AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ಬಗ್ಗೆ ಭಾರತ ತೀವ್ರ ಕಳವಳ

ಯುಎಸ್-ಇರಾನ್ ನಡುವಿನ ಕದನ ವಿರಾಮದ ಮಧ್ಯೆ ಲೆಬನಾನ್‌ನಲ್ಲಿ ನಾಗರಿಕ ಸಾವುನೋವುಗಳು ಉಂಟಾಗುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಲೆಬನಾನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ಅದರಲ್ಲೂ ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ನಾಗರಿಕ ಸಾವುನೋವುಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಲೆಬನಾನ್​ನ ಈ ಬೆಳವಣಿಗೆಗಳನ್ನು ಭಾರತ ತುಂಬಾ ಕಳವಳಕಾರಿ ಸಂಗತಿ ಎಂದು ಕರೆದಿದೆ. ಇಸ್ರೇಲ್ ಲೆಬನಾನ್‌ನಲ್ಲಿ ದಾಳಿಗಳನ್ನು ನಡೆಸಿ 250ಕ್ಕೂ ಹೆಚ್ಚು ಜನರನ್ನು ಕೊಂದ ಹಿನ್ನೆಲೆಯಲ್ಲಿ ಭಾರತ ಈ ಹೇಳಿಕೆ ನೀಡಿದೆ.

ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ಬಗ್ಗೆ ಭಾರತ ತೀವ್ರ ಕಳವಳ
Randhir Jaiswal Image Credit source: PTI
ಸುಷ್ಮಾ ಚಕ್ರೆ
|

Updated on: Apr 10, 2026 | 5:33 PM

Share

ನವದೆಹಲಿ, ಏಪ್ರಿಲ್ 10: ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಿಂದ (Israel Attack) ಜನರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್ ದಾಳಿಯಿಂದಾಗಿ ಲೆಬನಾನ್‌ನಲ್ಲಿ ಹೆಚ್ಚುತ್ತಿರುವ ಜನರ ಸಾವಿನ ಸಂಖ್ಯೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನವಿರಾಮದ ನಂತರ ಲೆಬನಾನ್‌ನಲ್ಲಿ ಇಸ್ರೇಲ್ ತನ್ನ ಅತ್ಯಂತ ವಿನಾಶಕಾರಿ ದಾಳಿಗಳನ್ನು ನಡೆಸಿತ್ತು. ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು 1,150 ಜನರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್, “ಲೆಬನಾನ್‌ನಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕ ಸಾವುನೋವುಗಳ ವರದಿಗಳಿಂದ ನಾವು ತೀವ್ರ ಕಳವಳಗೊಂಡಿದ್ದೇವೆ. ಭಾರತವು ಯಾವಾಗಲೂ ನಾಗರಿಕರ ರಕ್ಷಣೆಯನ್ನು ಪ್ರಮುಖ ಆದ್ಯತೆಯಾಗಿ ಒತ್ತಿಹೇಳಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್

“ಲೆಬನಾನ್‌ನಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕ ಸಾವುನೋವುಗಳ ವರದಿಗಳಿಂದ ನಾವು ತೀವ್ರ ಕಳವಳಗೊಂಡಿದ್ದೇವೆ. ಭಾರತ ಯಾವಾಗಲೂ ನಾಗರಿಕರ ರಕ್ಷಣೆಯನ್ನು ಪ್ರಮುಖ ಆದ್ಯತೆಯಾಗಿ ಒತ್ತಿಹೇಳಿದೆ. ಅಂತಾರಾಷ್ಟ್ರೀಯ ಕಾನೂನನ್ನು ಪಾಲಿಸುವುದು, ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವುದು ಅತ್ಯಗತ್ಯ. ಲೆಬನಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಭಾರತೀಯ ಸಮುದಾಯದೊಂದಿಗೆ ಅವರ ಸುರಕ್ಷತೆ ಮತ್ತು ಭದ್ರತೆಗಾಗಿ ನಿಕಟ ಸಂಪರ್ಕದಲ್ಲಿದೆ” ಎಂದು ರಣಧೀರ್ ಜೈಸ್ವಾಲ್ ಹೇಳಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ.

ಇದನ್ನೂ ಓದಿ: ಲೆಬನಾನ್‌ನಲ್ಲಿ ಶಾಂತಿ ಸ್ಥಾಪನೆಯಾಗುವವರೆಗೆ ಚರ್ಚೆ ಇಲ್ಲ, ಅಮೆರಿಕದೊಂದಿಗೆ ಮಾತುಕತೆ ಸ್ಥಗಿತಗೊಳಿಸುವುದಾಗಿ ಇರಾನ್ ಎಚ್ಚರಿಕೆ

ಇರಾನ್ ಮತ್ತು ಯುಎಸ್ 2 ವಾರಗಳ ಒಪ್ಪಂದಕ್ಕೆ ಒಪ್ಪಿಕೊಂಡ ಬಳಿಕ ಈ ದಾಳಿಗಳು ನಡೆದಿವೆ. ಯುಎಸ್-ಇರಾನ್ ನಡುವಿನ ಕದನವಿರಾಮ ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಲೆಬನಾನ್ ಮೇಲೆ ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಹಿಜ್ಬೊಲ್ಲಾ ಕೂಡ ಉತ್ತರ ಇಸ್ರೇಲ್ ಮೇಲೆ ರಾಕೆಟ್ ದಾಳಿಯನ್ನು ಮುಂದುವರೆಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ