಿಂದ ಇಂದು ಪ್ರತಿಭಟನೆ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Jul 30, 2024 | 6:57 AM

ನವದೆಹಲಿ: ಜೈಲಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಅವರ ವೈದ್ಯಕೀಯ ವರದಿಯ ಪ್ರಕಾರ, ಕೇಜ್ರಿವಾಲ್ ಅವರ ದೇಹದ ಸಕ್ಕರೆ ಮಟ್ಟವು ಕುಸಿದಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾಗ ಅವರ ಆರೋಗ್ಯ ಹದಗೆಟ್ಟಿರುವ ಸಮಸ್ಯೆಯನ್ನು ಪರಿಹರಿಸಲು ಇಂದು (ಮಂಗಳವಾರ) ದೆಹಲಿಯ ಜಂತರ್ ಮಂತರ್‌ನಲ್ಲಿ ಇಂಡಿಯಾ ಬಣದ ರ್ಯಾಲಿಯಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಭಾಗವಹಿಸಲಿವೆ.

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಜೂನ್ 3 ಮತ್ತು ಜುಲೈ 7ರ ನಡುವೆ ಅವರ ಸಕ್ಕರೆ ಮಟ್ಟವು 34 ಬಾರಿ ಕುಸಿದಿದೆ ಎಂದು ಸೂಚಿಸುವ ಅವರ ವೈದ್ಯಕೀಯ ವರದಿಯನ್ನು ಉಲ್ಲೇಖಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಡಿಎಂಕೆ, ಸಿಪಿಐ, ಜಾರ್ಖಂಡ್ ಮುಕ್ತಿ ಮೋರ್ಚಾ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ – ಶರದ್ಚಂದ್ರ ಪವಾರ್ (ಎನ್‌ಸಿಪಿ-ಎಸ್‌ಪಿ), ಶಿವಸೇನೆ (ಯುಬಿಟಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಲಿಬರೇಶನ್ ಪಕ್ಷಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿವೆ.

ಇದನ್ನೂ ಓದಿ: Delhi Liquor Policy Scam: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್​ 8ರವರೆಗೆ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಅರವಿಂದ್ ಕೇಜ್ರಿವಾಲ್ ಅವರ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ.

ಅಬಕಾರಿ ನೀತಿಗೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿಯಮಿತ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸೋಮವಾರ ತನ್ನ ನಿರ್ಧಾರವನ್ನು ಕಾಯ್ದಿರಿಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಜಾಮೀನು ಅರ್ಜಿಯನ್ನು ವಿರೋಧಿಸಿತು. ಈಗ ರದ್ದಾದ ಅಬಕಾರಿ ನೀತಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಮುಖ್ಯ ಆರೋಪಿ ಎಂದು ಸಿಬಿಐ ವಾದಿಸಿದೆ. ಅರವಿಂದ್ ಕೇಜ್ರಿವಾಲ್ ಸೇರಿದಂತೆ 6 ವ್ಯಕ್ತಿಗಳನ್ನು ಹೆಸರಿಸಿ ವಿಚಾರಣಾ ನ್ಯಾಯಾಲಯಕ್ಕೆ ಇಂದು ಬೆಳಿಗ್ಗೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮದ್ಯ ನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ವಿರುದ್ಧ ಸಿಬಿಐನಿಂದ ಚಾರ್ಜ್​ಶೀಟ್​ ಸಲ್ಲಿಕೆ

ಜುಲೈ 12ರಂದು ಜಾರಿ ನಿರ್ದೇಶನಾಲಯದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತು. ಆದರೆ, ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಪ್ರತ್ಯೇಕ ಪ್ರಕರಣದಿಂದಾಗಿ ಎಎಪಿ ನಾಯಕ ಬಂಧನದಲ್ಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್