India Covid Updates: ಭಾರತದಲ್ಲಿ ಒಂದೇ ದಿನ 2,151 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಇದು ಐದು ತಿಂಗಳಲ್ಲೇ ಅತಿ ಹೆಚ್ಚು

ದೇಶದಲ್ಲಿ 2,151 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದು ಕಳೆದ ವರ್ಷ ಅಕ್ಟೋಬರ್‌ನಿಂದ ಅತಿ ಹೆಚ್ಚು ಎಂದು ಹೇಳಲಾಗಿದೆ.

India Covid Updates: ಭಾರತದಲ್ಲಿ ಒಂದೇ ದಿನ 2,151 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಇದು ಐದು ತಿಂಗಳಲ್ಲೇ ಅತಿ ಹೆಚ್ಚು
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 29, 2023 | 10:47 AM

ದೆಹಲಿ: ಭಾರತದಲ್ಲಿ ಅತಿ ಹೆಚ್ಚು ಕೋವಿಡ್ -19 (Covid-19) ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ 2,151 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದು ಕಳೆದ ವರ್ಷ ಅಕ್ಟೋಬರ್‌ನಿಂದ ಅತಿ ಹೆಚ್ಚು ಎಂದು ಹೇಳಲಾಗಿದೆ. ಭಾರತವು ಬುಧವಾರ 2,151 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ. ಆದರೆ ಸಕ್ರಿಯ ಪ್ರಕರಣಗಳು 11,903 ಕ್ಕೆ ಏರಿದೆ ಎಂದು ಇಂದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್​ಸೈಟ್​ನಲ್ಲಿ ಅಂಕಿಅಂಶಗಳು ತಿಳಿಸಿವೆ. ಇದುವರೆಗೂ ಏಳು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 5,30,848 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಿಂದ ಮೂರು, ಕರ್ನಾಟಕದಿಂದ ಒಂದು ಮತ್ತು ಕೇರಳದಿಂದ ಮೂರು ಸಾವುಗಳು ವರದಿಯಾಗಿವೆ. ದೈನಂದಿನ ಪಾಸಿಟಿವ್​ ಪ್ರಕರಣದ ದರವು 1.51 ಪ್ರತಿಶತ ಮತ್ತು ವಾರದ ಪಾಸಿಟಿವ್​ ಪ್ರಕರಣ ದರವನ್ನು 1.53 ಪ್ರತಿಶತದಲ್ಲಿ ದಾಖಲಿಸಲಾಗಿದೆ.

ಹೊಸ ಪ್ರಕರಣಗಳು ಸಾಂಕ್ರಾಮಿಕ ರೋಗ ಹರಡಿದಾಗಿನಿಂದ ದೇಶದಲ್ಲಿ ಒಟ್ಟು ಕೋವಿಡ್ ಸಂಖ್ಯೆ 4.47 ಕೋಟಿಯಾಗಿದೆ (4,47,09,676). ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳ 0.03 ಪ್ರತಿಶತವನ್ನು ಒಳಗೊಂಡಿವೆ. ಕೋವಿಡ್​​ನಿಂದ ಚೇತರಿಕೆಗೊಂಡವರ ಸಂಖ್ಯೆ 98.78 ಪ್ರತಿಶತದಷ್ಟು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ಇದನ್ನೂ ಓದಿ: India Covid Updates: ಭಾರತದಲ್ಲಿ ಒಂದೇ ದಿನ 1,590 ಹೊಸ ಕೊರೊನಾ ಪ್ರಕರಣಗಳು ಪತ್ತೆ

1,200ಕ್ಕೂ ಹೆಚ್ಚು ಜನ ಕೊರೊನಾ ಹೊಸ ಚೇತರಿಸಿಕೊಳ್ಳುವುದರೊಂದಿಗೆ ಕೋವಿಡ್‌ನಿಂದ ಚೇತರಿಸಿಕೊಂಡ ಜನರ ಸಂಖ್ಯೆ 4,41,66,925 ಕ್ಕೆ ಏರಿದೆ. ಕೋವಿಡ್ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 11,336 ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಇದುವರೆಗೆ 220.65 ಕೋಟಿ ಲಸಿಕೆ ಡೋಸ್‌ ಪಡೆದುಕೊಂಡಿದ್ದಾರೆ. 95.20 ಕೋಟಿ ಎರಡನೇ ಡೋಸ್‌ಗಳು ಮತ್ತು 22.86 ಕೋಟಿ ಮುನ್ನೆಚ್ಚರಿಕೆ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ.

Published On - 10:32 am, Wed, 29 March 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್