ಕೊರೊನಾವೈರಸ್ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳ ಸಂಖ್ಯೆ 40ಕ್ಕೆ ಏರಿಕೆ: ಕೇಂದ್ರ ಸರ್ಕಾರ

Delta Plus variant: ಕೊರೊನಾವೈರಸ್ ಡೆಲ್ಟಾ ಪ್ಲಸ್ ರೂಪಾಂತರದ 40 ಪ್ರಕರಣಗಳು ಭಾರತದಲ್ಲಿ ವರದಿ ಆಗಿದೆ. ಹೆಚ್ಚಿನ ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡಿನಿಂದ ಬಂದವು.

ಕೊರೊನಾವೈರಸ್ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳ ಸಂಖ್ಯೆ 40ಕ್ಕೆ ಏರಿಕೆ: ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 23, 2021 | 1:28 PM

ದೆಹಲಿ: ಡೆಲ್ಟಾ ಪ್ಲಸ್ ರೂಪಾಂತರಿಯಿಂದಾಗಿ ಭಾರತದಲ್ಲಿ ಒಟ್ಟು 40 ಕೊರೊನವೈರಸ್ ಕಾಯಿಲೆ ಪ್ರಕರಣಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ಬುಧವಾರ ವರದಿ ಮಾಡಿದೆ. ಕೊರೊನಾವೈರಸ್ ಡೆಲ್ಟಾ ಪ್ಲಸ್ ರೂಪಾಂತರದ 40 ಪ್ರಕರಣಗಳು ಭಾರತದಲ್ಲಿ ವರದಿ ಆಗಿದೆ. ಹೆಚ್ಚಿನ ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡಿನಿಂದ ಬಂದವು. ಇದು ಇನ್ನೂ ಆಸಕ್ತಿಯ ರೂಪಾಂತರಿಯಾಗಿದೆ ಎಂದು ಸರ್ಕಾರದ ಮೂಲಗಳು ಉಲ್ಲೇಖಿಸಿವೆ. ಮಂಗಳವಾರದವರೆಗೆ ಪ್ರಕರಣಗಳ ಸಂಖ್ಯೆ 22 ಆಗಿತ್ತು. ಮಂಗಳವಾರ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು (MoHFW) ಡೆಲ್ಟಾ ಪ್ಲಸ್ ಅನ್ನು “ಕಾಳಜಿಯ ರೂಪಾಂತರ” (VoC) ಎಂದು ಹೇಳಿದೆ. ಹಾಗೆ ಘೋಷಿಸುವಾಗ, ಸಚಿವಾಲಯವು ಜೀನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್‌ಗಳ ಒಕ್ಕೂಟದ ವಿಶ್ಲೇಷಣೆಯನ್ನು ಉಲ್ಲೇಖಿಸಿದೆ. ಇದು ರೂಪಾಂತರಗೊಂಡ ವೈರಸ್ ಹೆಚ್ಚು ಸುಲಭವಾಗಿ ಹರಡುತ್ತದೆ ಎಂದು ವಿಶ್ಲೇಷಣೆ ಹೇಳಿದೆ. ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಡೆಲ್ಟಾ ಪ್ಲಸ್ ಅನ್ನು “ಆಸಕ್ತಿಯ ರೂಪಾಂತರ” (VoI) ಎಂದು ಕರೆದಿದ್ದು ಈ ರೂಪಾಂತರವನ್ನು ಅಧ್ಯಯನ ಮಾಡಲಾಗುತ್ತಿದೆ ಎಂಬುದನ್ನು ಇದು ಸೂಚಿಸುತ್ತದೆ.

ಈ ರೂಪಾಂತರವು ಕಂಡುಬಂದ ರಾಜ್ಯಗಳನ್ನು ಎಚ್ಚರಿಸಲಾಗಿದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶಕ್ಕೆ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆ ಕ್ರಮಗಳು ಉಳಿದಿರುವಾಗ ಹೆಚ್ಚು ಗಮನ ಮತ್ತು ಪರಿಣಾಮಕಾರಿಯಾಗಿರಬೇಕು ಎಂದು ಸೂಚಿಸಲಾಗಿದೆ. ಹೀಗೆ ವಿವಿಧ ಜಿಲ್ಲೆಗಳು ಮತ್ತು ಕ್ಲಸ್ಟರ್‌ಗಳಲ್ಲಿ ತಕ್ಷಣದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ” ಎಂದು ಸಚಿವಾಲಯ ತಮ್ಮ ಹೇಳಿಕೆಯಲ್ಲಿ ತಿಳಿಸಿದೆ.

ಡೆಲ್ಟಾ ಪ್ಲಸ್ ಎನ್ನುವುದು ಡೆಲ್ಟಾ ಕೊವಿಡ್ -19 ಪ್ರಬೇಧದದ ರೂಪಾಂತರಿ ಅಥವಾ ಭಾರತದಲ್ಲಿ ಮೊದಲು ಪತ್ತೆಯಾದ ಬಿ 1.617.2 ರೂಪಾಂತರಿ ಆಗಿದೆ. ವೈಜ್ಞಾನಿಕವಾಗಿ, ಡೆಲ್ಟಾ ಪ್ಲಸ್ ಅನ್ನು AY.1 ರೂಪಾಂತರ ಎಂದು ಸೂಚಿಸಲಾಗುತ್ತದೆ. ಆರೋಗ್ಯ ಸಚಿವಾಲಯ ಉಲ್ಲೇಖಿಸಿದ ಅಧ್ಯಯನದಲ್ಲಿ ಈ ರೂಪಾಂತರಿಯು ಶ್ವಾಸಕೋಶದ ಮೇಲೆ “ಹೆಚ್ಚು ಬಲವಾಗಿ” ಪರಿಣಾಮ ಬೀರುತ್ತದೆ ಮತ್ತು ಅದನ್ನು ತಟಸ್ಥಗೊಳಿಸುವ ಪ್ರತಿಕಾಯಗಳ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂದು ಕಂಡುಬಂದಿದೆ.

ಭಾರತದಲ್ಲಿ ಮೊದಲು ಪತ್ತೆಯಾದ ಮತ್ತೊಂದು ರೂಪಾಂತರವೆಂದರೆ ಕಪ್ಪಾ (Kappa) ಇದನ್ನು B1.617.1 ರೂಪಾಂತರಿ ಎಂದು ಸೂಚಿಸಲಾಗುತ್ತದೆ. ಆದಾಗ್ಯೂ, ಇದು ಡೆಲ್ಟಾ ರೂಪಾಂತರವಾಗಿದ್ದು, ಇದು ಎರಡನೇ ಕೊವಿಡ್ -19 ಅಲೆ ಹಿಂದೆ ಇದೆ ಎಂದು ನಂಬಲಾಗಿದೆ. ಇದು ಏಪ್ರಿಲ್-ಮೇ ತಿಂಗಳಲ್ಲಿ ದೇಶದಲ್ಲಿ ವ್ಯಾಪಿಸಿದ್ದು ಎರಡು ತಿಂಗಳುಗಳಲ್ಲಿ ಉತ್ತುಂಗದಲ್ಲಿತ್ತು.

 ಇದನ್ನೂ ಓದಿ: ಭಾರತಕ್ಕೀಗ ಡೆಲ್ಟಾ ಪ್ಲಸ್ ರೂಪಾಂತರಿಯ ಅಪಾಯ: ಇದು ಅಪಾಯಕಾರಿ ಎಂದು ಘೋಷಿಸಿದ ಕೇಂದ್ರ

ಇದನ್ನೂ ಓದಿ:  ಕೊರೋನಾವೈರಸ್​ನ ಹೊಸ ಡೆಲ್ಟಾ ಪ್ಲಸ್ ರೂಪಾಂತರಿ ಮೂರನೇ ಅಲೆಗೆ ನಾಂದಿ ಹಾಡಬಹುದು ಎನ್ನುತ್ತಾರೆ ತಜ್ಞರು

(India has reported a total of 40 cases of the coronavirus disease due to the Delta Plus variant)

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ