AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿರುವ ಭಾರತೀಯ ಪತ್ರಕರ್ತರ ಸಮಸ್ಯೆಗಳಿಗೆ ಆ ದೇಶ ಸ್ಪಂದಿಸುವ ಭರವಸೆ ಇದೆ; ಭಾರತ

ಚೀನಾದಲ್ಲಿ ಭಾರತೀಯ ಪತ್ರಕರ್ತರು ಕೆಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಉದಾಹರಣೆಗೆ, ಭಾರತೀಯ ಪತ್ರಕರ್ತರಿಗೆ ಅಲ್ಲಿ ಸ್ಥಳೀಯರನ್ನು ವರದಿಗಾರಿಕೆಗೆ ಅಥವಾ ಪತ್ರಕರ್ತರಾಗಿ ನೇಮಿಸಿಕೊಳ್ಳಲು ಅನುಮತಿ ಇಲ್ಲ ಎಂದು ಬಾಗ್ಚಿ ಹೇಳಿದ್ದಾರೆ.

ಚೀನಾದಲ್ಲಿರುವ ಭಾರತೀಯ ಪತ್ರಕರ್ತರ ಸಮಸ್ಯೆಗಳಿಗೆ ಆ ದೇಶ ಸ್ಪಂದಿಸುವ ಭರವಸೆ ಇದೆ; ಭಾರತ
ಅರಿಂದಮ್ ಬಾಗ್ಚಿ
ಗಣಪತಿ ಶರ್ಮಾ
|

Updated on: Jun 03, 2023 | 11:47 AM

Share

ನವದೆಹಲಿ: ಚೀನಾದಲ್ಲಿದ್ದುಕೊಂಡು (China) ಕೆಲಸ ಮಾಡುವ ಮತ್ತು ಅಲ್ಲಿಂದ ವರದಿ ಮಾಡುವ ಭಾರತೀಯ ಪತ್ರಕರ್ತರ (Indian Journalists) ಕಾರ್ಯನಿರ್ವಹಣೆಗೆ ಪೂರಕವಾಗಿ ಚೀನಾದ ಅಧಿಕಾರಿಗಳು ಸ್ಪಂದಿಸುತ್ತಾರೆ ಎಂಬ ಭರವಸೆ ಇದೆ ಎಂದು ಭಾರತ (India) ಹೇಳಿದೆ. ಚೀನಾದಲ್ಲಿ ಭಾರತೀಯ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಪತ್ರಕರ್ತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉಭಯ ದೇಶಗಳ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಪತ್ರಕರ್ತರೂ ಸೇರಿದಂತೆ ಎಲ್ಲಾ ವಿದೇಶಿ ಪತ್ರಕರ್ತರು ಭಾರತದಲ್ಲಿ ಯಾವುದೇ ಮಿತಿಯಿಲ್ಲದೆ ಅಥವಾ ವರದಿ ಮಾಡುವಲ್ಲಿ ಅಥವಾ ಮಾಧ್ಯಮ ಪ್ರಸಾರದಲ್ಲಿ ತೊಂದರೆಗಳಿಲ್ಲದೆ ಪತ್ರಿಕೋದ್ಯಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: China vs India: ಇತ್ತ ಭಾರತದಲ್ಲಿ ಚಿನ್ನ ಮಾರಾಟ ಕಡಿಮೆ; ಅತ್ತ ಚೀನಾದಲ್ಲಿ ದಿಢೀರ್ ಗೋಲ್ಡ್ ಸೇಲ್ ಹೆಚ್ಚಿದ್ದು ಯಾಕೆ?

ಆದರೆ, ಚೀನಾದಲ್ಲಿ ಭಾರತೀಯ ಪತ್ರಕರ್ತರು ಕೆಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಉದಾಹರಣೆಗೆ, ಭಾರತೀಯ ಪತ್ರಕರ್ತರಿಗೆ ಅಲ್ಲಿ ಸ್ಥಳೀಯರನ್ನು ವರದಿಗಾರಿಕೆಗೆ ಅಥವಾ ಪತ್ರಕರ್ತರಾಗಿ ನೇಮಿಸಿಕೊಳ್ಳಲು ಅನುಮತಿ ಇಲ್ಲ ಎಂದು ಬಾಗ್ಚಿ ಹೇಳಿದ್ದಾರೆ. ಭಾರತದಲ್ಲಿರುವ ವಿದೇಶಿ ಪತ್ರಕರ್ತರನ್ನು ಭಾರತವು ಬೆಂಬಲಿಸುತ್ತದೆ ಮತ್ತು ಅನುಕೂಲ ಮಾಡುತ್ತದೆ. ಅದೇ ರೀತಿ ಚೀನಾ ಸಹ ಅನುಕೂಲ ಮಾಡಿಕೊಡಬೇಕು ಎಂದು ಬಾಗ್ಚಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್