AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron: 7 ತಿಂಗಳ ನಂತರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲು; 3,000 ಗಡಿ ದಾಟಿದ ಒಮಿಕ್ರಾನ್

Covid 19 cases in India: ಭಾರತದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದು ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಒಮಿಕ್ರಾನ್ ಪ್ರಕರಣಗಳ ಒಟ್ಟಾರೆ ಸಂಖ್ಯೆ 3000 ಗಡಿ ದಾಟಿದೆ.

Omicron: 7 ತಿಂಗಳ ನಂತರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲು; 3,000 ಗಡಿ ದಾಟಿದ ಒಮಿಕ್ರಾನ್
ಪ್ರಾತಿನಿಧಿಕ ಚಿತ್ರ
TV9 Web
| Updated By: shivaprasad.hs|

Updated on: Jan 07, 2022 | 10:55 AM

Share

ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಕೊವಿಡ್ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, ಈ ಮೂಲಕ ಭಾರತದಲ್ಲಿ ಕೊರೊನಾ ಪ್ರಕರಣಗಳು ಲಕ್ಷ ಗಡಿಯನ್ನು ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ವ್ಯವಹಾರಗಳ ಸಚಿವಾಲಯದ ಇಂದಿನ ಮಾಹಿತಿಯ ಪ್ರಕಾರ, ದೇಶದ ಪ್ರಸ್ತುತ ಪ್ರಕರಣಗಳ ಸಂಖ್ಯೆ 3,71,363 ರಷ್ಟಿದೆ. ಭಾರತದಲ್ಲಿ ಕೊನೆಯ ಬಾರಿಗೆ ಒಂದೇ ದಿನ ಒಂದು ಲಕ್ಷಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು 2021ರ ಜೂನ್ 6ಕ್ಕೆ. ಏಳು ತಿಂಗಳ ನಂತರ ಭಾರತದಲ್ಲಿ ಮತ್ತೆ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳು ಒಂದೇ ದಿನದಲ್ಲಿ ವರದಿಯಾಗಿವೆ. ಅಲ್ಲದೇ ಈ ಬಾರಿ ದೇಶದಲ್ಲಿ 10,000 ಪ್ರಕರಣದಿಂದ ಕೇವಲ ಎಂಟೇ ದಿನದಲ್ಲಿ 1 ಲಕ್ಷ ಪ್ರಕರಣಕ್ಕೆ ಏರಿಕೆಯಾಗಿದ್ದು ಆತಂಕ ಹುಟ್ಟಿಸಿದೆ. ಒಮಿಕ್ರಾನ್ ಪ್ರಕರಣಗಳಲ್ಲೂ ತೀವ್ರ ಏರಿಕೆ ಕಂಡುಬರುತ್ತಿದ್ದು, ಇದುವರೆಗೆ ಒಟ್ಟು 3,007 ಪ್ರಕರಣಗಳು ವರದಿಯಾಗಿವೆ. ದೇಶದ 27 ರಾಜ್ಯಗಳಲ್ಲಿ ಒಮಿಕ್ರಾನ್ ವರದಿಯಾಗಿದ್ದು, ಸೋಂಕಿತರಲ್ಲಿ 1,199 ರೋಗಿಗಳು ಗುಣಮುಖರಾಗಿದ್ದಾರೆ.

ಭಾರತದಲ್ಲಿ ದೈನಂದಿನ ಕೊರೊನಾ ಪಾಸಿಟಿವಿಟಿ ದರವು ಶೇ.7.74ಕ್ಕೆ ತಲುಪಿದೆ. ಭಾರತದಲ್ಲಿ ಒಂದೇ ದಿನ 302 ರೋಗಿಗಳು ಸಾವನ್ನಪ್ಪಿದ್ದು, ದೇಶದಲ್ಲಿ ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 4,83,178 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 30,836 ಜನರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಚೇತರಿಕೆ ಪ್ರಮಾಣ ಶೇ.97.57ಕ್ಕೆ ತಲುಪಿದೆ.

ದೇಶದಲ್ಲಿ ಇದುವರೆಗೆ 68 ಕೋಟಿ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದಲ್ಲದೆ ಸುಮಾರು ಒಂದು ವರ್ಷದ ಹಿಂದೆ ಪ್ರಾರಂಭಿಸಲಾದ ಲಸಿಕಾ ಅಭಿಯಾನದಲ್ಲಿ ಇದುವರೆಗೆ ಸುಮಾರು 149.66 ಕೋಟಿಗೂ ಅಧಿಕ ಡೋಸ್​ಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ.

ಇಂದು ಪ್ರಧಾನಿ ಮೋದಿ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ಸಾಧ್ಯತೆ: ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆಯಿದೆ. ದೇಶದಲ್ಲಿ ಕೋವಿಡ್ -19 ಪರಿಸ್ಥಿತಿ ಬಿಗಡಾಯಿಸುತ್ತಿರುವುದು ಮತ್ತು ಅದನ್ನು ಸಾಮೂಹಿಕವಾಗಿ ಎದುರಿಸುವುದು ಹೇಗೆ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸೋಂಕಿತ ವ್ಯಕ್ತಿಗಳಿಂದ ಇತರರಿಗೆ ಸೋಂಕು ಹರಡವುದನ್ನು ತಪ್ಪಿಸಲು ಪರೀಕ್ಷೆಗಳನ್ನು ಹೆಚ್ಚಿಸುವಂತೆ ಕೇಂದ್ರವು ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ ಸಭೆ ನಡೆಸುವ ತೀರ್ಮಾನ ಕೈಗೊಂಡಿರುವುದು ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ:

PM Modi: ದೇಶದಲ್ಲಿ ತೀವ್ರ ಗತಿಯಲ್ಲಿ ಕೊವಿಡ್ ಹೆಚ್ಚಳ; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Ayodhya Earthquake ಉತ್ತರ ಪ್ರದೇಶದ ಅಯೋಧ್ಯೆ ಬಳಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ