ಅಫ್ಘಾನಿಸ್ತಾನದಿಂದ ಬಂದವರಿಗೆ ಭಾರತದಲ್ಲಿ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಆರೋಗ್ಯ ಸಚಿವ

Mansukh Mandaviya: ಭೀಕರ ಪೋಲಿಯೊ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಅಫ್ಘಾನಿಸ್ತಾನಕ್ಕೆ ಮರಳಿದವರಿಗೆ ಉಚಿತ ಪೋಲಿಯೋ ಲಸಿಕೆ - ಒಪಿವಿ ಮತ್ತು ಎಫ್‌ಐಪಿವಿ ಲಸಿಕೆ ಹಾಕಲು ನಾವು ನಿರ್ಧರಿಸಿದ್ದೇವೆ. ಸಾರ್ವಜನಿಕ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಮಾಡುತ್ತಿರುವ ಪ್ರಯತ್ನಗಳಿಗಾಗಿ ಆರೋಗ್ಯ ತಂಡಕ್ಕೆ ಅಭಿನಂದನೆಗಳು

ಅಫ್ಘಾನಿಸ್ತಾನದಿಂದ ಬಂದವರಿಗೆ ಭಾರತದಲ್ಲಿ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಆರೋಗ್ಯ ಸಚಿವ
ದೆಹಲಿ ವಿಮಾನ ನಿಲ್ದಾಣದಲ್ಲಿ ಪೋಲಿಯೊ ಲಸಿಕೆ ವಿತರಣೆ (ಕೃಪೆ: ಮನ್ಸುಖ್ ಮಾಂಡವಿಯಾ ಟ್ವೀಟ್)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 22, 2021 | 1:40 PM

ದೆಹಲಿ: ಪೋಲಿಯೊ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಅಫ್ಘಾನಿಸ್ತಾನದಿಂದ ಬಂದವರಿಗೆ ಉಚಿತವಾಗಿ ಪೋಲಿಯೋ ಲಸಿಕೆ ಹಾಕಲು ಭಾರತ ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾನುವಾರ ತಿಳಿಸಿದ್ದಾರೆ. ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಪಸ್ ಬರುವವರು ಲಸಿಕೆ ಪಡೆಯುತ್ತಿರುವ ಫೋಟೊವನ್ನು ಸಚಿವರು ಹಂಚಿಕೊಂಡಿದ್ದಾರೆ.  ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಮಾತ್ರ ಪೋಲಿಯೊ ರೋಗವನ್ನು ಹೊಂದಿರುವ ವಿಶ್ವದ ಎರಡು ದೇಶಗಳಾಗಿವೆ.

ಭೀಕರ ಪೋಲಿಯೊ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಅಫ್ಘಾನಿಸ್ತಾನಕ್ಕೆ ಮರಳಿದವರಿಗೆ ಉಚಿತ ಪೋಲಿಯೋ ಲಸಿಕೆ – ಒಪಿವಿ ಮತ್ತು ಎಫ್‌ಐಪಿವಿ ಲಸಿಕೆ ಹಾಕಲು ನಾವು ನಿರ್ಧರಿಸಿದ್ದೇವೆ. ಸಾರ್ವಜನಿಕ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಮಾಡುತ್ತಿರುವ ಪ್ರಯತ್ನಗಳಿಗಾಗಿ ಆರೋಗ್ಯ ತಂಡಕ್ಕೆ ಅಭಿನಂದನೆಗಳು. ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಸಿಕೆ ವಿತರಣೆ ಮಾಡುತ್ತಿರುವುದನ್ನು ನೋಡಿ ಎಂದು ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ವಾರದ ಹಿಂದೆ ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಅಫ್ಘಾನಿಸ್ತಾನದ ರಾಜಧಾನಿ ನಗರದಲ್ಲಿ ಹದಗೆಟ್ಟಿರುವ ಭದ್ರತಾ ಪರಿಸ್ಥಿತಿಯ ನಡುವೆ ಐಎಎಫ್ ನ ಸೇನಾ ವಿಮಾನದಲ್ಲಿ 107 ಭಾರತೀಯರು ಸೇರಿದಂತೆ 168 ಜನರನ್ನು ಭಾರತ ಭಾನುವಾರ ಸ್ಥಳಾಂತರಿಸಿದೆ.

ತಾಲಿಬಾನ್ ಕಾಬೂಲ್ ಮೇಲೆ ಹಿಡಿತ ಸಾಧಿಸಿದ ನಂತರ ಐಎಎಫ್ ನ ಎರಡು ಸಿ -17 ಹೆವಿ-ಲಿಫ್ಟ್ ಸಾರಿಗೆ ವಿಮಾನದಲ್ಲಿ ಭಾರತೀಯ ರಾಯಭಾರಿ ಮತ್ತು ಕಾಬೂಲ್ ನಲ್ಲಿರುವ ತನ್ನ ರಾಯಭಾರ ಕಚೇರಿಯ ಇತರ ಸಿಬ್ಬಂದಿಗಳು ಸೇರಿದಂತೆ 200 ಜನರನ್ನು ದೇಶವು ಸ್ಥಳಾಂತರಿಸಿತು. ಮೊದಲ ವಿಮಾನವು 40 ಜನರನ್ನು ಕರೆದುಕೊಂಡು ಬಂದಿದ್ದು ಇದರಲ್ಲಿ ಹೆಚ್ಚಿನವರು ಭಾರತೀಯ ರಾಯಭಾರ ಕಚೇರಿಯಲ್ಲಿ ಹೆಚ್ಚಿನ ಸಿಬ್ಬಂದಿಯಾಗಿದ್ದಾರೆ.

ಎರಡನೇ ಸಿ -17 ವಿಮಾನವು ಭಾರತೀಯ ರಾಜತಾಂತ್ರಿಕರು, ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಮತ್ತು ಕಾಬೂಲ್‌ನಲ್ಲಿ ಸಿಲುಕಿರುವ ಕೆಲವು ಭಾರತೀಯರನ್ನು ಒಳಗೊಂಡಂತೆ ಸುಮಾರು 150 ಜನರನ್ನು ಮಂಗಳವಾರ ಸ್ಥಳಾಂತರಿಸಿದೆ.

ತಾಲಿಬಾನ್ ಈ ತಿಂಗಳು ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಿದೆ. ಅಮೆರಿಕ ತನ್ನ ಪಡೆಗಳನ್ನು ಹಿಂತೆಗೆದುಕೊಳ್ಳುತ್ತಿದ್ದಂತೆ ತಾಲಿಬಾನ್ ಕಾಬೂಲ್ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ಪಟ್ಟಣಗಳು ಮತ್ತು ನಗರಗಳ ಮೇಲೆ ಹಿಡಿತ ಸಾಧಿಸಿತು.

ಇದನ್ನೂ ಓದಿ: ಅಲ್ಲಿ ಎಲ್ಲವೂ ಮುಗಿದು ಹೋಯ್ತು ಕಣ್ಣೀರಾದ ಅಫ್ಘಾನಿಸ್ತಾನದ ಸಂಸದ ನರೀಂದರ್ ಸಿಂಗ್ ಖಾಲ್ಸಾ

ಇದನ್ನೂ ಓದಿ: ವಾಯುಸೇನೆ ವಿಮಾನದಲ್ಲಿ ಆಫ್ಘನ್‌ನಿಂದ ಭಾರತಕ್ಕೆ ವಾಪಸಾದ 107 ಭಾರತೀಯರು

(India decides to vaccinate Afghanistan returnees against polio for free Mansukh Mandaviya tweets)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ