India-China Border Clash: ಅರುಣಾಚಲ ಪ್ರದೇಶದಲ್ಲಿ ಯುದ್ಧ ವಿಮಾನ ಗಸ್ತು ನಡೆಸುತ್ತಿರುವ ಭಾರತೀಯ ವಾಯುಪಡೆ
ಚೀನಾದಿಂದ ವಾಯುಪ್ರದೇಶದ ಉಲ್ಲಂಘನೆಯನ್ನು ತಡೆಯಲು ಭಾರತೀಯ ವಾಯುಪಡೆಯು ಅರುಣಾಚಲ ಪ್ರದೇಶದಲ್ಲಿ ಸಕ್ರಿಯ ಯುದ್ಧ ವಿಮಾನ ಗಸ್ತು ನಡೆಸುತ್ತಿದೆ
ಅರುಣಾಚಲ: ಚೀನಾದಿಂದ ವಾಯುಪ್ರದೇಶದ ಉಲ್ಲಂಘನೆಯನ್ನು ತಡೆಯಲು ಭಾರತೀಯ ವಾಯುಪಡೆಯು ಅರುಣಾಚಲ ಪ್ರದೇಶದಲ್ಲಿ ಸಕ್ರಿಯ ಯುದ್ಧ ವಿಮಾನ ಗಸ್ತು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿದೆ. ಈಗಾಗಲೇ ಭಾರತ ಸೇನೆಯ ಮೂರು ಪಡೆಗಳು ಮುಖ್ಯಸ್ಥರ ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಸಭೆಯನ್ನು ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಇತ್ತೀಚಿನ ಘರ್ಷಣೆ ಬಗ್ಗೆ ಸಭೆಯನ್ನು ಇಂದು ನಡೆಸಲಿದ್ದಾರೆ.
ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಮೂರು ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ.
ಇದನ್ನು ಓದಿ: ಇಂದು ಸೇನೆಯ ಮೂರು ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಮಹತ್ವದ ಸಭೆ
ಜೊತೆಗೆ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ, ಗಿರಿಧರ್ ಅರಮನೆ ಕೂಡ ಉಪಸ್ಥಿತರಿರುವರು.
Published On - 11:26 am, Tue, 13 December 22