India Covid Updates: ಭಾರತದಲ್ಲಿ ಹೊಸದಾಗಿ 13,734 ಕೊರೊನಾ ಪ್ರಕರಣಗಳು ಪತ್ತೆ, 34 ಸಾವು
24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 13,734 ಹೊಸ ಕರೋನ ವೈರಸ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿನ ಸಂಖ್ಯೆಯು 4,40,50,009 ಕ್ಕೆ ತಲುಪಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ COVID-19 ಪ್ರಕರಣಗಳು 1,39,792 ರಷ್ಟಿದೆ.
ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 13,734 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿನ ಸಂಖ್ಯೆಯು 4,40,50,009 ಕ್ಕೆ ತಲುಪಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ COVID-19 ಪ್ರಕರಣಗಳು 1,39,792 ರಷ್ಟಿದೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತವು 34 ಕೋವಿಡ್-ಸಂಬಂಧಿತ ಸಾವುಗಳನ್ನು ವರದಿಯಾಗಿದೆ, COVID-19 ನಿಂದಾಗಿ ಒಟ್ಟು ಸಾವಿನ ಸಂಖ್ಯೆಯನ್ನು 5,26,430 ಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 1.6 ಪ್ರತಿಶತವನ್ನು ಒಳಗೊಂಡಿವೆ, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.5 ಪ್ರತಿಶತದಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್ ಡೋಸ್ ಕೂಡ ನೀಡಲಾಗುತ್ತಿದೆ.
Published On - 10:09 am, Tue, 2 August 22