ದೇಶದಲ್ಲಿ ದಿನೇ ದಿನೆ ಕೊರೊನಾ(Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರು ರಾಜ್ಯಗಳಲ್ಲಿ ಮತ್ತೆ ಕೋವಿಡ್ ನಿಯಮ(Covid Rules) ಗಳನ್ನು ಜಾರಿಗೊಳಿಸಲಾಗಿದೆ. ಈ ಮೂರು ರಾಜ್ಯಗಳಲ್ಲಿ ಮಾಸ್ಕ್(Mask) ಧರಿಸುವುದು ಕಡ್ಡಾಯಗೊಳಿಸಲಾಗಿದ್ದು, ಇತರೆ ಎಚ್ಚರಿಕೆವಹಿಸುವಂತೆ ತಿಳಿಸಲಾಗಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪರಿಶೀಲನಾ ಸಭೆಯನ್ನು ನಡೆಸಿದರು ಮತ್ತು ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲಿಸಲು ಮತ್ತು ಜಾಗರೂಕರಾಗಿರಲು ರಾಜ್ಯಗಳ ಬಳಿ ಮನವಿ ಮಾಡಿದ್ದಾರೆ.
ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳ ತುರ್ತು ಸಿದ್ಧತೆಯನ್ನು ಗಮನಿಸಲು ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಅಣಕು ಡ್ರಿಲ್ ಯೋಜಿಸಲಾಗಿದೆ. ಇತ್ತೀಚಿನ ಸೋಂಕುಗಳ ಉಲ್ಬಣವನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವರು ಭರವಸೆ ನೀಡಿದರು. ಐಸಿಯು ಹಾಸಿಗೆಗಳು, ಆಮ್ಲಜನಕ ಪೂರೈಕೆ ಮತ್ತು ಇತರ ನಿರ್ಣಾಯಕ ಆರೈಕೆ ವ್ಯವಸ್ಥೆಗಳು ಜಾರಿಯಲ್ಲಿವೆ ಎಂದು ಅವರು ಹೇಳಿದರು.
ಕೋವಿಡ್ ಸಾಂಕ್ರಾಮಿಕದ ನಾಲ್ಕನೇ ವೇವ್ ಬಗ್ಗೆ ಆರೋಗ್ಯ ಸಚಿವರು ಎಚ್ಚರಿಕೆವಹಿಸುವ ಅಗತ್ಯವಿದೆ.
ಮತ್ತಷ್ಟು ಓದಿ: Covid in India: ದೇಶದಲ್ಲಿ ಒಂದೇ ದಿನ 2,994 ಕೋವಿಡ್ ಪ್ರಕರಣ ದಾಖಲು; ರಾಜ್ಯಗಳು ಕೈಗೊಂಡಿರುವ ಕ್ರಮಗಳೇನು?
ಹರ್ಯಾಣ:
ಹರ್ಯಾಣ ಸರ್ಕಾರವು ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.
ರಾಜ್ಯದ ಆರೋಗ್ಯ ಇಲಾಖೆಯುಕೋವಿಡ್ ಸೂಕ್ತ ನಡವಳಿಯನ್ನು ಅಳವಡಿಸಿಕೊಳ್ಳುವಂತೆ ಸಾರ್ವಜನಿಕರನ್ನು ಒತ್ತಾಯಿಸಿದೆ.
ಕೇರಳ
ಗರ್ಭಿಣಿಯರು, ವೃದ್ಧರು ಹಾಗೆಯೇ ಅನೇಕ ಕಾಯಿಲೆಗಳಿಂದ ಬಳಲುತ್ತಿರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂದು ಕೇರಳ ಆರೋಗ್ಯ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಉತ್ತನ ಮಟ್ಟದ ಸಭೆ ನಡೆಸಿ ನಂತರ ಕೋವಿಡ್ ಸಂಬಂಧಿತ ಸಾವುಗಳು 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಹಾಗೂ ಮಧುಮೇಹ ಇನ್ನಿತರೆ ಕಾಯಿಲೆಗಳಿರುವಲ್ಲಿ ಹೆಚ್ಚು ಎಂದು ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಪುದುಚೇರಿ
ಪುದುಚೇರಿ ಆಡಳಿತವು ತಕ್ಷಣವೇ ಜಾರಿಗೆ ಬರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಆಸ್ಪತ್ರೆ , ಹೋಟೆಲ್ಗಳು, ರೆಸ್ಟೋರೆಂಟ್ಗಳು, ಮದ್ಯದ ಅಂಗಡಿಗಳು, ಆತಿಥ್ಯ ಮತ್ತು ಸರ್ಕಾರಿ ಕಚೇರಿಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಲಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 5,357 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 32 ಸಾವಿರಕ್ಕೆ ಏರಿಕೆಯಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ