AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿ ಪರಿಷ್ಕರಣೆ: ಏರ್ ಸುವಿಧಾ ಫಾರ್ಮ್ ಸಲ್ಲಿಕೆ ಅಗತ್ಯವಿಲ್ಲ

ಆರೋಗ್ಯ ಸಚಿವಾಲಯದ ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಆನ್‌ಲೈನ್ ಏರ್ ಸುವಿಧಾ ಪೋರ್ಟಲ್ ನಲ್ಲಿ ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಸುವುದನ್ನು ನಿಲ್ಲಿಸಲಾಗಿದೆ.

ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿ ಪರಿಷ್ಕರಣೆ: ಏರ್ ಸುವಿಧಾ ಫಾರ್ಮ್ ಸಲ್ಲಿಕೆ ಅಗತ್ಯವಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 21, 2022 | 9:47 PM

Share

ದೆಹಲಿ:  ಭಾರತಕ್ಕೆ ಬರುವಾಗ ಏರ್ ಸುವಿಧಾ(Air Suvidha) ಪೋರ್ಟಲ್‌ನಲ್ಲಿ ಒಳಬರುವ ಅಂತರಾಷ್ಟ್ರೀಯ ಪ್ರಯಾಣಿಕರು ಭರ್ತಿ ಮಾಡಬೇಕಾದ ಕೋವಿಡ್ ಲಸಿಕೆಗಾಗಿ (Covid vaccination) ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಕೆ ಇನ್ನು ಮುಂದೆ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಈ ನಿರ್ಧಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಇಂದು ಸಂಜೆ ನಾಗರಿಕ ವಿಮಾನಯಾನ ಸಚಿವಾಲಯದ ಈ ಬಗ್ಗೆ ಸೂಚನೆ ಹೊರಡಿಸಿದೆ. ಇದರ ಪ್ರಕಾರ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿರುವ ಹೊತ್ತಿನಲ್ಲಿ ಜಾಗತಿಕವಾಗಿ ಮತ್ತು ಭಾರತದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ನೀಡಿಕೆಯಲ್ಲಿ ಗಮನಾರ್ಹ ಪ್ರಗತಿಯನ್ನು ಮಾಡಲಾಗುತ್ತಿದೆ. ಹಾಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಂತರರಾಷ್ಟ್ರೀಯ ಪ್ರಯಾಣಿಕರ ಆಗಮನದ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.ಆರೋಗ್ಯ ಸಚಿವಾಲಯದ ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಆನ್‌ಲೈನ್ ಏರ್ ಸುವಿಧಾ ಪೋರ್ಟಲ್ ನಲ್ಲಿ ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಸುವುದನ್ನು ನಿಲ್ಲಿಸಲಾಗಿದೆ.

ಆದಾಗ್ಯೂ, ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿದ್ದರೆ ನಿಯಮವನ್ನು ಪರಿಶೀಲಿಸಬಹುದು ಎಂದು ಕೇಂದ್ರ ಹೇಳಿದೆ.

ಅಂತಾರಾಷ್ಟ್ರೀಯ ಪ್ರಯಾಣದ ಕುರಿತ ಇತ್ತೀಚಿನ ಮಾರ್ಗಸೂಚಿಗಳು ಈ ಕೆಳಗಿನಂತಿವೆ

1. ಎಲ್ಲಾ ಪ್ರಯಾಣಿಕರು ತಮ್ಮ ದೇಶದಲ್ಲಿ ಕೋವಿಡ್-19 ವಿರುದ್ಧ ವ್ಯಾಕ್ಸಿನೇಷನ್‌ನ ಅನುಮೋದಿತ ಪ್ರಾಥಮಿಕ ವೇಳಾಪಟ್ಟಿಯ ಪ್ರಕಾರ ಸಂಪೂರ್ಣವಾಗಿ ಲಸಿಕೆಯನ್ನು ಹೊಂದಿರಬೇಕು.

2. ಪ್ರಯಾಣದ ಸಮಯದಲ್ಲಿ ಕೋವಿಡ್-19 ರೋಗಲಕ್ಷಣಗಳನ್ನು ಹೊಂದಿರುವ ಯಾವುದೇ ಪ್ರಯಾಣಿಕರನ್ನು ಪ್ರಮಾಣಿತ ಪ್ರೋಟೋಕಾಲ್ ಪ್ರಕಾರ ಪ್ರತ್ಯೇಕಿಸಲಾಗುತ್ತದೆ.

3. ಸೋಂಕಿತ ವ್ಯಕ್ತಿ ಮಾಸ್ಕ್ ಧರಿಸಿರಬೇಕು, ವಿಮಾನ/ಪ್ರಯಾಣದಲ್ಲಿ ಇತರ ಪ್ರಯಾಣಿಕರಿಂದ ಪ್ರತ್ಯೇಕಿಸಿ ನಂತರದ ಚಿಕಿತ್ಸೆಗಾಗಿ ಪ್ರತ್ಯೇಕ ಸೌಲಭ್ಯಕ್ಕೆ ಸ್ಥಳಾಂತರಿಸಬೇಕು.

4. ಸಾಮಾಜಿಕ ಅಂತರವನ್ನು ಅನುಸರಿಸಿ ಡಿ-ಬೋರ್ಡಿಂಗ್ ಮಾಡಬೇಕು.

5. ಪ್ರವೇಶದ ಸ್ಥಳದಲ್ಲಿ ಇರುವ ಆರೋಗ್ಯ ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಥರ್ಮಲ್ ಸ್ಕ್ರೀನಿಂಗ್ ಅನ್ನು ಮಾಡಬೇಕು.

6. ಸ್ಕ್ರೀನಿಂಗ್ ಸಮಯದಲ್ಲಿ ರೋಗಲಕ್ಷಣಗಳು ಕಂಡುಬರುವ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಲಾಗುತ್ತದೆ, ಆರೋಗ್ಯ ಪ್ರೋಟೋಕಾಲ್ ಪ್ರಕಾರ ಗೊತ್ತುಪಡಿಸಿದ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುತ್ತದೆ.

7. ಎಲ್ಲಾ ಪ್ರಯಾಣಿಕರು ಆಗಮನದ ನಂತರ ತಮ್ಮ ಆರೋಗ್ಯವನ್ನು ಸ್ವಯಂ ಮೇಲ್ವಿಚಾರಣೆ ಮಾಡಬೇಕು ಮತ್ತು ಹತ್ತಿರದ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಬೇಕು ಅಥವಾ ಯಾವುದೇ ತುರ್ತು ಸಂದರ್ಭದಲ್ಲಿ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ (1075) ಅಥವಾ ರಾಜ್ಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ