India-Canada Row: ಕೆನಡಾದ ಗಡಿ ಪೊಲೀಸ್ ಅಧಿಕಾರಿ ವಿರುದ್ಧ ಭಾರತ ಭಯೋತ್ಪಾದನೆ ಪ್ರಕರಣ ದಾಖಲು
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ರಾಜತಾಂತ್ರಿಕರು ಭಾಗಿಯಾಗಿದ್ದಾರೆ ಎಂದು ಕೆನಡಾದ ಪ್ರಧಾನಿ ಟ್ರುಡೊ ಆರೋಪಿಸಿದ್ದರು. ಈ ಆರೋಪವನ್ನು ಭಾರತ ತಳ್ಳಿಹಾಕಿತ್ತು. ಇದೀಗ ಕೆನಡಾದ ಗಡಿ ಪೊಲೀಸ್ ಅಧಿಕಾರಿ ವಿರುದ್ಧ ಭಯೋತ್ಪಾದನೆ ಪ್ರಕರಣ ದಾಖಲಿಸುವ ಮೂಲಕ ಭಾರತ ತಿರುಗೇಟು ನೀಡಿದೆ.
ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಹದಗೆಡುತ್ತಿರುವ ಸಂಬಂಧಗಳ ನಡುವೆ, ಕೆನಡಾದಿಂದ ಗಡಿಪಾರು ಮಾಡಲು ಭಾರತ ಆಗ್ರಹಿಸುತ್ತಿರುವ ಭಯೋತ್ಪಾದಕರ ಪಟ್ಟಿಯಲ್ಲಿ ಕೆನಡಾದ ಗಡಿ ಸೇವಾ ಸಂಸ್ಥೆ (CBSA) ಅಧಿಕಾರಿಯ ಹೆಸರನ್ನು ಭಾರತ ಸೇರಿಸಿದೆ. ಹೌದು, ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಕೆನಡಾದ ಗಡಿ ಪೊಲೀಸ್ ಅಧಿಕಾರಿ ಕೆನಡಿಯನ್ ಬಾರ್ಡರ್ ಸರ್ವಿಸ್ ಏಜೆನ್ಸಿ (ಸಿಬಿಎಸ್‌ಎ)ನ ಹೆಸರು ಭಾರತವು ಕೆನಡಾದಿಂದ ಗಡಿಪಾರು ಮಾಡಲು ಬಯಸುತ್ತಿರುವ ಪರಾರಿಯಾದ ಭಯೋತ್ಪಾದಕರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.
ಕೆನಡಾದಿಂದ ಪೌರತ್ವ ಪಡೆದ ಮತ್ತು ಕಳೆದ ವರ್ಷ ಕೊಲ್ಲಲ್ಪಟ್ಟ ಅಕ್ರಮ ವಲಸಿಗ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ರಾಜತಾಂತ್ರಿಕರ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಇತ್ತೀಚಿನ ಆರೋಪಗಳು ಕೆನಡಾ ಸರ್ಕಾರವು ಖಲಿಸ್ತಾನಿ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಬಗ್ಗೆ ಮತ್ತೊಮ್ಮೆ ಗಮನ ಸೆಳೆದಿದೆ.
ಇದನ್ನೂ ಓದಿ: ದೇಶ ಬಿಟ್ಟು ತೊಲಗುವಂತೆ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತ ಡೆಡ್ಲೈನ್!
ಕೆನಡಾದಲ್ಲಿ ಸಕ್ರಿಯವಾಗಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಾರತೀಯ ಸರ್ಕಾರಿ ಏಜೆಂಟರೊಂದಿಗೆ ಸಂಪರ್ಕ ಹೊಂದಿದೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೋಲೀಸ್ ಕೆಲವು ದಿನಗಳ ಹಿಂದೆ ಹೇಳಿತ್ತು. ಇದಾದ ನಂತರ, ಭಾರತದ ವಿದೇಶಾಂಗ ಸಚಿವಾಲಯವು ಕೆನಡಾ ಸರ್ಕಾರವು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರನ್ನು ಗಡಿಪಾರು ಮಾಡಬೇಕೆಂಬ ಭಾರತದ ಮನವಿಯನ್ನು ನಿರ್ಲಕ್ಷಿಸಿದೆ ಎಂದು ಹೇಳಿದೆ.
ವರದಿಗಳ ಪ್ರಕಾರ, ನಿಷೇಧಿತ ಇಂಟರ್‌ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‌ವೈಎಫ್) ಸದಸ್ಯ ಮತ್ತು ಸಿಬಿಎಸ್‌ಎಯಲ್ಲಿ ಉದ್ಯೋಗಿಯಾಗಿರುವ ಸಂದೀಪ್ ಸಿಂಗ್ ಸಿಧು ಅವರನ್ನು ಪಂಜಾಬ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸುವಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಪಟ್ಟಿಗೆ ಸೇರಿಸಲಾಗಿದೆ.
ಇದನ್ನೂ ಓದಿ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಪ್ರೇಯಸಿಯನ್ನು ಜೀವಂತವಾಗಿ ಸುಟ್ಟು ಹಾಕಿದ್ರಾ?
ತನ್ನ ಗಡಿಯೊಳಗೆ ಕಾರ್ಯಾಚರಿಸುತ್ತಿರುವ ಭಾರತ ವಿರೋಧಿ ಅಂಶಗಳ ವಿರುದ್ಧ ಕೆನಡಾ ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾಗಿರುವ ಬಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ. ಕಳೆದ ಎರಡು ದಶಕಗಳಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದ ವ್ಯಕ್ತಿಗಳು ಸೇರಿದಂತೆ ಕೆನಡಾದೊಂದಿಗೆ 26 ಭಾರತೀಯ ಹಸ್ತಾಂತರ ವಿನಂತಿಗಳು ಬಾಕಿ ಉಳಿದಿವೆ ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:08 pm, Fri, 18 October 24