AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಜರ್ಮನಿಯ ಹೇಳಿಕೆ ‘ಅನಗತ್ಯ ಹಸ್ತಕ್ಷೇಪ’: ಕೇಂದ್ರ ಸರ್ಕಾರ

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, ಜರ್ಮನಿಯ ಹೇಳಿಕೆಯನ್ನು ಭಾರತದ ಆಂತರಿಕ ವಿಷಯಗಳಲ್ಲಿ "ಅನಗತ್ಯ ಹಸ್ತಕ್ಷೇಪ" ಎಂದು ಅರ್ಥೈಸಿದೆ ಎಂದು ಎಎನ್ಐ ವರದಿ ಮಾಡಿದೆ. ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಚೇರಿಯಿಂದ ಎಂಜ್ವೀಲರ್ ಹೊರಹೋಗುತ್ತಿರುವುದು ಕಂಡುಬಂದಿದೆ.

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಜರ್ಮನಿಯ ಹೇಳಿಕೆ 'ಅನಗತ್ಯ ಹಸ್ತಕ್ಷೇಪ': ಕೇಂದ್ರ ಸರ್ಕಾರ
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
|

Updated on: Mar 23, 2024 | 2:26 PM

Share

ದೆಹಲಿ ಮಾರ್ಚ್ 23: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಬಂಧನದ ಕುರಿತು ಜರ್ಮನಿ (Germany) ನೀಡಿದ ಹೇಳಿಕೆಯನ್ನು ವಿರೋಧಿಸಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (EAM) ಜರ್ಮನಿಯ ರಾಯಭಾರಿಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಜರ್ಮನ್ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಜಾರ್ಜ್ ಎಂಜ್ವೀಲರ್ (George Enzweiler) ಅವರನ್ನು ಸಚಿವಾಲಯಕ್ಕೆ ಕರೆಯಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, ಜರ್ಮನಿಯ ಹೇಳಿಕೆಯನ್ನು ಭಾರತದ ಆಂತರಿಕ ವಿಷಯಗಳಲ್ಲಿ “ಅನಗತ್ಯ ಹಸ್ತಕ್ಷೇಪ” ಎಂದು ಅರ್ಥೈಸಿದೆ ಎಂದು ಎಎನ್ಐ ವರದಿ ಮಾಡಿದೆ. ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಚೇರಿಯಿಂದ ಎಂಜ್ವೀಲರ್ ಹೊರಹೋಗುತ್ತಿರುವುದು ಕಂಡುಬಂದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಗುರುವಾರ ರಾತ್ರಿ ಬಂಧಿಸಲಾಗಿದೆ. ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಜರ್ಮನ್ ವಿದೇಶಾಂಗ ಸಚಿವಾಲಯದ ವಕ್ತಾರರು, ನಾವು ಪ್ರಕರಣವನ್ನು ಗಮನಿಸಿದ್ದೇವೆ. ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಈ ಸಂದರ್ಭದಲ್ಲಿ ಕೇಜ್ರಿವಾಲ್ ಅವರಿಗೆ ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ಮೂಲಭೂತ ಪ್ರಜಾಪ್ರಭುತ್ವದ ತತ್ವಗಳಿಗೆ ಸಂಬಂಧಿಸಿದ ಮಾನದಂಡಗಳನ್ನು ಸಹ ಅನ್ವಯಿಸಲಾಗುತ್ತದೆ ಎಂದು ನಾವು ಭಾವಿಸುತ್ತೇವೆ, ನಿರೀಕ್ಷಿಸುತ್ತೇವೆ. ಆರೋಪಗಳನ್ನು ಎದುರಿಸುತ್ತಿರುವ ಯಾವುದೇ ವ್ಯಕ್ತಿಯಂತೆ ಅರವಿಂದ್  ಕೇಜ್ರಿವಾಲ್ ಅವರು ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆಗೆ ಅರ್ಹರಾಗಿದ್ದಾರೆ. ಅವರು ಲಭ್ಯವಿರುವ ಎಲ್ಲಾ ಕಾನೂನು ಮಾರ್ಗಗಳನ್ನು ಬಳಸಿಕೊಳ್ಳಬಹುದು ಎಂದು ಜರ್ಮನ್ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಕಳುಹಿಸಿದ ಒಂಬತ್ತು ಸಮನ್ಸ್‌ಗಳನ್ನು ನಿರ್ಲಕ್ಷಿಸಿದ ನಂತರ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಶುಕ್ರವಾರ ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.

ಅರವಿಂದ್ ಕೇಜ್ರಿವಾಲ್ ಅವರ ಎಎಪಿ ಪಕ್ಷ, ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡುವುದಿಲ್ಲ. ನಾವು ಸರ್ಕಾರವನ್ನು ಜೈಲಿನಲ್ಲಿ ನಡೆಸುತ್ತೇವೆ ಎಂದು ಹೇಳಿದೆ. ಏತನ್ಮಧ್ಯೆ, ಬಿಜೆಪಿ ನೈತಿಕ ಆಧಾರದ ಮೇಲೆ ಕೇಜ್ರಿವಾಲ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: Himachal Politics: ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ

ಕೇಜ್ರಿವಾಲ್ ಬಂಧನಕ್ಕೊಳಗಾದ ಮೊದಲ ಮುಖ್ಯಮಂತ್ರಿ. ಬಂಧನಕ್ಕೂ ಮುನ್ನ ಇತರ ನಾಯಕರು ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜಾರಿ ನಿರ್ದೇಶನಾಲಯದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಪ್ರತಿಭಟಿಸಿ ಮಾರ್ಚ್ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ “ಘೇರಾವ್” ಮಾಡುವುದಾಗಿ ಆಮ್ ಆದ್ಮಿ ಪಕ್ಷ ಘೋಷಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!