Global Hunger Index ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದ ಭಾರತ: ಮೋದಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ ಕಪಿಲ್ ಸಿಬಲ್
ಹಸಿವು ಮತ್ತು ಅಪೌಷ್ಟಿಕತೆಯನ್ನು ಪತ್ತೆಹಚ್ಚುವ ಜಾಗತಿಕ ಹಸಿವು ಸೂಚ್ಯಂಕದ (GHI) ಪ್ರಕಾರ ಚೀನಾ, ಬ್ರೆಜಿಲ್ ಮತ್ತು ಕುವೈತ್ ಸೇರಿದಂತೆ 18 ದೇಶಗಳು ಐದಕ್ಕಿಂತ ಕಡಿಮೆ ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿವೆ. 2020 ರಲ್ಲಿ ಭಾರತ 107 ದೇಶಗಳ ಪೈಕಿ 94 ನೇ ಸ್ಥಾನದಲ್ಲಿತ್ತು. ಈಗ ಈ ಪಟ್ಟಿಯಲ್ಲಿ 116 ದೇಶಗಳಿದ್ದರೆ, ಭಾರತ 101 ನೇ ಸ್ಥಾನಕ್ಕೆ ಕುಸಿದಿದೆ
ದೆಹಲಿ: ಜಾಗತಿಕ ಹಸಿವು ಸೂಚ್ಯಂಕದಲ್ಲಿ (Global Hunger Index) ದೇಶದ ಕಳಪೆ ಶ್ರೇಯಾಂಕದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ (Kapil Sibal) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತವು 2020ರಲ್ಲಿ 94 ನೇ ಸ್ಥಾನದಲ್ಲಿತ್ತು. ಇದೀಗ 101 ನೇ ಸ್ಥಾನಕ್ಕೆ ಕುಸಿದಿದ್ದು, ಪಾಕಿಸ್ತಾನ ಸೇರಿದಂತೆ ತನ್ನ ನೆರೆಹೊರೆಯ ರಾಷ್ಟ್ರಗಳಿಗಿಂತ ಹಿಂದುಳಿದಿದೆ. ಜಾಗತಿಕ ಹಸಿವಿನ ಸೂಚ್ಯಂಕ ವರದಿಯು ಭಾರತದಲ್ಲಿ ಹಸಿವಿನ ಮಟ್ಟವನ್ನು “ಆತಂಕಕಾರಿ” ಎಂದು ಬಣ್ಣಿಸಿದೆ. ಬಡತನ, ಹಸಿವನ್ನು ನಿವಾರಿಸಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ಮಾಡುವ ಸರ್ಕಾರದ ಭರವಸೆಗಳನ್ನು ಲೇವಡಿ ಮಾಡಿ ಸಿಬಲ್ ಟ್ವೀಟ್ ಮಾಡಿದ್ದಾರೆ.
Congratulations Modi ji for eradicating : 1) poverty 2) hunger 3) making India a global power 4) for our digital economy 5) …………… so much more
Global Hunger Index :
2020 : India ranked 94 2021 : India ranks 101
Behind Bangladesh , Pakistan & Nepal
— Kapil Sibal (@KapilSibal) October 15, 2021
ಹಸಿವು ಮತ್ತು ಅಪೌಷ್ಟಿಕತೆಯನ್ನು ಪತ್ತೆಹಚ್ಚುವ ಜಾಗತಿಕ ಹಸಿವು ಸೂಚ್ಯಂಕದ (GHI) ಪ್ರಕಾರ ಚೀನಾ, ಬ್ರೆಜಿಲ್ ಮತ್ತು ಕುವೈತ್ ಸೇರಿದಂತೆ 18 ದೇಶಗಳು ಐದಕ್ಕಿಂತ ಕಡಿಮೆ ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿವೆ.
2020 ರಲ್ಲಿ ಭಾರತ 107 ದೇಶಗಳ ಪೈಕಿ 94 ನೇ ಸ್ಥಾನದಲ್ಲಿತ್ತು. ಈಗ ಈ ಪಟ್ಟಿಯಲ್ಲಿ 116 ದೇಶಗಳಿದ್ದರೆ, ಭಾರತ 101 ನೇ ಸ್ಥಾನಕ್ಕೆ ಕುಸಿದಿದೆ. ಭಾರತದ ಜಿಹೆಚ್ಐ ಸ್ಕೋರ್ ಕೂಡ ಕಡಿಮೆಯಾಗಿದೆ. 2000 ರಲ್ಲಿ 38.8 ಇದ್ದ್ದು 2012 ಮತ್ತು 2021 ರ ನಡುವೆ 28.8 – 27.5 ರ ಒಳಗೆ ಇದೆ.
ನೇಪಾಳ (76), ಬಾಂಗ್ಲಾದೇಶ (76), ಮ್ಯಾನ್ಮಾರ್ (71) ಮತ್ತು ಪಾಕಿಸ್ತಾನ (92) ನಂತಹ ನೆರೆಯ ದೇಶಗಳು ತನ್ನ ಪ್ರಜೆಗಳಿಗೆ ಭಾರತಕ್ಕಿಂತ ಉತ್ತಮ ಆಹಾರ ನೀಡಿದರೂ, ಈ ದೇಶಗಳನ್ನು ‘ಆತಂಕಕಾರಿ’ ಹಸಿವಿನ ವರ್ಗದಲ್ಲಿ ಸೇರಿಸಲಾಗಿದೆ.
ವರದಿಯ ಪ್ರಕಾರ ಭಾರತದಲ್ಲಿ 1998-2002ರ ನಡುವೆ ಮಕ್ಕಳಲ್ಲಿ ಅಪೌಷ್ಟಿಕತೆ ಪಾಲು 17.1 ಶೇಕಡದಿಂದ 17.3 ಪ್ರತಿಶತಕ್ಕೆ ಏರಿಕೆಯಾಗಿದೆ. “ಕೊವಿಡ್ -19 ಮತ್ತು ಭಾರತದಲ್ಲಿ ಸಾಂಕ್ರಾಮಿಕ ಸಂಬಂಧಿತ ನಿರ್ಬಂಧಗಳಿಂದ ಜನರು ತೀವ್ರವಾಗಿ ತೊಂದರೆಗೊಳಗಾಗಿದ್ದಾರೆ, ವಿಶ್ವದಾದ್ಯಂತ ಅತಿಹೆಚ್ಚು ಮಕ್ಕಳ ಅಪೌಷ್ಟಿಕತೆ ಹೊಂದಿರುವ ದೇಶ” ಎಂದು ವರದಿ ಹೇಳಿದೆ.
ಇದನ್ನೂ ಓದಿ: ಕೇಂದ್ರದ 7 ಹೊಸ ರಕ್ಷಣಾ ಕಂಪನಿಗಳು ಮಿಲಿಟರಿ ಪಡೆಗೆ ಶಕ್ತಿ ತುಂಬಲಿದೆ: ಪ್ರಧಾನಿ ನರೇಂದ್ರ ಮೋದಿ