ನವದೆಹಲಿ: 2001ರ ಸಂಸತ್ ದಾಳಿ ಸೇರಿದಂತೆ ಹಲವು ದಾಳಿಗಳನ್ನು ರೂಪಿಸಿದ ಆರೋಪ ಹೊತ್ತಿರುವ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಪಾಕಿಸ್ತಾನಕ್ಕೆ ಒತ್ತಾಯಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಬಹವಾಲ್‌ಪುರ್‌ನಲ್ಲಿರುವ ಇಸ್ಲಾಮಿಕ್ ಸೆಮಿನರಿಯಲ್ಲಿ ಎರಡು ದಶಕಗಳ ನಂತರ ಮೊದಲ ಬಾರಿಗೆ ಸಾರ್ವಜನಿಕ ಭಾಷಣ ಮಾಡಿದ ಅಜರ್ ವಿರುದ್ಧ ಭಾರತ ಆಕ್ರೋಶ ಹೊರಹಾಕಿದೆ. ಅಜರ್ ಭಾರತದ ಮೇಲಿನ ದಾಳಿಯನ್ನು ತೀವ್ರಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದರು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಆಕ್ರಮಣಕಾರಿ ಭಾಷಣ ಮಾಡಿದ್ದರು.
ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ ಇತ್ತೀಚೆಗೆ ಬಹವಾಲ್‌ಪುರದಲ್ಲಿ ಸಾರ್ವಜನಿಕ ಭಾಷಣ ಮಾಡಿದ ವರದಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗಿರುವ ಪಾಕಿಸ್ತಾನವನ್ನು ಭಾರತೀಯ ಅಧಿಕಾರಿಗಳು ಖಂಡಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡ ಈ ವಿಚಾರಕ್ಕಾಗಿ ಪಾಕಿಸ್ತಾನದ ವಿರುದ್ಧ ಅಸಮಾಧಾನ ಹೊರಹಾಕಿದೆ.
ಇದನ್ನೂ ಓದಿ: ಬಿಮ್ಸ್ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ
ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಮೇಲೆ ಅನೇಕ ಗಡಿಯಾಚೆಗಿನ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿರುವ ಅಜರ್ ವಿರುದ್ಧ ಪಾಕಿಸ್ತಾನವು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ವರದಿಗಳು ನಿಜವಾಗಿದ್ದರೆ, ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನದ ದ್ವಂದ್ವ ನಿಲುವನ್ನು ಹೊಂದಿದೆ ಎಂದು ಜೈಸ್ವಾಲ್ ಹೇಳಿದರು.
ಇದನ್ನೂ ಓದಿ: ಜಯ್ ಶಾ ನೇತೃತ್ವದಲ್ಲಿ ICC ಸಭೆ: ವರಸೆ ಬದಲಿಸಿದ ಪಾಕಿಸ್ತಾನ್
ಆತನ (ಅಜರ್) ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಆತನನ್ನು ನ್ಯಾಯಾಂಗಕ್ಕೆ ತರಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಜೈಸ್ವಾಲ್ ಹೇಳಿದ್ದಾರೆ. 2001ರ ಸಂಸತ್ ದಾಳಿ ಮತ್ತು 2019ರ ಪುಲ್ವಾಮಾ ದಾಳಿ ಸೇರಿದಂತೆ ಭಾರತದ ನೆಲದಲ್ಲಿ ಕೆಲವು ಅತ್ಯಂತ ಭಯಾನಕ ಭಯೋತ್ಪಾದಕ ಘಟನೆಗಳೊಂದಿಗೆ ಅಜರ್ ದೀರ್ಘಕಾಲ ಸಂಬಂಧ ಹೊಂದಿದ್ದಾನೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ