ಗಡಿಪ್ರದೇಶದಲ್ಲಿ ಚೀನಾದ ಚಟುವಟಿಕೆಯನ್ನು ಭಾರತ ಎಚ್ಚರಿಕೆಯಿಂದ ಗಮನಿಸುತ್ತಿದೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಭಾರತ ಸರ್ಕಾರವು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಪ್ರಾದೇಶಿಕ ಸಮಗ್ರತೆ, ಸಾರ್ವಭೌಮತ್ವವನ್ನು ಕಾಪಾಡಲು ಸರ್ಕಾರವು ಎಲ್ಲಾ ಸಮರ್ಪಕ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ

ಗಡಿಪ್ರದೇಶದಲ್ಲಿ ಚೀನಾದ ಚಟುವಟಿಕೆಯನ್ನು ಭಾರತ ಎಚ್ಚರಿಕೆಯಿಂದ ಗಮನಿಸುತ್ತಿದೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಅರಿಂದಮ್ ಬಾಗ್ಚಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 09, 2022 | 9:01 PM

ದೆಹಲಿ: ಪಶ್ಚಿಮ ವಲಯದಲ್ಲಿ ಚೀನಾದ (China) ಮೂಲಸೌಕರ್ಯ ನಿರ್ಮಾಣ ಸೇರಿದಂತೆ ಗಡಿ ಪ್ರದೇಶಗಳಲ್ಲಿನ ಚಟುವಟಿಕೆಗಳನ್ನು ಭಾರತ ಎಚ್ಚರಿಕೆಯಿಂದ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಗುರುವಾರ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಭಾರತ ಸರ್ಕಾರವು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಪ್ರಾದೇಶಿಕ ಸಮಗ್ರತೆ, ಸಾರ್ವಭೌಮತ್ವವನ್ನು ಕಾಪಾಡಲು ಸರ್ಕಾರವು ಎಲ್ಲಾ ಸಮರ್ಪಕ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ(Arindam Bagchi) ಹೇಳಿದ್ದಾರೆ. ಲಡಾಖ್ ಪ್ರದೇಶದಲ್ಲಿ ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಚೀನೀ ಚಟುವಟಿಕೆ ಆತಂಕ ಹುಟ್ಟಿಸುವಂತದ್ದು ಎಂದು ಅಮೆರಿಕದ ಹಿರಿಯ ಜನರಲ್ ಹೇಳಿದ ನಂತರ ಎಂಇಎಯ ಈ ಹೇಳಿಕೆ ಬಂದಿದೆ. ಅಮೆರಿಕ ಆರ್ಮಿ ಪೆಸಿಫಿಕ್‌ನ ಕಮಾಂಡಿಂಗ್ ಜನರಲ್ ಚಾರ್ಲ್ಸ್ ಎ ಫ್ಲಿನ್ (Charles A Flynn) ಅವರು ಹಿಮಾಲಯದ ಗಡಿಯಲ್ಲಿ ಚೀನಾದ ಮೂಲಸೌಕರ್ಯ ನಿರ್ಮಾಣದ ಕುರಿತು ಮಾತನಾಡಿದ್ದು, ಚೀನಾದ್ದು ಅಸ್ಥಿರಗೊಳಿಸುವ ಮತ್ತು ವಿನಾಶಕಾರಿ ನಡವಳಿಕೆ ಎಂದಿದ್ದಾರೆ. “ಚಟುವಟಿಕೆಗಳು ಗಾಬರಿ ಹುಟ್ಟಿಸುತ್ತವೆ. ವೆಸ್ಟರ್ನ್ ಥಿಯೇಟರ್ ಕಮಾಂಡ್‌ನಲ್ಲಿ ರಚಿಸಲಾಗುತ್ತಿರುವ ಕೆಲವು ಮೂಲಸೌಕರ್ಯಗಳು ಆತಂಕಕಾರಿಯಾಗಿದೆ ಎಂದು ನಾನು ಭಾವಿಸುತ್ತೇನೆ. ಅವರ ಎಲ್ಲಾ ಮಿಲಿಟರಿ ಶಸ್ತ್ರಾಗಾರದಂತಿರುವ ಅದನ್ನು ಯಾಕೆ ಎಂದು ಕೇಳಬೇಕು ಎಂದು ಏಷ್ಯಾ-ಪೆಸಿಫಿಕ್ ಪ್ರದೇಶವನ್ನು ನೋಡಿಕೊಳ್ಳುವ ಜನರಲ್ ಆಯ್ದ ಪತ್ರಕರ್ತರ ಗುಂಪಿಗೆ ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿತ್ತು.

ಮೇ 31 ರಂದು ಭಾರತ-ಚೀನಾ ಗಡಿ ವ್ಯವಹಾರಗಳ ಸಮಾಲೋಚನೆ ಮತ್ತು ಸಮನ್ವಯಕ್ಕಾಗಿ ಕಾರ್ಯಾಚರಣಾ ಕಾರ್ಯವಿಧಾನವು ವರ್ಚುವಲ್ ಆಗಿ ಭೇಟಿಯಾಗಿತ್ತು. ಲಡಾಖ್‌ನಲ್ಲಿ ಎಲ್ಎಸಿ ಉದ್ದಕ್ಕೂ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳನ್ನು ಮುಂದುವರಿಸಲು ಒಪ್ಪಿಕೊಂಡಿತು. ಭಾರತದ ತಂಡಕ್ಕೆ ಹೆಚ್ಚುವರಿ ಕಾರ್ಯದರ್ಶಿ (ಪೂರ್ವ ಏಷ್ಯಾ) ನವೀನ್ ಶ್ರೀವಾಸ್ತವ ನೇತೃತ್ವ ವಹಿಸಿದ್ದು ಚೀನಾವನ್ನು ವಿದೇಶಾಂಗ ಸಚಿವಾಲಯದ ಗಡಿ ಮತ್ತು ಸಾಗರ ವ್ಯವಹಾರಗಳ ವಿಭಾಗದ ಮಹಾನಿರ್ದೇಶಕ ಹಾಂಗ್ ಲಿಯಾಂಗ್ ನೇತೃತ್ವ ವಹಿಸಿದ್ದರು.

ಇಬ್ಬರು ವಿದೇಶಾಂಗ ಮಂತ್ರಿಗಳ ಸೂಚನೆಯಂತೆ “ದ್ವಿಪಕ್ಷೀಯ ಸಂಬಂಧಗಳಲ್ಲಿ ಸಹಜತೆಯನ್ನು ಪುನಃಸ್ಥಾಪಿಸಲು ಪರಿಸ್ಥಿತಿಗಳನ್ನು ಸೃಷ್ಟಿಸಲು ಎಲ್ಎಸಿಯಲ್ಲಿ ಉಳಿದಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ರಾಜತಾಂತ್ರಿಕ ಮತ್ತು ಮಿಲಿಟರಿ ಚಾನೆಲ್ಗಳ ಮೂಲಕ ಚರ್ಚೆಗಳನ್ನು ಮುಂದುವರಿಸಬೇಕು” ಎಂದು ಎರಡೂ ಕಡೆಯವರು ಒಪ್ಪಿಕೊಂಡರು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ
Image
ಲಡಾಖ್ ಬಳಿ ಚೀನಾದ ಚಟುವಟಿಕೆಯು ಆತಂಕ ಹುಟ್ಟಿಸುವಂತದ್ದು: ಅಮೆರಿಕದ ಕಮಾಂಡಿಂಗ್ ಜನರಲ್
Image
ಲಡಾಖ್​ನಲ್ಲಿ ಮತ್ತೆ ಚಟುವಟಿಕೆ ಆರಂಭಿಸಿದ ಚೀನಾ: ಭಾರತಕ್ಕೆ ಅಮೆರಿಕ ಎಚ್ಚರಿಕೆ
Image
ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಒಐಸಿ ಟೀಕೆ ಅನಗತ್ಯ ಮತ್ತು ಸಂಕುಚಿತ ಮನಸ್ಸಿನದ್ದು ಎಂದ ಭಾರತ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ