ನವದೆಹಲಿ: ಭಾರತದಲ್ಲಿ ಕೊವಿಡ್ ಕೇಸುಗಳ (Covid Cases) ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಇಂದು (ಶುಕ್ರವಾರ) 17,336 ಹೊಸ ಕೊವಿಡ್ (Coronavirus) ಸೋಂಕು ಪ್ರಕರಣ ದಾಖಲಾಗಿದೆ. ಈ ಮೂಲಕ ಕಳೆದ 4 ತಿಂಗಳಲ್ಲೇ ಅತಿ ಹೆಚ್ಚು ಕೊವಿಡ್ -19 ಪ್ರಕರಣಗಳ ಜಿಗಿತವನ್ನು ಕಂಡಿದೆ. ಇದೀಗ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಗುರುವಾರ 5,218 ಹೊಸ ಕೊರೋನವೈರಸ್ ಸೋಂಕುಗಳು ವರದಿಯಾಗಿತ್ತು. ಹಿಂದಿನ ದಿನದ ಪ್ರಕರಣಗಳಿಗೆ ಹೋಲಿಸಿದರೆ ಕೊರೊನಾವೈರಸ್ ಕೇಸುಗಳ ಸಂಖ್ಯೆ ಶೇ. 60ರಷ್ಟು ಏರಿಕೆಯಾಗಿದೆ. ಮುಂಬೈ ಒಂದರಲ್ಲೇ ಅತಿ ಹೆಚ್ಚು 4,166 ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13 ಹೊಸ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,24,954ಕ್ಕೆ ತಲುಪಿದೆ.
ಇದನ್ನೂ ಓದಿ: Virat Kohli Covid-19: ಮಾಲ್ಡೀವ್ಸ್ಗೆ ತೆರಳಿದ್ದ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್..!
ರಾಷ್ಟ್ರೀಯ COVID-19 ಚೇತರಿಕೆ ದರವು ಶೇ. 98.60ರಷ್ಟು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,294 ಹೆಚ್ಚಾಗಿದೆ. ದೈನಂದಿನ ಪಾಸಿಟಿವ್ ದರವು ಶೇ. 3.94 ಮತ್ತು ವಾರದ ಪಾಸಿಟಿವ್ ದರವು ಶೇ. 2.90ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಗುರುವಾರ ಕರ್ನಾಟಕದಲ್ಲಿ 858 ಹೊಸ ಕೋವಿಡ್-19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದ್ದು, ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 39,63,633ಕ್ಕೆ ಏರಿಕೆಯಾಗಿದೆ. ಒಟ್ಟು ಸಾವುಗಳು ಕ್ರಮವಾಗಿ 40,072ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ 682 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 39,18,452ಕ್ಕೆ ತಲುಪಿದೆ.