AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಹಗುರವಾದ ಬುಲೆಟ್​ ಪ್ರೂಫ್​ ಜಾಕೆಟ್​ ಸಿದ್ಧಪಡಿಸಿದ ಡಿಆರ್​ಡಿಒ

ಅಮೆರಿಕ, ಇಂಗ್ಲೆಂಡ್, ಮತ್ತು ಜರ್ಮನಿಯಂತೆ ಭಾರತವೂ ಈಗ ಬುಲೆಟ್ ಪ್ರೂಫ್ ಜಾಕೆಟ್ ಅಭಿವೃದ್ಧಿ ಪಡಿಸಿದೆ. ಡಿಆರ್​ಡಿಒ ದೇಶದ ಅತ್ಯಂತ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಅಭಿವೃದ್ಧಿಪಡಿಸಿದೆ. ಜಾಕೆಟ್ ಹೆಚ್ಚಿನ ಬೆದರಿಕೆ ಮಟ್ಟದಿಂದ ರಕ್ಷಣೆ ನೀಡುತ್ತದೆ. ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಚಂಡೀಗಢದ TBRL ನಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು.

ಅತಿ ಹಗುರವಾದ ಬುಲೆಟ್​ ಪ್ರೂಫ್​ ಜಾಕೆಟ್​ ಸಿದ್ಧಪಡಿಸಿದ ಡಿಆರ್​ಡಿಒ
ಬುಲೆಟ್​ ಪ್ರೂಫ್​ ಜಾಕೆಟ್​
ನಯನಾ ರಾಜೀವ್
|

Updated on: Apr 24, 2024 | 8:27 AM

Share

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಕಡಿಮೆ ತೂಕವಿರುವ ಬುಲೆಟ್​ ಪ್ರೂಫ್​ ಜಾಕೆಟ್(Bullet Proof Jacket)​ನ್ನು ಅಭಿವೃದ್ಧಿಪಡಿಸಿದೆ. ಈ ಜಾಕೆಟ್ ಹೊಸ ವಿನ್ಯಾಸದ ವಿಧಾನವನ್ನು ಆಧರಿಸಿದೆ, ಅಲ್ಲಿ ಆಧುನಿಕ ಉತ್ಪಾದನಾ ಸಾಮಗ್ರಿಗಳನ್ನು ಹೊಸ ಪ್ರಕ್ರಿಯೆಗಳೊಂದಿಗೆ ಬಳಸಲಾಗಿದೆ. ಈ ಜಾಕೆಟ್ ಅನ್ನು ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ ಸಂಶೋಧನಾ ಪ್ರಯೋಗಾಲಯದಲ್ಲಿ (TBRL) ಯಶಸ್ವಿಯಾಗಿ ಪರೀಕ್ಷಿಸಲಾಯಿತು.

ಹೊಸದಾಗಿ ಅಭಿವೃದ್ಧಿಪಡಿಸಿದ ಈ ಜಾಕೆಟ್ ಅನ್ನು ಡಿಆರ್‌ಡಿಒ ಇದುವರೆಗಿನ ದೇಶದ ಅತ್ಯಂತ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್ ಎಂದು ಪರಿಗಣಿಸಿದೆ. ಹೊಸ ತಂತ್ರಜ್ಞಾನದ ಜೊತೆಗೆ, ಈ ಜಾಕೆಟ್‌ನಲ್ಲಿ ಕೆಲವು ವಸ್ತುಗಳನ್ನು ಸಹ ಇರಿಸಲಾಗಿದೆ, ಇದರಿಂದಾಗಿ ಹಿಂದಿನ ಜಾಕೆಟ್‌ಗೆ ಹೋಲಿಸಿದರೆ ಅದರ ತೂಕ ಕಡಿಮೆಯಾಗಿದೆ. ಇದು ಆರು ಉನ್ನತ ಮಟ್ಟದ ಅಪಾಯಗಳಿಂದ ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ. ಬಹಳ ವರ್ಷಗಳಿಂದ ಭಾರತದ ಸೇನೆಗೆ ಬುಲೆಟ್ ಪ್ರೂಫ್ ಜಾಕೆಟ್ ನೀಡಬೇಕೆಂಬ ಬೇಡಿಕೆ ಇತ್ತು ಇನ್ನುಮುಂದೆ ಸೈನಿಕರು ಹಾಗೂ ಪೊಲೀಸರಿಗೆ ಈ ಜಾಕೆಟ್​ಗಳು ಸಾಕಷ್ಟು ಸಹಕಾರಿಯಾಗಲಿದೆ ಎಂದು ಭಾವಿಸಲಾಗಿದೆ.

ಈ ಜಾಕೆಟ್ ಅನ್ನು ಡಿಆರ್‌ಡಿಒದ ಡಿಫೆನ್ಸ್ ಮೆಟೀರಿಯಲ್ ಮತ್ತು ಸ್ಟೋರ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್, ಕಾನ್ಪುರ್ ತಯಾರಿಸಿದೆ ಎಂದು ಹೇಳಲಾಗಿದೆ. ಈ ಬುಲೆಟ್ ಪ್ರೂಫ್ ಜಾಕೆಟ್ 7.62 X 54 R API ಮದ್ದುಗುಂಡುಗಳ ವಿರುದ್ಧ ರಕ್ಷಣೆ ನೀಡುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತಷ್ಟು ಓದಿ: Major Shaitan Singh: ಕೈಯೊಳಗೆ ಬಾಂಬ್​ ಸ್ಫೋಟಗೊಂಡರೂ ಕಾಲಿಗೆ ಮೆಷಿನ್ ಗನ್ ಕಟ್ಟಿ ಚೀನಾ ಸೈನಿಕರ ವಿರುದ್ಧ ಹೋರಾಡಿದ್ದ ಮೇಜರ್ ಶೈತಾನ್ ಸಿಂಗ್

ಈ ಹೊಸ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಭದ್ರತಾ ಪಡೆಗಳ ಸಿಬ್ಬಂದಿ ಧರಿಸಲು ಸುಲಭವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಹೊಸ ಬುಲೆಟ್ ಪ್ರೂಫ್ ಜಾಕೆಟ್‌ನ ಚಿತ್ರವನ್ನೂ ಡಿಆರ್‌ಡಿಒ ಬಿಡುಗಡೆ ಮಾಡಿದೆ. ಪ್ರಸ್ತುತ ಭದ್ರತಾ ಪಡೆಗಳು ಬಳಸುವ ಜಾಕೆಟ್‌ಗಳು ತುಂಬಾ ಭಾರವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ನಿರಂತರವಾಗಿ ಧರಿಸಿ ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿತ್ತು.

ಭಾರತ ಕೂಡ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ನಡೆಸಿದೆ ಒಂದೆಡೆ, ಡಿಆರ್‌ಡಿಒ ದೇಶದ ಅತ್ಯಂತ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್‌ನ ಚಿತ್ರವನ್ನು ಬಿಡುಗಡೆ ಮಾಡಿದ್ದರೆ, ಮತ್ತೊಂದೆಡೆ, ಭಾರತವು ಮಂಗಳವಾರದಂದು ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯ ಹೊಸ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಕ್ಷಿಪಣಿಯನ್ನು ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ ಅಡಿಯಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಯಶಸ್ವಿ ಪರೀಕ್ಷೆಯೊಂದಿಗೆ ಕ್ಷಿಪಣಿಯು ಬಳಸಿದ ಹೊಸ ತಂತ್ರಜ್ಞಾನವನ್ನು ಸಹ ಮಾನ್ಯ ಮಾಡಿದೆ.

ಈ ಹಿಂದೆ ಡಿಆರ್‌ಡಿಒ ಕೂಡ ಇತ್ತೀಚೆಗೆ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿತ್ತು. ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ಸೆಂಟರ್‌ನಿಂದ ಡಿಆರ್‌ಡಿಒ ದೇಶೀಯವಾಗಿ ಅಭಿವೃದ್ಧಿಪಡಿಸಿದ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಪರೀಕ್ಷೆಯ ನಂತರ, ಡಿಆರ್‌ಡಿಒ ಹೇಳಿಕೆಯನ್ನು ಬಿಡುಗಡೆ ಮಾಡಿತು ಮತ್ತು ಪರೀಕ್ಷೆಯು ಯಶಸ್ವಿಯಾಗಿದೆ ಎಂದು ಘೋಷಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ