PM Cares Fund ರದ್ದುಗೊಳಿಸುವ ಮನವಿಗೆ ಸುಪ್ರೀಂ ಕೋರ್ಟ್ ಮುಂದೆ ಕೇಂದ್ರ ಹೇಳಿದ್ದೇನು?

ನವದೆಹಲಿ: ಪ್ರಧಾನಮಂತ್ರಿಗಳ ಅಧಿನದಲ್ಲಿರುವ ಪಿಎಂ ಕೇರ್ಸ್ ಫಂಡ್ ರಚನೆಯನ್ನ ರದ್ದುಗೊಳಿಸಿ ಅದನ್ನ ಈ ಮೊದಲೇ ಇರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (NDRF) ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್​​ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನ ಕೇಂದ್ರ ಸರ್ಕಾರ ಬಲವಾಗಿ ವಿರೋಧಿಸಿದೆ. ಈ ಸಂಬಂಧ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ PM Cares Fund ರಚನೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಕೋವಿಡ್-19ನಂಥ ಸಾಂಕ್ರಾಮಿಕ ಮತ್ತು ರಾಷ್ಟ್ರೀಯ ವಿಪತ್ತುಗಳು ಎದುರಾದಾಗ ತಕ್ಷಣವೇ ಕಾರ್ಯಪ್ರವೃತ್ತವಾಗಲು ಈPM Cares Fund ಅನ್ನುಕಾನೂನಿನ ಪ್ರಕಾರವೇ […]

PM Cares Fund ರದ್ದುಗೊಳಿಸುವ ಮನವಿಗೆ ಸುಪ್ರೀಂ ಕೋರ್ಟ್ ಮುಂದೆ ಕೇಂದ್ರ ಹೇಳಿದ್ದೇನು?
Follow us
Guru
| Updated By:

Updated on:Jul 11, 2020 | 2:57 PM

ನವದೆಹಲಿ: ಪ್ರಧಾನಮಂತ್ರಿಗಳ ಅಧಿನದಲ್ಲಿರುವ ಪಿಎಂ ಕೇರ್ಸ್ ಫಂಡ್ ರಚನೆಯನ್ನ ರದ್ದುಗೊಳಿಸಿ ಅದನ್ನ ಈ ಮೊದಲೇ ಇರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (NDRF) ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್​​ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನ ಕೇಂದ್ರ ಸರ್ಕಾರ ಬಲವಾಗಿ ವಿರೋಧಿಸಿದೆ.

ಈ ಸಂಬಂಧ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ PM Cares Fund ರಚನೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಕೋವಿಡ್-19ನಂಥ ಸಾಂಕ್ರಾಮಿಕ ಮತ್ತು ರಾಷ್ಟ್ರೀಯ ವಿಪತ್ತುಗಳು ಎದುರಾದಾಗ ತಕ್ಷಣವೇ ಕಾರ್ಯಪ್ರವೃತ್ತವಾಗಲು ಈPM Cares Fund ಅನ್ನುಕಾನೂನಿನ ಪ್ರಕಾರವೇ ರಚಿಸಲಾಗಿದೆ. ಈ ಸಂಬಂಧ ರಾಜ್ಯಸರ್ಕಾರಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ರಾಜ್ಯ ವಿಪತ್ತು ನಿರ್ವಹಣಾ ನಿಧಿಗಳೊಂದಿಗೆ (SDRF)  PM Cares Fund ಜೋಡಿಸಲಾಗಿದೆ.

ದೇಶದಲ್ಲಿ ಮತ್ತು ರಾಜ್ಯಗಳಲ್ಲಿ ಯಾವುದೇ ವಿಪತ್ತು ಎದುರಾದಾಗ ನೇರವಾಗಿ ಪಿಎಂ ಕೇರ್ಸ್ ಫಂಡ್​ನಿಂದ ನೆರವು ನೀಡಲಾಗುತ್ತದೆ. ಹಾಗೇನೇ ಇದರಿಂದ ಈಗಿರುವ ಎನ್‌ಡಿಆರ್‌ಎಫ್‌ಗೆ ಯಾವುದೇ ಬಾಧಕವಿಲ್ಲ. ಎನ್‌ಡಿಆರ್‌ಎಫ್ ಮತ್ತು ಪಿಎಂ ಕೇರ್ಸ್ ಫಂಡ್ ಜೊತೆ ಜೊತೆಯಾಗಿ ಕಾರ್ಯನಿರ್ವಹಿಸಲು ಯಾವುದೇ ಅಡೆತಡೆಗಳಿಲ್ಲವೆಂದು ಕೇಂದ್ರವು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ಪಿಎಂ ಕೇರ್ಸ್‌ನಿಂದ ಸಾಕಷ್ಟು ಜನರಿಗೆ ನೆರವಾಗಿದೆ ಈಗಾಗಲೇ ಕೊರೊನಾದಂಥ ಸಾಂಕ್ರಮಿಕ ಸಂಕಷ್ಟದ ಸಮಯದಲ್ಲಿ ಪಿಎಮ್ ಕೇರ್ ಫಂಡ್​ನಿಂದಾಗಿ ಸಾಕಷ್ಟು ಬಡವರಿಗೆ ಅದರಲ್ಲೂ ವಲಸೆ ಕಾರ್ಮಿಕರಿಗೆ ಸಾಕಷ್ಟು ನೆರವಾಗಿದೆ.  ಉತ್ತರ ಪ್ರದೇಶ, ಬಿಹಾರ್, ಮಧ್ಯಪ್ರದೇಶ, ಒಡಿಶಾ ಮತ್ತು ಜಾರ್ಖಂಡ್​ ಅಂಥ ರಾಜ್ಯಗಳ ವಲಸೆ ಕಾರ್ಮಿಕರಿಗೆ ನೆರವಾಗಿದೆ. ಪ್ರಧಾನ ಮಂತ್ರಿಗಳ ಗರೀಬ್ ಕಲ್ಯಾಣ ಯೋಜನೆ, ಶ್ರಮಿಕ್ ರೈಲುಗಳ ವಿಶೇಷ ವ್ಯವಸ್ಥೆಗಾಗಿ ಕೋಟ್ಯಂತರ ಜನರಿಗೆ ಅನುಕೂಲವಾಗಲು ನೂರಾರು ಕೋಟಿ ರೂ.ಗಳನ್ನ ಪಿಎಂ ಕೇರ್ಸ್ ಪಂಡ್​ನಿಂದ ನೀಡಲಾಗಿದೆ. ಕೇವಲ ಕೆಲವೇ ಜನರ ಟೀಕೆಯಿಂದಾಗಿ ಇಂಥ ಮಹತ್ವದ ನಿರ್ಧಾರವನ್ನ ಕೈಬಿಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಅಫಿಡಿವಿಟ್​ನಲ್ಲಿ ಸ್ಪಷ್ಟಪಡಿಸಿದೆ.

ಪಿಎಂ ಕೇರ್ಸ್‌ ಫಂಡ್‌ ರಚನೆ ಪ್ರಶ್ನಿಸಿ ಕೋರ್ಟ್‌ನಲ್ಲಿ ದಾವೆ ಕೆಲ ದಿನಗಳ ಹಿಂದೆ ಸೆಂಟರ್ ಫಾರ್ ಪಬ್ಲಿಕ್ ಇಂಟ್ರೆಸ್ಟ್ ಲಿಟಿಗೇಶನ್ ಅನ್ನೊ NGO, ಪಿಎಂ ಕೇರ್ಸ್ ಫಂಡ್ ರಚನೆಯನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹಾಗೇನೇ ಇದನ್ನು ರದ್ದು ಪಡಿಸಿ  PM Cares Fund ಗೆಸಾರ್ವಜನಿಕರಿಂದ ಸಂಗ್ರಹವಾಗಿರುವ ಧೇಣಿಗೆಯನ್ನ ಈಗಿರುವ NDRF ಗೆ, ವರ್ಗಾಯಿಸಲು ಕೇಂದ್ರಕ್ಕೆ ನಿರ್ದೇಶನ ನೀಡಿ ಎಂದು ಮನವಿ ಮಾಡಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಸಮಗ್ರ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಕೇಂದ್ರ ಸರ್ಕಾರ ಈಗ ಪಿಂ ಕೇರ್ಸ್ ಫಂಡ್ ರಚನೆಯನ್ನ ಸಮರ್ಥಿಸಿಕೊಂಡು ಅಫಿಡವಿಟ್ ಸಲ್ಲಿಸಿದೆ.

Published On - 2:10 pm, Sat, 11 July 20

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ