
ನವದೆಹಲಿ, ಆಗಸ್ಟ್ 6: ಭಾರತ ರಷ್ಯಾದಿಂದ ತೈಲವನ್ನು ನಿರಂತರವಾಗಿ ಖರೀದಿಸುತ್ತಿದೆ ಎಂಬ ಕಾರಣಕ್ಕೆ ಭಾರತದ ಆಮದು ವಸ್ತುಗಳ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ರಷ್ಯಾದಿಂದ ತೈಲ ಆಮದಿನ ಮೇಲೆ ಹೆಚ್ಚುವರಿ ಸುಂಕ ವಿಧಿಸುವ ಅಮೆರಿಕದ ಕ್ರಮವನ್ನು ಭಾರತ ತೀವ್ರವಾಗಿ ಆಕ್ಷೇಪಿಸಿದೆ. ಈ ನಿರ್ಧಾರವನ್ನು “ಅನ್ಯಾಯಯುತ ಮತ್ತು ಅಸಮಂಜಸ” ಎಂದು ಭಾರತ ಟೀಕಿಸಿದೆ.
ರಷ್ಯಾದ ತೈಲವನ್ನು ನಿರಂತರವಾಗಿ ಆಮದು ಮಾಡಿಕೊಳ್ಳುವುದಕ್ಕೆ ಪ್ರತಿಕ್ರಿಯೆಯಾಗಿ ಹೆಚ್ಚುವರಿ ಸುಂಕಗಳನ್ನು ವಿಧಿಸುವ ಅಮೆರಿಕದ ನಿರ್ಧಾರವನ್ನು ಭಾರತ ತೀವ್ರವಾಗಿ ಖಂಡಿಸಿತು. ಈ ಕ್ರಮವನ್ನು “ಅನ್ಯಾಯಯುತ, ನ್ಯಾಯಸಮ್ಮತವಲ್ಲ ಮತ್ತು ಅಸಮಂಜಸ” ಎಂದು ಭಾರತ ಹೇಳಿದೆ. ವಿದೇಶಾಂಗ ಸಚಿವಾಲಯ (MEA) ಯುಎಸ್ ರಷ್ಯಾದಿಂದ ಭಾರತ ತೈಲು ಆಮದು ಮಾಡಿಕೊಳ್ಳುತ್ತಿರುವುದನ್ನು ಗುರಿಯಾಗಿಸಿಕೊಂಡಿದೆ. ಅದೇ ಕಾರಣಕ್ಕೆ ಶೇ. 50ರಷ್ಟು ಸುಂಕ ವಿಧಿಸಿದೆ ಎಂದು ಹೇಳಿದೆ.
ಇದನ್ನೂ ಓದಿ: ನಿಜವಾಯ್ತು ಟ್ರಂಪ್ ಬೆದರಿಕೆ; ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ಸುಂಕ ವಿಧಿಸಿದ ಅಮೆರಿಕಾ!
ಹಲವಾರು ಇತರ ದೇಶಗಳು ತಮ್ಮ ಸ್ವಂತ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳಿಗಾಗಿ ಭಾರತದ ಮೇಲೆ ಹೆಚ್ಚುವರಿ ಸುಂಕಗಳನ್ನು ವಿಧಿಸಲು ಅಮೆರಿಕ ನಿರ್ಧಾರ ತೆಗೆದುಕೊಂಡಿರುವುದು ಅತ್ಯಂತ ದುರದೃಷ್ಟಕರ. ಈ ಕ್ರಮಗಳು ಅನ್ಯಾಯ, ಅಸಮಂಜಸ ಎಂದು ನಾವು ಪುನರುಚ್ಚರಿಸುತ್ತೇವೆ. ಭಾರತ ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
It is extremely unfortunate that the US chose to impose additional tariffs on India for actions that several other countries are also taking in their own national interest. We reiterate that these actions are unfair, unjustified and unreasonable. India will take all actions… pic.twitter.com/ecYdZqwyx4
— ANI (@ANI) August 6, 2025
ಭಾರತದ ಇಂಧನ ಸಂಬಂಧಗಳನ್ನು ಮಾಸ್ಕೋದೊಂದಿಗೆ ಮತ್ತು ವಾಷಿಂಗ್ಟನ್‌ನೊಂದಿಗಿನ ವ್ಯಾಪಾರ ಸಂಬಂಧದೊಂದಿಗೆ ಸಂಪರ್ಕಿಸುವ ಹೊಸ ಸುಂಕವು ಇಂದಿನ ಆದೇಶದ ದಿನಾಂಕದಿಂದ 21 ದಿನಗಳಲ್ಲಿ ಜಾರಿಗೆ ಬರಲಿದೆ. ಆಗಸ್ಟ್ 7ರಿಂದ ಜಾರಿಗೆ ಬರಲಿರುವ ಪ್ರತ್ಯೇಕ 25% ಸುಂಕದ ಜೊತೆಗೆ ಈ ಸುಂಕವೂ ಸೇರ್ಪಡೆಯಾಗಲಿದೆ.
ಇದನ್ನೂ ಓದಿ: ಸುಮ್ಮನೆ ನಮ್ಮನ್ನು ಟಾರ್ಗೆಟ್ ಮಾಡಬೇಡಿ; ಟ್ರಂಪ್ ಸುಂಕ ಬೆದರಿಕೆಗೆ ಭಾರತ ತಿರುಗೇಟು
ರಷ್ಯಾದ ತೈಲ ಖರೀದಿಗೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ಸುಂಕಗಳನ್ನು ವಿಧಿಸಿದ್ದಾರೆ. ಆಗಸ್ಟ್ 27ರಂದು ಜಾರಿಗೆ ಬರಲಿರುವ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ. “ಭಾರತ ಸರ್ಕಾರ ಪ್ರಸ್ತುತ ನೇರವಾಗಿ ಅಥವಾ ಪರೋಕ್ಷವಾಗಿ ರಷ್ಯಾದ ಒಕ್ಕೂಟದ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ನಾನು ಕಂಡುಕೊಂಡಿದ್ದೇನೆ” ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ ಭಾರತದ ಆಮದಿನ ಮೇಲಿನ ಒಟ್ಟು ಯುಎಸ್ ಸುಂಕ ಸುಮಾರು ಶೇ. 50ಕ್ಕೆ ಏರಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:51 pm, Wed, 6 August 25