India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ.

India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ
ಕೊರೊನಾವೈರಸ್Image Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 24, 2022 | 10:13 AM

ನವದೆಹಲಿ: ಭಾರತದಲ್ಲಿ ಕೊವಿಡ್ ಕೇಸುಗಳ (Covid Cases) ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಇಂದು (ಶುಕ್ರವಾರ) 17,336 ಹೊಸ ಕೊವಿಡ್ (Coronavirus) ಸೋಂಕು ಪ್ರಕರಣ ದಾಖಲಾಗಿದೆ. ಈ ಮೂಲಕ ಕಳೆದ 4 ತಿಂಗಳಲ್ಲೇ ಅತಿ ಹೆಚ್ಚು ಕೊವಿಡ್ -19 ಪ್ರಕರಣಗಳ ಜಿಗಿತವನ್ನು ಕಂಡಿದೆ. ಇದೀಗ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಗುರುವಾರ 5,218 ಹೊಸ ಕೊರೋನವೈರಸ್ ಸೋಂಕುಗಳು ವರದಿಯಾಗಿತ್ತು. ಹಿಂದಿನ ದಿನದ ಪ್ರಕರಣಗಳಿಗೆ ಹೋಲಿಸಿದರೆ ಕೊರೊನಾವೈರಸ್ ಕೇಸುಗಳ ಸಂಖ್ಯೆ ಶೇ. 60ರಷ್ಟು ಏರಿಕೆಯಾಗಿದೆ. ಮುಂಬೈ ಒಂದರಲ್ಲೇ ಅತಿ ಹೆಚ್ಚು 4,166 ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13 ಹೊಸ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,24,954ಕ್ಕೆ ತಲುಪಿದೆ.

ಇದನ್ನೂ ಓದಿ: Virat Kohli Covid-19: ಮಾಲ್ಡೀವ್ಸ್​ಗೆ ತೆರಳಿದ್ದ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್..!

ರಾಷ್ಟ್ರೀಯ COVID-19 ಚೇತರಿಕೆ ದರವು ಶೇ. 98.60ರಷ್ಟು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,294 ಹೆಚ್ಚಾಗಿದೆ. ದೈನಂದಿನ ಪಾಸಿಟಿವ್ ದರವು ಶೇ. 3.94 ಮತ್ತು ವಾರದ ಪಾಸಿಟಿವ್ ದರವು ಶೇ. 2.90ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಗುರುವಾರ ಕರ್ನಾಟಕದಲ್ಲಿ 858 ಹೊಸ ಕೋವಿಡ್-19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದ್ದು, ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 39,63,633ಕ್ಕೆ ಏರಿಕೆಯಾಗಿದೆ. ಒಟ್ಟು ಸಾವುಗಳು ಕ್ರಮವಾಗಿ 40,072ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ 682 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 39,18,452ಕ್ಕೆ ತಲುಪಿದೆ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್