ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ

ಬಾಂಗ್ಲಾದೇಶದ ಢಾಕಾದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರವನ್ನು ಭಾರತ ಖಂಡಿಸಿದೆ. ಬಾಂಗ್ಲಾದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯಬೇಕೆಂದು ಭಾರತ ಒತ್ತಾಯಿಸಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಬೌದ್ಧರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಉಗ್ರಗಾಮಿ ಅಂಶಗಳು ನಡೆಸುತ್ತಿರುವ ಇಂತಹ ನಿರಂತರ ಹಗೆತನ ಖಂಡನೀಯ. ಅವುಗಳನ್ನು ರಾಜಕೀಯ ಹಿಂಸಾಚಾರ ಎಂದು ಕರೆದು ನಿರ್ಲಕ್ಷಿಸಲಾಗುವುದಿಲ್ಲ ಎಂದು ಹೇಳಿದೆ.

ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ
Randhir Jaiswal

Updated on: Dec 26, 2025 | 5:51 PM

ಢಾಕಾ, ಡಿಸೆಂಬರ್ 26: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಹಿಂದೂ ಪುರುಷರ ಹತ್ಯೆಯ ಘಟನೆಗಳನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಇತ್ತೀಚಿನ ಹತ್ಯೆಯಿಂದ ಭಾರತ ವಿಚಲಿತವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರ ಜವಾಬ್ದಾರಿಯುತರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. “ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ವಿರುದ್ಧ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಈ ಹತ್ಯೆಯ ಅಪರಾಧಿಗಳ ಸಾವಿಗೆ ನ್ಯಾಯ ದೊರಕುತ್ತದೆ ಎಂದು ನಿರೀಕ್ಷಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ.

ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧ ಸುಮಾರು 2,900 ಹಿಂಸಾಚಾರ ಘಟನೆಗಳು ನಡೆದಿವೆ. ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಭೀಕರ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಬಾಂಗ್ಲಾದೇಶ ಹೊರಡಿಸಿದ ಸುಳ್ಳು ನಿರೂಪಣೆಯನ್ನು ತಿರಸ್ಕರಿಸಿ ನಾವು ಈ ಹಿಂದೆಯೂ ಹೇಳಿಕೆಗಳನ್ನು ನೀಡಿದ್ದೇವೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್

ಈ ತಿಂಗಳು ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯನ್ನು ಗುಂಪೊಂದು ಥಳಿಸಿ ಕೊಂದ ಎರಡು ಪ್ರತ್ಯೇಕ ಘಟನೆಗಳು ನಡೆದಿತ್ತು. ಬುಧವಾರ ತಡರಾತ್ರಿ ರಾಜ್‌ಬರಿ ಜಿಲ್ಲೆಯಲ್ಲಿ ಹಿಂದೂ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿತು. ಅಧಿಕಾರಿಗಳ ಪ್ರಕಾರ, ಈ ಹಿಂಸಾಚಾರವು ಸುಲಿಗೆಗೆ ಸಂಬಂಧಿಸಿದ ಚಟುವಟಿಕೆಗಳಿಂದ ಹುಟ್ಟಿಕೊಂಡಿದೆ ಎಂದು ಆರೋಪಿಸಲಾಗಿದೆ. ಭಾರತ ಬಾಂಗ್ಲಾದೇಶದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.


ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಆಧಾರರಹಿತ ಧರ್ಮನಿಂದನೆಯ ಆರೋಪದ ಮೇಲೆ ಗುಂಪೊಂದು ಥಳಿಸಿ, ಬೆಂಕಿ ಹಚ್ಚಿ, ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಅವರನ್ನು ಹತ್ಯೆ ಮಾಡಲಾಗಿತ್ತು. ಆದರೆ, ಈ ಹತ್ಯೆಯನ್ನು ಖಂಡಿಸಿದ ಭಾರತ ಈ ಕೃತ್ಯದ ಅಪರಾಧಿಗಳಿಗೆ ನ್ಯಾಯ ನೀಡಲಾಗುವುದು ಎಂದು ಜೈಸ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: Bomb Attack: ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಬಾಂಬ್ ದಾಳಿಗೆ ಒಬ್ಬ ಬಲಿ

“ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ” ಎಂದು ಅವರು ಉಲ್ಲೇಖಿಸಿದ್ದಾರೆ.


“ಬಾಂಗ್ಲಾದೇಶದ ಜನರೊಂದಿಗೆ ನಮ್ಮ ಸಂಬಂಧಗಳನ್ನು ಬಲಪಡಿಸಲು ಭಾರತವು ಬದ್ಧವಾಗಿದೆ. ನಾವು ಬಾಂಗ್ಲಾದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತೇವೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಮತ್ತು ಭಾಗವಹಿಸುವ ಚುನಾವಣೆಗಳಿಗೆ ನಿರಂತರವಾಗಿ ಕರೆ ನೀಡುತ್ತಿದ್ದೇವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ