India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 89,129 ಕೊರೊನಾ ಪ್ರಕರಣ ಪತ್ತೆ; 714 ಜನರು ಬಲಿ

India Covid-19 Update: ಸದ್ಯ ದೇಶದಲ್ಲಿ 6,58,909 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲೊಂದೇ 714 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 89,129  ಕೊರೊನಾ ಪ್ರಕರಣ ಪತ್ತೆ; 714 ಜನರು ಬಲಿ
ಮಾಸ್ಕ್ ಧಾರಣೆ ಕಡ್ಡಾಯ
Follow us
guruganesh bhat
| Updated By: Skanda

Updated on: Apr 03, 2021 | 10:40 AM

ದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 89,129 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಈವರೆಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಸಂಖ್ಯೆ 1,23,92,260ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 6,58,909 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲೊಂದೇ 714 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾಕ್ಕೆ 1,64,110 ಜನರು ಬಲಿಯಾದಂತಾಗಿದೆ. ಕೊರೊನಾ ಚಿಕಿತ್ಸೆ ಪಡೆದು 1,15,69,241 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯೂ ತೀವ್ರಗತಿಯಲ್ಲಿ ನಡೆಯುತ್ತಿದ್ದು 7,30,54,295 ಜನರಿಗೆ ಕೊವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹರಡುವ ವೇಗಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಈಗಾಗಲೇ ಪ್ರಕಟವಾಗಿದೆ. 8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್​, ಬಾರ್, ಪಬ್​, ಕ್ಲಬ್, ರೆಸ್ಟೊರೆಂಟ್​ಗೆ ಶೇ 50ರಷ್ಟು ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಈ ನಿಯಮಗಳು ಅನ್ವಯವಾಗಲಿದೆ.

ಅಲ್ಲದೆ, ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್​ಗಳು ಬಂದ್ ಆಗಲಿವೆ. 6ರಿಂದ 9ನೇ ತರಗತಿಯವರೆಗೆ ಶಾಲೆಗಳು ಕಾರ್ಯನಿರ್ವಹಿಸುವುದಿಲ್ಲ. ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಉಳಿದಂತೆ ಇತರ ನಗರಗಳ ಪಬ್‌, ಬಾರ್‌ಗಳಲ್ಲಿ ಮಾಸ್ಕ್‌, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದಕ್ಕೆ ನಿಷೇಧ ಮುಂದುವರಿಯಲಿದೆ. ಸಭೆ, ಸಮಾರಂಭ ಆಚರಣೆಗೆ ಮಾರ್ಚ್ 12ರ ಸುತ್ತೋಲೆ ಅನ್ವಯವಾಗಲಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ. ಅಂತರ ಕಾಪಾಡಿಕೊಳ್ಳುವ ವಿಚಾರದಲ್ಲಿ ಜನರು ಎಚ್ಚರ ವಹಿಸಬೇಕು. ಈ ನಿಯಮಗಳನ್ನು ಪೊಲೀಸರು, ಸ್ಥಳೀಯ ಆಡಳಿತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಲಾಗಿದೆ. ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅದರನ್ವಯ ಯಾವುದೇ ರೀತಿಯ ಜಾಥಾ, ಮುಷ್ಕರ, ಧರಣಿ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರಿಗೆ ಬಸ್‌ಗಳಲ್ಲಿ ನಿಗದಿತ ಆಸನದಷ್ಟೇ ಜನರನ್ನು ಕೊಂಡೊಯ್ಯಬೇಕು. ಸಾಧ್ಯವಾದ ಮಟ್ಟಿಗೆ ಮನೆಯಿಂದಲೇ ಕಚೇರಿ ಕೆಲಸ  (ವರ್ಕ್​ಫ್ರಂ) ಸೌಲಭ್ಯ ಬಳಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: ಕೊವಿಡ್ ಹಾವಳಿ ಶಾಂತವಾದ ನಂತರ ಹುಟ್ಟಿಕೊಳ್ಳಲಿವೆಯೇ ಸೂಪರ್ ಬ್ಯಾಕ್ಟೀರಿಯಾಗಳು?

ಕೊರೊನಾ ಎರಡನೇ ಅಲೆಗೆ ಕಾಫಿನಾಡು ಕಂಗಾಲು.. ಮೊನ್ನೆ ದಂಪತಿ ಸಾವು, ಇಂದು ಒಂದೇ ಶಾಲೆಯ 26 ವಿದ್ಯಾರ್ಥಿನಿಯರಿಗೆ ಸೋಂಕು