ದೇಶದಲ್ಲಿ 24 ಗಂಟೆಯಲ್ಲಿ 2,73,810 ಹೊಸ ಕೊರೊನಾ ಪ್ರಕರಣಗಳು; ಆತಂಕ ಹುಟ್ಟಿಸಿದ ಸೋಂಕಿನ ವಿಭಿನ್ನ ಲಕ್ಷಣಗಳು

ಕೊರೊನಾ ಎರಡನೇ ಅಲೆಯಲ್ಲಿ ಹಿರಿಯ ನಾಗರಿಕರಿಗೆ ಹೋಲಿಸಿದರೆ ಯುವಜನರೇ ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಲಕ್ಷಣಗಳೂ ಸ್ವಲ್ಪ ವಿಭಿನ್ನವಾಗಿದ್ದು, ಕೊರೊನಾ ಪಾಸಿಟಿವ್​ ಬಂದವರಿಗೆ ಎಲ್ಲರಿಗೂ ಜ್ವರ ಕಾಣಿಸಿಕೊಳ್ಳುತ್ತಿಲ್ಲ

ದೇಶದಲ್ಲಿ 24 ಗಂಟೆಯಲ್ಲಿ 2,73,810 ಹೊಸ ಕೊರೊನಾ ಪ್ರಕರಣಗಳು; ಆತಂಕ ಹುಟ್ಟಿಸಿದ ಸೋಂಕಿನ ವಿಭಿನ್ನ ಲಕ್ಷಣಗಳು
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Apr 19, 2021 | 9:54 AM

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಅಲೆ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಬಹುತೇಕ ರಾಜ್ಯಗಳಲ್ಲಿ ಕಠಿಣ ನಿಯಮಗಳು ಜಾರಿಯಾಗುತ್ತಿವೆ. ಗುಜರಾತ್​ನಲ್ಲಿ ಜನರು ಸ್ವಯಂ ನಿರ್ಬಂಧ ಹೇರಿಕೊಳ್ಳಬೇಕು ಎಂದು ತಜ್ಞರು ಕರೆ ನೀಡಿದ್ದಾರೆ. ಹಾಗೇ ರಾಜಸ್ಥಾನದಲ್ಲಿ ಇಂದಿನಿಂದ ಮೇ 3ರವರೆಗೆ ಕಚೇರಿ, ಮಾರುಕಟ್ಟೆಗಳು ಬಂದ್ ಆಗಲಿವೆ. ಇದನ್ನು ‘ಸಾರ್ವಜನಿಕ ಶಿಸ್ತಿನ ಹದಿನೈದು ದಿನಗಳು’ ಎಂದು ಕರೆಯಲಾಗಿದೆ. ಈ ಹೈದಿನೈದು ದಿನಗಳ ಕಾಲ ರಾಜಸ್ಥಾನದಲ್ಲಿ ಅಗತ್ಯವಸ್ತುಗಳ ಸೇವೆ ಮಾತ್ರ ಇರಲಿದೆ.

ಇನ್ನು ದೇಶದಲ್ಲಿ ಕಳೆದ 24ಗಂಟೆಯಲ್ಲಿ 2,73,810ಹೊಸ ಕೊರೊನಾ ಕೇಸ್​ಗಳು ದಾಖಲಾಗಿದ್ದು, 1,619 ಜನರು ಮೃತಪಟ್ಟಿದ್ದಾರೆ. ಹಾಗೇ 1,44,178 ಜನರು ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಅಲ್ಲಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ಅದರಲ್ಲಿ ಸಕ್ರಿಯ ಪ್ರಕರಣಗಳು 19,29,329. ಒಟ್ಟು ಚೇತರಿಕೆ ಕಂಡವರ ಸಂಖ್ಯೆ 1,29,53,821  ಮತ್ತು ಕೊರೊನಾದಿಂದ ಜೀವ ಕಳೆದುಕೊಂಡವರು 1,78,769  ಜನರು.

ಕೊರೊನಾ ಎರಡನೇ ಅಲೆಯಲ್ಲಿ ಹಿರಿಯ ನಾಗರಿಕರಿಗೆ ಹೋಲಿಸಿದರೆ ಯುವಜನರೇ ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಲಕ್ಷಣಗಳೂ ಸ್ವಲ್ಪ ವಿಭಿನ್ನವಾಗಿದ್ದು, ಬಾಯಿ ಒಣಗುವುದು, ಗ್ಯಾಸ್ಟ್ರಿಕ್​, ಲೂಸ್​ ಮೋಶನ್​, ಕೆಂಪು ಕಣ್ಣು, ತಲೆನೋವುಗಳು ಕಾಣಿಸಿಕೊಳ್ಳುತ್ತಿವೆ. ಈ ಬಾರಿ ಕೊರೊನಾ ಪಾಸಿಟಿವ್​ ಬಂದವರಿಗೆ ಎಲ್ಲರಿಗೂ ಜ್ವರ ಕಾಣಿಸಿಕೊಳ್ಳುತ್ತಿಲ್ಲ ಎಂದು ಜಿನೆಸ್ಟ್ರಿಂಗ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥರಾದ ಗೌರಿ ಅಗರ್ವಾಲ್ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಚೇತರಿಕೆಯ ಪ್ರಮಾಣ 86.62ಕ್ಕೆ ಕುಸಿದಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 18,01,316 ಇದ್ದು, ಒಟ್ಟು ಸೋಂಕಿತರ ಸಂಖ್ಯೆಯ ಶೇ.12.18ರಷ್ಟಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು ಆಗಸ್ಟ್​ 7ರಂದು. 30 ಲಕ್ಷ ದಾಟಿದ್ದು ಆಗಸ್ಟ್​ 23ರಂದು, 40 ಲಕ್ಷ ದಾಟಿದ್ದು ಸೆಪ್ಟೆಂಬರ್​ 5 ಮತ್ತು 50 ಲಕ್ಷ ದಾಟಿದ್ದು ಸೆಪ್ಟೆಂಬ್ 16ರಂದು. ಕಳೆದ ಬಾರಿಗೆ ಹೋಲಿಸಿದರೆ ಸೋಂಕಿನ ಪ್ರಸರಣ ತುಂಬ ವೇಗವಾಗಿರುವುದು ಇನ್ನಷ್ಟು ಆತಂಕ ಮೂಡಿಸಿದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಕೊರೊನಾ ಕರ್ಫ್ಯೂ; ಗಣಿನಾಡಿನಲ್ಲಿ ನಿಯಂತ್ರಣಕ್ಕೆ ಬಾರದ ಕೊವಿಡ್ 19

Covid-19 Karnataka Update: ಕರ್ನಾಟಕದಲ್ಲಿ ಇಂದು 19,067 ಜನರಿಗೆ ಕೊರೊನಾ ದೃಢ, 81 ಸಾವು

Published On - 9:13 am, Mon, 19 April 21

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್