International Flights: ಭಾರತದಲ್ಲಿ ಅ. 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿಷೇಧ

| Updated By: ಸುಷ್ಮಾ ಚಕ್ರೆ

Updated on: Sep 28, 2021 | 8:09 PM

ಕೋವಿಡ್-19 ಸಾಂಕ್ರಾಮಿಕದ ನಡುವೆ ಭಾರತದಲ್ಲಿ ಅಂತಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಹಾರಾಟವನ್ನು ಅ. 31ರವರೆಗೆ ರದ್ದುಗೊಳಿಸಲಾಗಿದೆ.

International Flights: ಭಾರತದಲ್ಲಿ ಅ. 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿಷೇಧ
ಸಾಂದರ್ಭಿಕ ಚಿತ್ರ
Follow us on

ನವದೆಹಲಿ: ಕೊವಿಡ್ ಹಿನ್ನೆಲೆಯಲ್ಲಿ ಸೆ. 30ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಆ ನಿರ್ಬಂಧವನ್ನು ವಿಸ್ತರಿಸಲಾಗಿದ್ದು, ಭಾರತದಲ್ಲಿ ಅಕ್ಟೋಬರ್ 31ರವರೆಗೂ ಅಂತಾರಾಷ್ಟ್ರೀಯ ಕಮರ್ಷಿಯಲ್ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿದೆ. ಭಾರತದಲ್ಲಿ ಕೊವಿಡ್ ಮಾತ್ರವಲ್ಲದೆ ರೂಪಾಂತರಿ ವೈರಸ್​, ನಿಫಾ ವೈರಸ್ ಹಾವಳಿಯೂ ಜಾಸ್ತಿಯಾಗಿದೆ. ಹೀಗಾಗಿ, 3ನೇ ಅಲೆಯ ಕೊರೋನಾ ಹರಡುವಿಕೆಯನ್ನು ನಿಯಂತ್ರಿಸಲು ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ವಿಧಿಸಿದ್ದ ನಿಷೇಧವನ್ನು ಅಕ್ಟೋಬರ್ 31ರವರೆಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಏವಿಯೇಷನ್ ರೆಗ್ಯುಲೇಟರ್ ಡೈರೆಕ್ಟೊರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಸುತ್ತೋಲೆ ಹೊರಡಿಸಿದ್ದು, ಈ ಆದೇಶ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳಿಗೆ ಮಾತ್ರ ಅನ್ವಯವಾಗಲಿದೆ. ಡಿಜಿಸಿಎಯಿಂದ ಅನುಮತಿ ಪಡೆದಿರುವ ಕಾರ್ಗೋ ವಿಮಾನಗಳ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ. ಹಾಗೇ ವಿಶೇಷ ಅನುಮತಿ ಪಡೆದ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರ ಮಾಡಲು ಅವಕಾಶವಿದೆ.

ಕಳೆದ ವರ್ಷದಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳಿಗೆ ನಿಷೇಧ ವಿಧಿಸಲಾಗಿದೆ. 2020ರ ಮಾರ್ಚ್ 23ರಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ. ಕೋವಿಡ್-19 ಸಾಂಕ್ರಾಮಿಕದ ನಡುವೆ ಭಾರತದಲ್ಲಿ ಅಂತಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಹಾರಾಟವನ್ನು ಅ. 31ರವರೆಗೆ ರದ್ದುಗೊಳಿಸಲಾಗಿದೆ. ವಿಶೇಷ ಸಂದರ್ಭಗಳನ್ನು ಪರಿಗಣಿಸಿ, ನಿಗದಿಯಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುಮತಿ ದೊರೆಯಲಿದ್ದು ಅಂತಾರಾಷ್ಟ್ರೀಯ ಎಲ್ಲಾ ಕಾರ್ಗೋ ಕಾರ್ಯಾಚರಣೆ ಹಾಗೂ ಡಿಜಿಸಿಎ ವಿಶೇಷವಾಗಿ ಅನುಮೋದಿಸಿದ ವಿಮಾನಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.

ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್ 23ರಿಂದ ಭಾರತದಿಂದ ಹೊರಡುವ ಮತ್ತು ಆಗಮಿಸುವಂತೆ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಷೇಧಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿರ್ಬಂಧಗಳು ಸೆ. 30ಕ್ಕೆ ಕೊನೆಗೊಳ್ಳಬೇಕಿತ್ತು. ಇದೀಗ ಮತ್ತೆ ಗಡುವನ್ನು ವಿಸ್ತರಿಸಲಾಗಿದೆ.

ಭಾರತದಲ್ಲಿ ಇಂದು ಸುಮಾರು 20,000 ಹೊಸ ಕೊರೊನಾ ಕೇಸುಗಳು ಪತ್ತೆಯಾಗಿವೆ. ಭಾರತದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 4,47,373ಕ್ಕೆ ಏರಿಕೆಯಾಗಿದೆ. ದಿನನಿತ್ಯದ ಕೊರೊನಾ ಪಾಸಿಟಿವಿಟಿ ದರ ಶೇ 1.42ರಷ್ಟಿದೆ. ಕಳೆದ ಒಂದು ತಿಂಗಳಿನಿಂದ ಈ ದರ ಶೇ. 3ಕ್ಕಿಂತ ಕಡಿಮೆಯಿದೆ.

ಇದನ್ನೂ ಓದಿ: ದೆಹಲಿ ನಿವಾಸ ಖಾಲಿ ಮಾಡಲು ಬಂದಿದ್ದೇನೆ, ಯಾವ ನಾಯಕರನ್ನೂ ಭೇಟಿಯಾಗುತ್ತಿಲ್ಲ; ಅಮರೀಂದರ್ ಸಿಂಗ್ ಸ್ಪಷ್ಟನೆ

ಎಲ್ಲರನ್ನೂ ಒಳಗೊಳ್ಳುವ ಸರ್ಕಾರ ರಚಿಸದೇ ಅಫ್ಘಾನ್ ವಿಮಾನ ನಿಲ್ದಾಣ ಕಾರ್ಯಾಚರಣೆ ಇಲ್ಲ: ಟರ್ಕಿ

(India extends ban on scheduled international flights till October 31 amid of Covid Pandemic)

Published On - 8:08 pm, Tue, 28 September 21