Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೂದ್ ಅಜರ್‌ಗೆ ಕಠಿಣ ಶಿಕ್ಷೆಯಾಗಲಿ; ಜೈಶ್ ಮುಖ್ಯಸ್ಥನ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ತಾನಕ್ಕೆ ಭಾರತ ಒತ್ತಾಯ

ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಬಹವಾಲ್‌ಪುರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ನಂತರ ಆತನ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯುವಲ್ಲಿ ಪಾಕಿಸ್ತಾನ ವಿಫಲವಾಗಿದೆ ಎಂದು ಆರೋಪಿಸಿರುವ ಭಾರತ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನವನ್ನು ಒತ್ತಾಯಿಸಿದೆ.

ಮಸೂದ್ ಅಜರ್‌ಗೆ ಕಠಿಣ ಶಿಕ್ಷೆಯಾಗಲಿ; ಜೈಶ್ ಮುಖ್ಯಸ್ಥನ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ತಾನಕ್ಕೆ ಭಾರತ ಒತ್ತಾಯ
ಮಸೂದ್ ಅಜರ್‌
Follow us
ಸುಷ್ಮಾ ಚಕ್ರೆ
|

Updated on: Dec 06, 2024 | 10:45 PM

ನವದೆಹಲಿ: 2001ರ ಸಂಸತ್ ದಾಳಿ ಸೇರಿದಂತೆ ಹಲವು ದಾಳಿಗಳನ್ನು ರೂಪಿಸಿದ ಆರೋಪ ಹೊತ್ತಿರುವ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಪಾಕಿಸ್ತಾನಕ್ಕೆ ಒತ್ತಾಯಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಬಹವಾಲ್‌ಪುರ್‌ನಲ್ಲಿರುವ ಇಸ್ಲಾಮಿಕ್ ಸೆಮಿನರಿಯಲ್ಲಿ ಎರಡು ದಶಕಗಳ ನಂತರ ಮೊದಲ ಬಾರಿಗೆ ಸಾರ್ವಜನಿಕ ಭಾಷಣ ಮಾಡಿದ ಅಜರ್ ವಿರುದ್ಧ ಭಾರತ ಆಕ್ರೋಶ ಹೊರಹಾಕಿದೆ. ಅಜರ್ ಭಾರತದ ಮೇಲಿನ ದಾಳಿಯನ್ನು ತೀವ್ರಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದರು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಆಕ್ರಮಣಕಾರಿ ಭಾಷಣ ಮಾಡಿದ್ದರು.

ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ ಇತ್ತೀಚೆಗೆ ಬಹವಾಲ್‌ಪುರದಲ್ಲಿ ಸಾರ್ವಜನಿಕ ಭಾಷಣ ಮಾಡಿದ ವರದಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗಿರುವ ಪಾಕಿಸ್ತಾನವನ್ನು ಭಾರತೀಯ ಅಧಿಕಾರಿಗಳು ಖಂಡಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡ ಈ ವಿಚಾರಕ್ಕಾಗಿ ಪಾಕಿಸ್ತಾನದ ವಿರುದ್ಧ ಅಸಮಾಧಾನ ಹೊರಹಾಕಿದೆ.

ಇದನ್ನೂ ಓದಿ: ಬಿಮ್ಸ್​ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ

ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಮೇಲೆ ಅನೇಕ ಗಡಿಯಾಚೆಗಿನ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿರುವ ಅಜರ್ ವಿರುದ್ಧ ಪಾಕಿಸ್ತಾನವು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ವರದಿಗಳು ನಿಜವಾಗಿದ್ದರೆ, ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನದ ದ್ವಂದ್ವ ನಿಲುವನ್ನು ಹೊಂದಿದೆ ಎಂದು ಜೈಸ್ವಾಲ್ ಹೇಳಿದರು.

ಇದನ್ನೂ ಓದಿ: ಜಯ್ ಶಾ ನೇತೃತ್ವದಲ್ಲಿ ICC ಸಭೆ: ವರಸೆ ಬದಲಿಸಿದ ಪಾಕಿಸ್ತಾನ್

ಆತನ (ಅಜರ್) ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಆತನನ್ನು ನ್ಯಾಯಾಂಗಕ್ಕೆ ತರಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಜೈಸ್ವಾಲ್ ಹೇಳಿದ್ದಾರೆ. 2001ರ ಸಂಸತ್ ದಾಳಿ ಮತ್ತು 2019ರ ಪುಲ್ವಾಮಾ ದಾಳಿ ಸೇರಿದಂತೆ ಭಾರತದ ನೆಲದಲ್ಲಿ ಕೆಲವು ಅತ್ಯಂತ ಭಯಾನಕ ಭಯೋತ್ಪಾದಕ ಘಟನೆಗಳೊಂದಿಗೆ ಅಜರ್ ದೀರ್ಘಕಾಲ ಸಂಬಂಧ ಹೊಂದಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ