ಭಾರತದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ; ಹೆಮ್ಮೆಯ ಕ್ಷಣವೆಂದ ಪ್ರಧಾನಿ ಮೋದಿ
ಭಾರತ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ತಲುಪಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕಲ್ಲಿದ್ದಲು ಸಚಿವಾಲಯವನ್ನು ಅಭಿನಂದಿಸಿದ್ದಾರೆ. ಭಾರತದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯಾಗಿರುವುದು ದೇಶಕ್ಕೆ ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣ ಎಂದು ಮೋದಿ ಬಣ್ಣಿಸಿದ್ದಾರೆ. 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಮೈಲಿಗಲ್ಲನ್ನು ದಾಟುವುದು ಗಮನಾರ್ಹ ಸಾಧನೆಯಾಗಿದೆ. ಇದು ಇಂಧನ ಭದ್ರತೆ, ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ನಮ್ಮ ಬದ್ಧತೆಯನ್ನು ಎತ್ತಿ ತೋರಿಸುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನವದೆಹಲಿ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿ ಇಂದು 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ಸಾಧಿಸಿದ್ದಕ್ಕಾಗಿ ಕಲ್ಲಿದ್ದಲು ಸಚಿವಾಲಯವನ್ನು ಅಭಿನಂದಿಸಿದ್ದಾರೆ. ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಈ ಸಾಧನೆಯು “ಇಂಧನ ಭದ್ರತೆ, ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ಗಮನಾರ್ಹ ಬದ್ಧತೆಯನ್ನು” ಸೂಚಿಸುತ್ತದೆ. ಇದು “ಭಾರತಕ್ಕೆ ಹೆಮ್ಮೆಯ ಕ್ಷಣ” ಎಂದು ಕರೆದಿದ್ದಾರೆ. ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಅವರು ಎಕ್ಸ್ ನಲ್ಲಿ ಮೈಲಿಗಲ್ಲನ್ನು ಹಂಚಿಕೊಂಡಿದ್ದರು. ಭಾರತ ಈ ಮಹತ್ವದ ಉತ್ಪಾದನಾ ಮಟ್ಟವನ್ನು ತಲುಪಿದೆ ಎಂದಿದ್ದರು.
“ಭಾರತವು 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ದಾಟಿದೆ! ಅತ್ಯಾಧುನಿಕ ತಂತ್ರಜ್ಞಾನಗಳು ಮತ್ತು ದಕ್ಷ ವಿಧಾನಗಳೊಂದಿಗೆ, ನಾವು ಉತ್ಪಾದನೆಯನ್ನು ಹೆಚ್ಚಿಸಿದ್ದೇವೆ. ಇಷ್ಟು ಮಾತ್ರವಲ್ಲದೆ ಸುಸ್ಥಿರ ಮತ್ತು ಜವಾಬ್ದಾರಿಯುತ ಗಣಿಗಾರಿಕೆಯನ್ನು ನಡೆಸುತ್ತಿದ್ದೇವೆ. ಈ ಸಾಧನೆಯು ದೇಶದ ಹೆಚ್ಚುತ್ತಿರುವ ಇಂಧನ ಬೇಡಿಕೆಗಳನ್ನು ಪೂರೈಸಲು, ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡಲು ಮತ್ತು ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಪ್ರತಿಯೊಬ್ಬ ಭಾರತೀಯನ ಉಜ್ವಲ ಭವಿಷ್ಯಕ್ಕೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ” ಎಂದು ಕಿಶನ್ ರೆಡ್ಡಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದರು.
ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಬಿಲ್ ಗೇಟ್ಸ್; ಭಾರತದ ಅಭಿವೃದ್ಧಿಯ ಪ್ರಗತಿಗೆ ಶ್ಲಾಘನೆ
ಇದಕ್ಕೆ ರೀಟ್ವೀಟ್ ಮಾಡಿರುವ ಪ್ರಧಾನಿ ಮೋದಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಸಾಧನೆಯು ಕಲ್ಲಿದ್ದಲು ವಲಯಕ್ಕೆ ಸಂಬಂಧಿಸಿದ ಎಲ್ಲರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದಿರುವ ಮೋದಿ, ಇದೊಂದು ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣ ಎಂದಿದ್ದಾರೆ.
A Proud Moment for India!
Crossing the monumental milestone of 1 Billion tonnes of coal production is a remarkable achievement, highlighting our commitment to energy security, economic growth and self-reliance. This feat also reflects the dedication and hardwork of all those… https://t.co/K8sHQssLHq
— Narendra Modi (@narendramodi) March 21, 2025
ಈ ವಾರದ ಆರಂಭದಲ್ಲಿ ಕೇಂದ್ರ ಸರ್ಕಾರವು 2025-26ರ ಹಣಕಾಸು ವರ್ಷಕ್ಕೆ ವಿದ್ಯುತ್ ವಲಯಕ್ಕೆ 906.1 ಮಿಲಿಯನ್ ಟನ್ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿತ್ತು. ಮುಂದಿನ ಹಣಕಾಸು ವರ್ಷಕ್ಕೆ ಕಲ್ಲಿದ್ದಲು ಅವಶ್ಯಕತೆಗಳ ಕುರಿತು ವಿದ್ಯುತ್ ಸಚಿವಾಲಯದಿಂದ ವಿನಂತಿಯನ್ನು ಸ್ವೀಕರಿಸಿದ ನಂತರ ಕಲ್ಲಿದ್ದಲು ಸಚಿವಾಲಯವು ಈ ಯೋಜನೆಯನ್ನು ಸಂಸತ್ತಿನಲ್ಲಿ ಮಂಡಿಸಿತು. ಕೇಂದ್ರ ವಿದ್ಯುತ್ ಪ್ರಾಧಿಕಾರ (ಸಿಇಎ) ಪ್ರಕಾರ, ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳು 53.49 ಮೆಟ್ರಿಕ್ ಟನ್ ದಾಸ್ತಾನು ಹೊಂದಿದ್ದು, 2024 ರಲ್ಲಿ ಅದೇ ದಿನ ದಾಖಲಾದ 44.51 ಮೆಟ್ರಿಕ್ ಟನ್ ಕಲ್ಲಿದ್ದಲು ಉತ್ಪಾದನೆಗಿಂತ 20.2% ಹೆಚ್ಚಳವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ