ಭಾರತದಲ್ಲಿ ಕಮರ್ಷಿಯಲ್ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ವಿಸ್ತರಣೆ

ಮುಂದಿನ ಆದೇಶದವರೆಗೆ ಭಾರತಕ್ಕೆ ಅಥವಾ ಭಾರತದಿಂದ ನಿಗದಿತ ಅಂತಾರರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ಸೇವೆಗಳ ನಿರ್ಬಂಧನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

ಭಾರತದಲ್ಲಿ ಕಮರ್ಷಿಯಲ್ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Feb 28, 2022 | 3:25 PM

ನವದೆಹಲಿ: ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿಷೇಧವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಡಿಜಿಸಿಎ (DGCA) ಆದೇಶ ಹೊರಡಿಸಿದೆ. ಆದರೆ, ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುವ ವಿಮಾನಗಳು ಮತ್ತು ಅಂತಾರಾಷ್ಟ್ರೀಯ ಸರಕು ವಿಮಾನಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಡಿಜಿಸಿಎ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿಷೇಧವನ್ನು ತೆಗೆದುಹಾಕಲು ಪ್ರಸ್ತಾಪಿಸಿದ್ದರೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅನುಮೋದನೆಯು ನಿರ್ಣಾಯಕವಾಗಿದೆ. ಕೊವಿಡ್ (COVID 19)  ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿರುವ ಆರೋಗ್ಯ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

2020ರ ಮಾರ್ಚ್ 23ರಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲಿನ ನಿಷೇಧ ಜಾರಿಯಲ್ಲಿದೆ. ಆದರೂ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಮೇ 2020ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ದ್ವಿಪಕ್ಷೀಯ “ಏರ್ ಬಬಲ್” ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಪ್ರಯಾಣಿಕ ವಿಮಾನಗಳು ಕಾರ್ಯ ನಿರ್ವಹಿಸುತ್ತಿವೆ. ಇದೀಗ ಕೊವಿಡ್‌ನಿಂದಾಗಿ ವಿಮಾನಗಳ ಹಾರಾಟದ ನಿರ್ಬಂಧದ ಕುರಿತು ಹಿಂದಿನ ಆದೇಶವನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಮಾರ್ಪಡಿಸಿದೆ. ಅಧಿಸೂಚನೆಯಲ್ಲಿ ಭಾರತವು ಮುಂದಿನ ಆದೇಶದವರೆಗೆ ದೇಶದಲ್ಲಿ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಅಮಾನತುಗೊಳಿಸುವಿಕೆಯನ್ನು ವಿಸ್ತರಿಸುವುದಾಗಿ ತಿಳಿಸಿದೆ. ಇದಕ್ಕೂ ಮುನ್ನ ಜನವರಿ 19ರಂದು ಅಮಾನತು ಅವಧಿಯನ್ನು ಫೆಬ್ರವರಿ 28ರವರೆಗೆ ವಿಸ್ತರಿಸಲಾಗಿತ್ತು.

2020ರ ಮಾರ್ಚ್​ 23ರಿಂದ ಏಕಾಏಕಿ ಭಾರತದಲ್ಲಿ ಕೊರೊನಾವೈರಸ್ ಹೆಚ್ಚಾಗಿದ್ದರಿಂದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ವಿಶೇಷ ಪ್ರಯಾಣಿಕ ವಿಮಾನಗಳು ಜುಲೈ 2020 ರಿಂದ ಭಾರತ ಮತ್ತು ಸುಮಾರು 45 ದೇಶಗಳ ನಡುವೆ ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತಿಳಿಸಿರುವಂತೆ ಮುಂದಿನ ಆದೇಶದವರೆಗೆ ಭಾರತಕ್ಕೆ ಅಥವಾ ಭಾರತದಿಂದ ನಿಗದಿತ ಅಂತಾರರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ಸೇವೆಗಳ ಅಮಾನತುಗೊಳಿಸುವಿಕೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

ಈ ನಿರ್ಬಂಧವು ಡಿಜಿಸಿಎಯಿಂದ ನಿರ್ದಿಷ್ಟವಾಗಿ ಅನುಮೋದಿಸಲ್ಪಟ್ಟ ಅಂತಾರಾಷ್ಟ್ರೀಯ ಎಲ್ಲಾ-ಸರಕು ಕಾರ್ಯಾಚರಣೆಗಳು ಮತ್ತು ಹಾರಾಟಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ. 2021ರ ಡಿಸೆಂಬರ್ 15ರಿಂದ ಭಾರತವು ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಪುನರಾರಂಭಿಸುತ್ತದೆ ಎಂದು DGCA ಘೋಷಿಸಿತ್ತು.

ಅದಾದ ಒಂದೇ ದಿನದಲ್ಲಿ ಕೊವಿಡ್-19 ರೂಪಾಂತರದ ಒಮಿಕ್ರಾನ್ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಹಿನ್ನೆಲೆಯಲ್ಲಿ ತನ್ನ ನಿರ್ಧಾರವನ್ನು ಪರಿಶೀಲಿಸಲು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಡಿಜಿಸಿಎಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು. ಹೀಗಾಗಿ, 2021ರ ಡಿಸೆಂಬರ್ 1ರಂದು DGCA ತನ್ನ ನವೆಂಬರ್ ನಿರ್ಧಾರವನ್ನು ಹಿಂತೆಗೆದುಕೊಂಡಿತು. ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಅಮಾನತು ಎಷ್ಟು ಸಮಯದವರೆಗೆ ಮುಂದುವರಿಯುತ್ತದೆ ಎಂಬುದನ್ನು ಇನ್ನೂ ತಿಳಿಸಿಲ್ಲ.

ಇದನ್ನೂ ಓದಿ: ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧ ಫೆ. 28ರವರೆಗೆ ವಿಸ್ತರಣೆ

Published On - 3:25 pm, Mon, 28 February 22

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು