AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ದೇವಾಲಯದ ಧ್ವಂಸಕ್ಕೆ ಭಾರತ ಕಳವಳ; ಯುದ್ಧ ನಿಲ್ಲಿಸುವಂತೆ ಥೈಲ್ಯಾಂಡ್, ಕಾಂಬೋಡಿಯಾಕ್ಕೆ ಒತ್ತಾಯ

ಇತ್ತೀಚಿನ ಥೈಲ್ಯಾಂಡ್-ಕಾಂಬೋಡಿಯಾ ಘರ್ಷಣೆಯ ಸಂದರ್ಭದಲ್ಲಿ ಪ್ರಿಯಾ ವಿಹಾರ್ ಹಿಂದೂ ದೇವಾಲಯಕ್ಕೆ ಹಾನಿಯಾಗಿರುವ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ (MEA) ಕಳವಳ ವ್ಯಕ್ತಪಡಿಸಿದೆ. UNESCO ವಿಶ್ವ ಪರಂಪರೆಯ ತಾಣವಾದ 1,100 ವರ್ಷ ಹಳೆಯ ದೇವಾಲಯವು ಎರಡು ನೆರೆಯ ರಾಷ್ಟ್ರಗಳ ನಡುವಿನ ಗಡಿ ಘರ್ಷಣೆಯ ಸಮಯದಲ್ಲಿ ಹಾನಿಗೊಳಗಾಗಿದೆ. ಸಂಘರ್ಷಗಳನ್ನು ನಿಲ್ಲಿಸುವಂತೆ ಭಾರತ ಒತ್ತಾಯಿಸಿದೆ.

ಹಿಂದೂ ದೇವಾಲಯದ ಧ್ವಂಸಕ್ಕೆ ಭಾರತ ಕಳವಳ; ಯುದ್ಧ ನಿಲ್ಲಿಸುವಂತೆ ಥೈಲ್ಯಾಂಡ್, ಕಾಂಬೋಡಿಯಾಕ್ಕೆ ಒತ್ತಾಯ
Thailand Hindu Temple
ಸುಷ್ಮಾ ಚಕ್ರೆ
|

Updated on: Dec 12, 2025 | 7:19 PM

Share

ನವದೆಹಲಿ, ಡಿಸೆಂಬರ್ 12: ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವೆ ಗಡಿ ಘರ್ಷಣೆಗಳು ಮತ್ತೆ ಆರಂಭವಾಗಿರುವುದರಿಂದ ಭಾರತವು ಥೈಲ್ಯಾಂಡ್ (Thailand) ಮತ್ತು ಕಾಂಬೋಡಿಯಾಗಳಿಗೆ ಶಾಂತಿಯಿಂದ ವರ್ತಿಸುವಂತೆ ಮತ್ತು ಯುದ್ಧದ ಉಲ್ಬಣವನ್ನು ತಡೆಯುವಂತೆ ಮನವಿ ಮಾಡಿದೆ. ಪ್ರಿಯಾ ವಿಹಿಯರ್ ದೇವಾಲಯದ ಯುನೆಸ್ಕೋ ವಿಶ್ವ ಪರಂಪರೆಯ ತಾಣವು ಮಾನವೀಯತೆಯ ಹಂಚಿಕೆಯ ಸಾಂಸ್ಕೃತಿಕ ಪರಂಪರೆಯಾಗಿದೆ. ಭಾರತವು ಅದರ ಸಂರಕ್ಷಣೆಯಲ್ಲಿ ನಿಕಟವಾಗಿ ತೊಡಗಿಸಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ನಡೆದ ಕದನ ವಿರಾಮದ ಹೊರತಾಗಿಯೂ ಈ ವಾರ ಥೈಲ್ಯಾಂಡ್ ಮತ್ತು ಕಾಂಬೋಡಿಯಾ ಗಡಿ ಘರ್ಷಣೆಯನ್ನು ಪುನರಾರಂಭಿಸಿದ ಬಳಿಕ ಭಾರತ ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿ: ಮಲೇಷ್ಯಾ: ಮಸೀದಿ ನಿರ್ಮಾಣಕ್ಕಾಗಿ 130 ವರ್ಷ ಪುರಾತನ ಹಿಂದೂ ದೇವಾಲಯ ನೆಲಸಮ

ಥೈಲ್ಯಾಂಡ್ ಸೈನ್ಯವು ಕಾಂಬೋಡಿಯಾದ ಮಿಲಿಟರಿ ಸಾಮರ್ಥ್ಯಗಳನ್ನು ದುರ್ಬಲಗೊಳಿಸಲು ಬಯಸುತ್ತದೆ ಎಂದು ಸ್ಪಷ್ಟಪಡಿಸಿದೆ. ಕಾಂಬೋಡಿಯನ್ ಸರ್ಕಾರವು ಶಾಂತಿಯನ್ನು ಬಯಸುತ್ತದೆ ಮತ್ತು ಆತ್ಮರಕ್ಷಣೆಗಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳಿದೆ. ಅದು ಮಾತುಕತೆಗೆ ಸಿದ್ಧವಾಗಿರುವುದಾಗಿ ಸ್ಪಷ್ಟಪಡಿಸಿದೆ.

ಗಡಿ ವಿವಾದದ ಕೇಂದ್ರದಲ್ಲಿ ಥಾಯ್ ಭಾಷೆಯಲ್ಲಿ ಫ್ರಾ ವಿಹಾರ್ನ್ ಎಂದು ಕರೆಯಲ್ಪಡುವ ಪ್ರೀಹ್ ವಿಹಾರ್ ದೇವಾಲಯವಿದೆ. 11ನೇ ಶತಮಾನದಲ್ಲಿ ಖಮೇರ್ ಸಾಮ್ರಾಜ್ಯದ ಸುವರ್ಣ ಯುಗದಲ್ಲಿ ನಿರ್ಮಿಸಲಾದ ಈ ಪ್ರಾಚೀನ ಹಿಂದೂ ದೇವಾಲಯವು ಥಾಯ್-ಕಾಂಬೋಡಿಯನ್ ಗಡಿಯಲ್ಲಿರುವ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ. ಈ ಸ್ಥಳವು ಎರಡೂ ದೇಶಗಳಿಗೆ ಆಧ್ಯಾತ್ಮಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಮಹತ್ವದ್ದಾಗಿದೆ.

ಇದನ್ನೂ ಓದಿ: Hinduism in Indonesia: ವಿಶ್ವದ ಅತಿದೊಡ್ಡ ಮುಸ್ಲಿಂ-ಬಹುಸಂಖ್ಯಾತ ದೇಶದಲ್ಲಿ ಸಾವಿರಕ್ಕೂ ಅಧಿಕ ಹಿಂದೂ ದೇವಾಲಯ!

ಇತ್ತೀಚಿನ ವರದಿಗಳು ಥೈಲ್ಯಾಂಡ್‌ನ ಸೈನ್ಯವು ಫಿರಂಗಿ ಮತ್ತು ವೈಮಾನಿಕ ದಾಳಿಗಳನ್ನು ಬಳಸಿಕೊಂಡು ದೇವಾಲಯದ ಸ್ಥಳವನ್ನು ಭಾರೀ ಹಾನಿಗೊಳಿಸಿದೆ. ಹಲವಾರು ದ್ವಾರಗಳು, ಪ್ರತಿಮೆಗಳು, ಉತ್ತರದ ಮೆಟ್ಟಿಲುಗಳು ಮತ್ತು ಸಂರಕ್ಷಣಾ ಕಟ್ಟಡಗಳನ್ನು ಧ್ವಂಸ ಮಾಡಲಾಗಿದೆ. ಮಿಲಿಟರಿ ಸ್ವತ್ತುಗಳನ್ನು ಮಾತ್ರ ಗುರಿಯಾಗಿಸಿಕೊಂಡಿದೆ ಎಂದು ಥಾಯ್ ಹೇಳಿಕೊಂಡಿದ್ದರೂ ಇದು ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದೆ.

ಪ್ರಿಯಾ ವಿಹಿಯರ್ ದೇವಾಲಯದ ಬಳಿ ಹೆಚ್ಚುತ್ತಿರುವ ಥೈಲ್ಯಾಂಡ್-ಕಾಂಬೋಡಿಯಾ ಸಂಘರ್ಷದ ಬಗ್ಗೆ ಯುನೆಸ್ಕೋ ಗಂಭೀರ ಕಳವಳ ವ್ಯಕ್ತಪಡಿಸಿದೆ. ಕಾಂಬೋಡಿಯಾ ಫ್ರಾನ್ಸ್‌ನಿಂದ ಸ್ವಾತಂತ್ರ್ಯ ಪಡೆದಾಗಿನಿಂದ ಈ ದೇವಾಲಯದ ಬಗ್ಗೆ ಎರಡೂ ದೇಶಗಳು ಬಹಳ ಹಿಂದಿನಿಂದಲೂ ವಿವಾದ ನಡೆಸುತ್ತಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್