AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲೀಲಾ ಮೈದಾನದಲ್ಲಿ ಇಂಡಿ ಬಣದ ‘ವೋಟ್ ಬಚಾವೋ, ದೇಶ್ ಬಚಾವೋ’ ಬೃಹತ್ ಶಕ್ತಿ ಪ್ರದರ್ಶನ: 4,000 ಪೊಲೀಸರು, 200 ಸಿಸಿಟಿವಿ ಕಣ್ಗಾವಲು

ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಇಂಡಿ' ಬಣವು 'ವೋಟ್ ಬಚಾವೋ, ದೇಶ್ ಬಚಾವೋ' ಬೃಹತ್ ರ್ಯಾಲಿ ನಡೆಸಿದೆ. ಚುನಾವಣಾ ಅಕ್ರಮಗಳು ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ. 4,000 ಪೊಲೀಸರು ಮತ್ತು 200 ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ. ರಾಹುಲ್ ಗಾಂಧಿ ಸ್ಥಳೀಯ ವ್ಯಾಪಾರಿಗಳಿಗೆ ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.

ರಾಮಲೀಲಾ ಮೈದಾನದಲ್ಲಿ ಇಂಡಿ ಬಣದ 'ವೋಟ್ ಬಚಾವೋ, ದೇಶ್ ಬಚಾವೋ' ಬೃಹತ್ ಶಕ್ತಿ ಪ್ರದರ್ಶನ: 4,000 ಪೊಲೀಸರು, 200 ಸಿಸಿಟಿವಿ ಕಣ್ಗಾವಲು
ಪ್ರತಿಭಟನೆ Image Credit source: PTI
ನಯನಾ ರಾಜೀವ್
|

Updated on: Nov 01, 2026 | 7:54 AM

Share

ನವದೆಹಲಿ, ನವೆಂಬರ್ 1: ಇಂಡಿ ಬಣವು ಇಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಗೆ ಸಜ್ಜಾಗಿದೆ. ಹಬ್ಬದ ಸೀಸನ್‌ನಲ್ಲಿ ವ್ಯಾಪಾರಕ್ಕೆ ಹೊಡೆತ ಬೀಳಲಿದೆ ಎಂದು ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದ ಬೆನ್ನಲ್ಲೇ, “ಪ್ರತಿಭಟನೆಯ ಜೊತೆಗೆ ದೆಹಲಿಯ ಸಣ್ಣ ವರ್ತಕರಿಂದ ವಸ್ತುಗಳನ್ನು ಖರೀದಿಸಿ ಅವರಿಗೆ ಬೆಂಬಲ ನೀಡಿ” ಎಂದು ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಮತ್ತು ಚುನಾವಣಾ ಅಕ್ರಮಗಳನ್ನು ವಿರೋಧಿಸಿ ವಿಪಕ್ಷಗಳ ‘ಇಂಡಿ’ ಒಕ್ಕೂಟವು ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ವೋಟ್ ಬಚಾವೋ, ದೇಶ್ ಬಚಾವೋ’ ಹೆಸರಿನಲ್ಲಿ ಬೃಹತ್ ರ್ಯಾಲಿ ನಡೆಸುತ್ತಿದೆ.

ಮಧ್ಯಾಹ್ನ ಮಿಂಟೋ ರಸ್ತೆ-ಕನ್ನಾಟ್ ಪ್ಲೇಸ್ ಜಂಕ್ಷನ್‌ನಿಂದ ಆರಂಭವಾಗಲಿರುವ ಬೃಹತ್ ಮೆರವಣಿಗೆಯು ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಸಮಾವೇಶವಾಗಿ ಮುಕ್ತಾಯಗೊಳ್ಳಲಿದೆ. ಹಿಮಾಚಲ ಪ್ರದೇಶ, ಪಂಜಾಬ್, ಉತ್ತರ ಪ್ರದೇಶ, ಹರಿಯಾಣ ಸೇರಿದಂತೆ ದೇಶದ ನಾನಾ ಭಾಗಗಳಿಂದ ವಿರೋಧ ಪಕ್ಷಗಳ ಮುಖಂಡರು, ಭಾರತೀಯ ಯುವ ಕಾಂಗ್ರೆಸ್ (IYC) ಸದಸ್ಯರು ಹಾಗೂ ಕಾರ್ಯಕರ್ತರು ದೆಹಲಿಗೆ ಆಗಮಿಸುತ್ತಿದ್ದಾರೆ. ಯುವ ಕಾಂಗ್ರೆಸ್ ಒಂದರಿಂದಲೇ 20,000ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ರಾಹುಲ್ ಗಾಂಧಿ ನೀಡಿದ ‘ಶಾಪಿಂಗ್’ ಕರೆ ದೀಪಾವಳಿ ಮತ್ತು ಧಂತೇರಸ್ ಹಬ್ಬದ ಹೊಸ್ತಿಲಿನಲ್ಲಿ ರ್ಯಾಲಿ ನಡೆಯುತ್ತಿರುವುದರಿಂದ ವ್ಯಾಪಾರಕ್ಕೆ ಭಾರಿ ಹೊಡೆತ ಬೀಳಲಿದೆ ಎಂದು ದೆಹಲಿ ವ್ಯಾಪಾರಿಗಳ ಮಂಡಳಿ (CTI) ಈ ಹಿಂದೆ ಆತಂಕ ವ್ಯಕ್ತಪಡಿಸಿ ಪತ್ರ ಬರೆದಿತ್ತು. ಇದಕ್ಕೆ ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಇದು ದೀಪಾವಳಿ, ಛತ್ ಮತ್ತು ಭಾಯಿ ದೂಜ್ ಹಬ್ಬದ ಸಂಭ್ರಮದ ಸಮಯ. ಹೊರಗಿನಿಂದ ದೆಹಲಿಗೆ ಬರುವ ಲಕ್ಷಾಂತರ ಜನರು ಇಲ್ಲಿನ ಸ್ಥಳೀಯ ವ್ಯಾಪಾರಿಗಳಿಗೆ ಬೆಂಬಲ ನೀಡಬೇಕೆಂದು ನಾನು ವಿನಂತಿಸುತ್ತೇನೆ.”

ಇದನ್ನೂ ಓದಿ: ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿದು, ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಿಸಿದ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್

“ಪ್ರತಿಭಟನೆ, ಮೆರವಣಿಗೆಯ ಜೊತೆಜೊತೆಗೆ ಸ್ಥಳೀಯ ಸಣ್ಣಪುಟ್ಟ ಅಂಗಡಿಗಳಿಂದ ಹಬ್ಬದ ಶಾಪಿಂಗ್ ಮಾಡಿ. ಇದರಿಂದ ವ್ಯಾಪಾರಿಗಳಿಗೂ ನೆರವಾಗುತ್ತದೆ. ಬಿಜೆಪಿಯು ಭಯಭೀತಗೊಂಡು ಸುಳ್ಳು ವದಂತಿಗಳನ್ನು ಹರಡುತ್ತಿದೆ. ನಾವು ಹಕ್ಕೊತ್ತಾಯದ ಜೊತೆಗೆ ಸ್ಥಳೀಯ ವ್ಯಾಪಾರವನ್ನೂ ಬೆಂಬಲಿಸೋಣ” ಎಂದು ಹೇಳಿದ್ದಾರೆ.

 ಭದ್ರತೆ ಮತ್ತು ಟ್ರಾಫಿಕ್ ನಿರ್ಬಂಧ 4,000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ದೆಹಲಿ ಪೊಲೀಸರು ಹಾಗೂ ಅರೆಸೈನಿಕ ಪಡೆಗಳ ಸುಮಾರು 4,000ಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

200 ಸಿಸಿಟಿವಿ ಕ್ಯಾಮೆರಾಗಳು ಹಾಗೂ ಕಂಟ್ರೋಲ್ ರೂಂ: ರಾಮಲೀಲಾ ಮೈದಾನ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ 200ಕ್ಕೂ ಹೆಚ್ಚು ಹೈ-ಡೆಫಿನಿಷನ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಮೈದಾನದ ಒಳಗೆ ಪ್ರತ್ಯೇಕ ಹೈಟೆಕ್ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿ ಕಣ್ಗಾವಲು ಇರಿಸಲಾಗಿದೆ.

ವೇದಿಕೆಗಳ ವ್ಯವಸ್ಥೆ: ಮೈದಾನದಲ್ಲಿ ಎರಡು ಬೃಹತ್ ವೇದಿಕೆಗಳನ್ನು ನಿರ್ಮಿಸಲಾಗಿದೆ. ಮುಖ್ಯ ವೇದಿಕೆಯಲ್ಲಿ ತ್ರಿವರ್ಣ ಧ್ವಜದ ಹಿನ್ನೆಲೆಯಿದ್ದು, ವಿಪಕ್ಷಗಳ ಪ್ರಮುಖ ವರಿಷ್ಠರು ಭಾಷಣ ಮಾಡಲಿದ್ದಾರೆ. ಗಣ್ಯರ ಆಗಮನಕ್ಕಾಗಿ ಗೇಟ್ ನಂ. 1 ಅನ್ನು ಮೀಸಲಿಡಲಾಗಿದ್ದು, ಸಾರ್ವಜನಿಕರಿಗೆ 5 ಪ್ರತ್ಯೇಕ ಗೇಟ್‌ಗಳನ್ನು ತೆರೆಯಲಾಗಿದೆ.

ಸಂಚಾರ ಸಲಹೆ : ಕನ್ನಾಟ್ ಪ್ಲೇಸ್, ಮಿಂಟೋ ರಸ್ತೆ, ದೀನ್‌ದಯಾಳ್ ಉಪಾಧ್ಯಾಯ ಮಾರ್ಗ, ಜೆಎಲ್‌ಎನ್ ಮಾರ್ಗ ಹಾಗೂ ನವದೆಹಲಿ ರೈಲು ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಗಳಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿರುವುದರಿಂದ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಟ್ರಾಫಿಕ್ ಪೊಲೀಸರು ಸಾರ್ವಜನಿಕರಿಗೆ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ