AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ವಿತರಣೆಯ ವೇಗದಲ್ಲಿ ಅಮೆರಿಕಾ, ಚೀನಾವನ್ನೂ ಹಿಂದಿಕ್ಕಿದ ಭಾರತ

ಇದೇ ಪ್ರಮಾಣದ ಜನರಿಗೆ ಕೊವಿಡ್ ಲಸಿಕೆ ನೀಡಲು ಅಮೆರಿಕಾಕ್ಕೆ 115 ದಿನಗಳು ಬೇಕಾಗಿದ್ದವು. ಚೀನಾಕ್ಕೆ 119 ದಿನಗಳು ಬೇಕಾಗಿದ್ದವು ಎಂದು ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

ಕೊವಿಡ್ ಲಸಿಕೆ ವಿತರಣೆಯ ವೇಗದಲ್ಲಿ ಅಮೆರಿಕಾ, ಚೀನಾವನ್ನೂ ಹಿಂದಿಕ್ಕಿದ ಭಾರತ
ಪ್ರಧಾನಿ ನರೇಂದ್ರ ಮೋದಿ
guruganesh bhat
|

Updated on:May 14, 2021 | 9:31 PM

Share

ದೆಹಲಿ: ಭಾರತವು 17 ಕೋಟಿ ಜನರಿಗೆ ಕೊವಿಡ್ ಲಸಿಕೆ ನೀಡಲು 114 ದಿನಗಳನ್ನು ಮಾತ್ರ ತೆಗೆದುಕೊಂಡಿದ್ದು, ಇದೇ ಪ್ರಮಾಣದ ಜನರಿಗೆ ಕೊವಿಡ್ ಲಸಿಕೆ ನೀಡಲು ಅಮೆರಿಕಾಕ್ಕೆ 115 ದಿನಗಳು ಬೇಕಾಗಿದ್ದವು. ಚೀನಾಕ್ಕೆ 119 ದಿನಗಳು ಬೇಕಾಗಿದ್ದವು. ಹೀಗಾಗಿ ಅತಿ ವೇಗವಾಗಿ ಕೊವಿಡ್ ಲಸಿಕೆ ವಿತರಣೆ ಮಾಡುವಲ್ಲಿ ವಿಶ್ವದಲ್ಲೇ ಭಾರತ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

ಕೊವಿಡ್ ಲಸಿಕೆ ವಿತರಣಾ ಅಭಿಯಾನ ಆರಂಭವಾಗಿ ಈವರೆಗೆ 118 ದಿನಗಳಾಗಿದ್ದು, ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೂ ಸೇರಿ ಈವರೆಗೆ ಒಟ್ಟಾರೆ 17.93 ಕೋಟಿ ಜನರಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮೇ 16ರಿಂದ ಮೇ 31ರ ಅವಧಿಯಲ್ಲಿ 1 ಲಕ್ಷ 92 ಸಾವಿರ ಕೊವಿಡ್ ಲಸಿಕೆಯನ್ನು ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಸೇರಿ ಒದಗಿಸಲಾಗಿದೆ. ಇದರಲ್ಲಿ 162.5 ಲಕ್ಷ ಕೊವಿಸೀಲ್ಡ್ ಲಸಿಕೆ ಇದ್ದು, 29.49 ಲಕ್ಷ ಕೊವ್ಯಾಕ್ಸಿನ್ ಲಸಿಕೆ ಪೂರೈಸಲಾಗಿತ್ತು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಶೀಘ್ರದಲ್ಲೇ ಕೊವಿಡ್ ಲಸಿಕೆ ಅಭಿವೃದ್ಧಿ

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 41,779 ಜನರಿಗೆ ಕೊವಿಡ್ ದೃಢ, 373 ಜನರು ನಿಧನ

(India distributes 17 crore vaccine in 114 days faster than America and China)

Published On - 9:28 pm, Fri, 14 May 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?