AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಕಾ ಬಳಿ ಹೌತಿ ಡ್ರೋನ್ ದಾಳಿ ಯತ್ನಕ್ಕೆ ಭಾರತ ಖಂಡನೆ; ಪಶ್ಚಿಮ ಏಷ್ಯಾದಲ್ಲಿ ಶಾಂತಿಗೆ ಕರೆ

ಸೌದಿ ಅರೇಬಿಯಾದ ಮೆಕ್ಕಾದ ಬಳಿ ಯೆಮೆನ್‌ನ ಹೌತಿ ರೆಬೆಲ್‌ಗಳು ನಡೆಸಲು ಯತ್ನಿಸಿದ ಡ್ರೋನ್ ದಾಳಿಯ ಕುರಿತು ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿ ಶೀಘ್ರದಲ್ಲೇ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವಂತೆ ಭಾರತ ಸರ್ಕಾರ ಆಗ್ರಹಿಸಿದೆ. ವಿಶ್ವಾದ್ಯಂತ ಇರುವ ಮುಸ್ಲಿಂ ಬಾಂಧವರಿಗೆ ಮೆಕ್ಕಾ ನಗರಿಯು ಅತ್ಯಂತ ವಿಶೇಷ ಮತ್ತು ಪವಿತ್ರವಾದ ಸ್ಥಳವಾಗಿದೆ. ಸೌದಿ ಅರೇಬಿಯಾದ ಸಾರ್ವಭೌಮ ಭೂಪ್ರದೇಶದ ಮೇಲಿನ ದಾಳಿಗಳನ್ನು ಹಾಗೂ ನಾಗರಿಕರ ಪ್ರಾಣ ಮತ್ತು ಮೂಲಸೌಕರ್ಯಗಳಿಗೆ ಧಕ್ಕೆ ತರುವ ಕೃತ್ಯಗಳನ್ನು ಭಾರತ ಖಂಡಿಸುತ್ತದೆ ಎಂದು ಭಾರತ ಹೇಳಿದೆ.

ಮೆಕ್ಕಾ ಬಳಿ ಹೌತಿ ಡ್ರೋನ್ ದಾಳಿ ಯತ್ನಕ್ಕೆ ಭಾರತ ಖಂಡನೆ; ಪಶ್ಚಿಮ ಏಷ್ಯಾದಲ್ಲಿ ಶಾಂತಿಗೆ ಕರೆ
ಮೆಕ್ಕಾ Image Credit source: AP
ಸುಷ್ಮಾ ಚಕ್ರೆ
|

Updated on: Sep 16, 2026 | 6:05 PM

Share

ನವದೆಹಲಿ, ಸೆಪ್ಟೆಂಬರ್ 16: ಸೌದಿ ಅರೇಬಿಯಾದ ಪವಿತ್ರ ನಗರ ಮೆಕ್ಕಾದ ಸಮೀಪ ನಡೆದ ಡ್ರೋನ್ ದಾಳಿಯ ಯತ್ನವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಜನರ ಪ್ರಾಣ ಮತ್ತು ಮೂಲಸೌಕರ್ಯಗಳಿಗೆ ಧಕ್ಕೆ ತರುವ ಯಾವುದೇ ಕೃತ್ಯಗಳನ್ನು ಭಾರತ ವಿರೋಧಿಸುತ್ತದೆ ಎಂದು ತಿಳಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, ಜಗತ್ತಿನಾದ್ಯಂತ ಇರುವ ಮುಸ್ಲಿಂ ಬಾಂಧವರಿಗೆ ಮೆಕ್ಕಾ ಅತ್ಯಂತ ಪವಿತ್ರವಾದ ಸ್ಥಳವಾಗಿರುವುದರಿಂದ ಈ ಘಟನೆ ತೀವ್ರ ಆತಂಕಕಾರಿಯಾಗಿದೆ ಎಂದು ಹೇಳಿದೆ.

ಮಂಗಳವಾರ ಸಂಜೆ ಮೆಕ್ಕಾದ ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಹೌತಿ ಬಂಡುಕೋರರ ಡ್ರೋನ್ ಒಂದನ್ನು ಸೌದಿ ಅರೇಬಿಯಾ ವಾಯುಪಡೆಯು ಆಕಾಶದಲ್ಲೇ ಹೊಡೆದುರುಳಿಸಿ ನಾಶಪಡಿಸಿದೆ ಎಂದು ಸೌದಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಹೌತಿ ಸಂಘಟನೆಯು ಈ ಆರೋಪವನ್ನು ತಳ್ಳಿಹಾಕಿದ್ದು, ತಾವು ಮೆಕ್ಕಾಗೆ ಯಾವುದೇ ಬೆದರಿಕೆ ಒಡ್ಡಿಲ್ಲ ಎಂದು ಹೇಳಿಕೊಂಡಿದೆ.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಮೆಕ್ಕಾ ಸಮೀಪ ನಡೆದ ಡ್ರೋನ್ ದಾಳಿಯ ಯತ್ನದಿಂದ ನಮಗೆ ತೀವ್ರ ಕಳವಳವಾಗಿದೆ. ಸೌದಿ ಅರೇಬಿಯಾದ ಸಾರ್ವಭೌಮ ಭೂಪ್ರದೇಶದ ಮೇಲಿನ ದಾಳಿಗಳನ್ನು ಹಾಗೂ ನಾಗರಿಕರ ಜೀವಕ್ಕೆ ಅಪಾಯ ತಂದೊಡ್ಡುವ ಕೃತ್ಯಗಳನ್ನು ಭಾರತ ಖಂಡಿಸುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 21 ಭಾರತೀಯರಿದ್ದ ಬ್ರಿಟಿಷ್ ಹಡಗಿನ ಮೇಲೆ ಹೌತಿ ಬಂಡುಕೋರರ ದಾಳಿ, ಸಹಾಯಕ್ಕೆ ಧಾವಿಸಿದ ಭಾರತೀಯ ನೌಕಾಪಡೆ

ಮಂಗಳವಾರ ಸಂಜೆ ಮೆಕ್ಕಾದ ದಕ್ಷಿಣ ಭಾಗದಲ್ಲಿ ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಹೂತಿ ಬಂಡುಕೋರರ ಡ್ರೋನ್ ಒಂದನ್ನು ಸೌದಿ ಅರೇಬಿಯಾ ವಾಯುರಕ್ಷಣಾ ಪಡೆಯು ಆಕಾಶದಲ್ಲೇ ಪತ್ತೆಹಚ್ಚಿ ಧ್ವಂಸಗೊಳಿಸಿದೆ. 2017ರಲ್ಲಿ ನಡೆದ ಕ್ಷಿಪಣಿ ದಾಳಿಯ ಯತ್ನದ ನಂತರ ಮೆಕ್ಕಾ ನಗರವನ್ನು ಗುರಿಯಾಗಿಸಿಕೊಂಡು ನಡೆದ ಎರಡನೇ ದಾಳಿ ಇದಾಗಿದೆ ಎಂದು ಸೌದಿ ಸಶಸ್ತ್ರ ಪಡೆ ತಿಳಿಸಿದೆ.

‘ರೆಡ್ ಲೈನ್’ ಎಚ್ಚರಿಕೆ ನೀಡಿದ ಸೌದಿ ಒಕ್ಕೂಟ:

ಸೌದಿ ನೇತೃತ್ವದ ಮಿಲಿಟರಿ ಒಕ್ಕೂಟದ ವಕ್ತಾರ ಟರ್ಕಿ ಅಲ್-ಮಾಲಿಕಿ ಮಾತನಾಡಿ, ಇಸ್ಲಾಂ ಧರ್ಮದ ಎರಡು ಪವಿತ್ರ ಮಸೀದಿಗಳು ಹಾಗೂ ಯಾತ್ರಿಕರ ಸುರಕ್ಷತೆಯು ನಮಗೆ ‘ರೆಡ್ ಲೈನ್’ ಇದ್ದಂತೆ. ಇದಕ್ಕೆ ಧಕ್ಕೆ ತಂದರೆ ಕಠಿಣ ಪ್ರತ್ಯುತ್ತರ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ಹೌತಿ ಬಂಡುಕೋರರ ದಾಳಿ: ಮಂಗಳೂರಿನ ಗೋಡಂಬಿ ಉದ್ಯಮಕ್ಕೆ ಪೆಟ್ಟು

ಆರೋಪ ತಳ್ಳಿಹಾಕಿದ ಹೌತಿ ಪಡೆಗಳು:

ಸೌದಿ ಸರ್ಕಾರದ ಈ ಆರೋಪವನ್ನು ಹೌತಿ ಸಂಘಟನೆಯ ರಾಜಕೀಯ ವಿಭಾಗದ ಅಧಿಕಾರಿ ಹಝೆಮ್ ಅಲ್-ಅಸ್ಸಾದ್ ತಳ್ಳಿಹಾಕಿದ್ದು, “ಮೆಕ್ಕಾವನ್ನು ಗುರಿಯಾಗಿಸಿಕೊಂಡಿದ್ದೇವೆ ಎಂಬ ಸೌದಿಯ ಹೇಳಿಕೆಯು ಸಂಪೂರ್ಣ ಸುಳ್ಳು” ಎಂದು ಪ್ರತ್ಯುತ್ತರ ನೀಡಿದ್ದಾರೆ.

ಸೆಪ್ಟೆಂಬರ್ 13ರಂದು ನಡೆದ ಬ್ರಿಕ್ಸ್ (BRICS) ಶೃಂಗಸಭೆಯ ವೇಳೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಸೌದಿ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ನಡುವೆ ಹೌತಿ ದಾಳಿಗಳ ಕುರಿತು ಮಹತ್ವದ ಚರ್ಚೆ ನಡೆದಿತ್ತು. ಸರಕು ಹಡಗುಗಳು ಹಾಗೂ ಆರ್ಥಿಕ ಸಂಪನ್ಮೂಲಗಳ ಮೇಲಿನ ಉಗ್ರ ದಾಳಿಗಳನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!