AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ, ನಾನು ಬಂದು ಉತ್ತರಿಸುತ್ತೇನೆ: ಲಾಲೂ ಪ್ರಸಾದ್ ಯಾದವ್​

ಪ್ರಧಾನಿ ನರೇಂದ್ರ ಮೋದಿ ನಾಯಕತ್ವಡಿ ದೇಶವು ಆಂತರಿಕ ಯುದ್ಧದತ್ತ ಸಾಗುತ್ತಿದೆ. ದಂಗೆಗಳು, ಧರ್ಮ, ದೇಗುಲಗಳಂತಹ ಸೂಕ್ಷ್ಮ ವಿಷಯಗಳನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಲಾಲೂ ಪ್ರಸಾದ್ ಯಾದವ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ, ನಾನು ಬಂದು ಉತ್ತರಿಸುತ್ತೇನೆ: ಲಾಲೂ ಪ್ರಸಾದ್ ಯಾದವ್​
ಲಾಲೂ ಪ್ರಸಾದ್ ಯಾದವ್​
TV9 Web
| Edited By: |

Updated on: Feb 09, 2022 | 5:07 PM

Share

ಪಾಟ್ನಾ: ಉತ್ತರ ಪ್ರದೇಶದಲ್ಲಿ ನಾಳೆಯಿಂದ (ಫೆ.10) ವಿಧಾನಸಭೆ ಚುನಾವಣೆ ನಡೆಯಲಿದ್ದು, ನಾಳೆ 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇರುವಾಗ, ಬಿಹಾರ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ (Lalu Prasad Yadav )​ ತಮ್ಮ ಬೆಂಬಲವನ್ನು ಸಮಾಜವಾದಿ ಪಕ್ಷಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ (Uttar Pradesh Assembly Election) ಸೋಲಲು ಏನೇನು ಬೇಕೋ, ಅದೆಲ್ಲವನ್ನೂ ಬಿಜೆಪಿ ಮಾಡಿಕೊಂಡಿದೆ ಎಂದೂ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವಡಿ ದೇಶವು ಆಂತರಿಕ ಯುದ್ಧದತ್ತ ಸಾಗುತ್ತಿದೆ. ದಂಗೆಗಳು, ಧರ್ಮ, ದೇಗುಲಗಳಂತಹ ಸೂಕ್ಷ್ಮ ವಿಷಯಗಳನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. 75ವರ್ಷಗಳ ಹಿಂದೆ ಭಾರತವನ್ನು ಬಿಟ್ಟು ಹೋಗಿದ್ದ ಬ್ರಿಟಿಷರು ಇದೀಗ ಬಿಜೆಪಿಯ ರೂಪದಲ್ಲಿ ಮತ್ತೆ ವಾಪಸ್ ಬಂದಂತೆ ಆಗಿದೆ ಎಂದು ಲಾಲೂ ಪ್ರಸಾದ್ ಯಾದವ್​ ತಿಳಿಸಿದ್ದಾರೆ. ಬಿಜೆಪಿಯವರು ಈ ಬಾರಿ ಚುನಾವಣೆಯಲ್ಲಿ ಸೋಲುತ್ತಾರೆ. ಆ ಪಕ್ಷ ಹಣದುಬ್ಬರ, ಬಡತನದ ಬಗ್ಗೆ ಮಾತನಾಡುತ್ತಿಲ್ಲ. ಆದರೆ ಅಯೋಧ್ಯೆ, ವಾರಣಾಸಿ ಎಂದು ಜಪಿಸುತ್ತಿದೆ. ಒಟ್ಟಾರೆ ಸೂಕ್ಷ್ಮ ವಿಷಯಗಳನ್ನಿಟ್ಟುಕೊಂಡು ಆಡಳಿತ ಮಾಡುತ್ತಿದೆ ಎಂದೂ ಹೇಳಿದರು. ಇದೇ ವೇಳೆ ಕರ್ನಾಟಕ ಹಿಜಾಬ್​ ವಿವಾದದ ಬಗ್ಗೆಯೂ ಮಾತನಾಡಿದರು.

ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಸಕ್ರಿಯವಾಗುವ ಬಗ್ಗೆಯೂ ಲಾಲೂ ಪ್ರಸಾದ್ ಯಾದವ್ ಸುಳಿವು ನೀಡಿದರು. ನಾನು ಟಿವಿಯಲ್ಲಿ ಸಂಸತ್ತಿನ ಕಲಾಪಗಳನ್ನು ನೋಡುತ್ತಲೇ ಇದ್ದೇನೆ. ಹೇಗೆ ನಡೆಯಬೇಕೋ ಹಾಗೆ ನಡೆಯುತ್ತಿಲ್ಲ. ಅಲ್ಲಿ ಉಳಿದವರಿಗೆ ಮಾತನಾಡಲು ಅವಕಾಶ ಇಲ್ಲದಂತಾಗಿದೆ. ಖಂಡಿತ ನಾನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಸಂಸತ್ತಿಗೆ ಪ್ರವೇಶ ಮಾಡುತ್ತೇನೆ. ಕೋರ್ಟ್​​ನಿಂದ ಸ್ವಲ್ಪ ನಿರ್ಬಂಧವಿದ್ದು, ಅದು ಸರಿಯಾಗಲಿದೆ. ಅಲ್ಲಿವರೆಗೂ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ. ನಾನು ಬಂದು ಉತ್ತರ ನೀಡುತ್ತೇನೆ ಎಂದೂ ಹೇಳಿದ್ದಾರೆ. ಇದೇ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು,  ಬಿಹಾರಕ್ಕೆ ವಿಶೇಷ ಸ್ಥಾನಮಾನ ತರುವ ಉದ್ದೇಶದಿಂದ ಬಿಜೆಪಿಯೊಂದಿಗೆ ಹೋದರು. ಆದರೆ ಅವರ ಕೈಯಲ್ಲಿ ಏನೂ ಆಗಲಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಪಕ್ಕದ ಮನೆ ಮಹಿಳೆಯನ್ನು ಎಳೆದುಕೊಂಡು ಬಂದು ರೇಪ್​ ಮಾಡಿದ ಪತಿ; ಮೊಬೈಲ್​​ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತ್ನಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್