ಇಂಗ್ಲೆಂಡ್​ನಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಇಂದಿನಿಂದ ಹೊಸ ಕ್ವಾರಂಟೈನ್ ರೂಲ್ಸ್; ಇಲ್ಲಿದೆ ಮಾಹಿತಿ

ಭಾರತಕ್ಕೆ ಬರುವ ಬ್ರಿಟಿಷ್ ಪ್ರಜೆಗಳು 10 ದಿನ ಕ್ವಾರಂಟೈನ್ ಆಗಲೇಬೇಕು. ಹಾಗೇ, ಭಾರತಕ್ಕೆ ವಿಮಾನ ಹತ್ತುವ ಮುನ್ನ 72 ಗಂಟೆಗಳೊಳಗಿನ ಕೊವಿಡ್ ನೆಗೆಟಿವ್ ವರದಿಯನ್ನು ಸಲ್ಲಿಸಬೇಕು. ಅವರು ಭಾರತದ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ 2ನೇ ಬಾರಿಗೆ ಆರ್​ಟಿ-ಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ.

ಇಂಗ್ಲೆಂಡ್​ನಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಇಂದಿನಿಂದ ಹೊಸ ಕ್ವಾರಂಟೈನ್ ರೂಲ್ಸ್; ಇಲ್ಲಿದೆ ಮಾಹಿತಿ
ಏರ್ ಇಂಡಿಯಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 04, 2021 | 8:31 AM

ನವದೆಹಲಿ: ಇಂಗ್ಲೆಂಡ್​ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಇಂದಿನಿಂದ ಹೊಸ ನಿಯಮ ಜಾರಿಯಾಗಲಿದ್ದು, 10 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಒಂದುವೇಳೆ ಆ ಪ್ರಯಾಣಿಕರು ಎರಡು ಡೋಸ್ ಕೊವಿಡ್ ಲಸಿಕೆ ಪಡೆದಿದ್ದರೂ ಅವರು ಕ್ವಾರಂಟೈನ್ ಆಗಲೇಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಇಂಗ್ಲೆಂಡ್​ಗೆ ಪ್ರಯಾಣಿಸುವ ಭಾರತೀಯರು ಕೊರೊನಾ ಲಸಿಕೆ ಪಡೆದಿದ್ದರೂ 10 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಿದ ಬೆನ್ನಲ್ಲೇ ಭಾರತ ಸರ್ಕಾರ ಕೂಡ ಅದೇ ನಿಯಮವನ್ನು ನಮ್ಮ ದೇಶದಲ್ಲೂ ಜಾರಿಗೊಳಿಸಿದೆ.

ಇಂಗ್ಲೆಂಡ್​ನಿಂದ ಭಾರತಕ್ಕೆ ಬರುವ ಭಾರತದ ಪ್ರಜೆಗಳಿಗೆ ಮಾತ್ರ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದ್ದು, ಅವರಿಗೆ ಕ್ವಾರಂಟೈನ್ ನಿಯಮ ಅನ್ವಯವಾಗುವುದಿಲ್ಲ. ಆದರೆ, ಬ್ರಿಟಿಷ್ ಪ್ರಜೆಗಳು 10 ದಿನ ಕ್ವಾರಂಟೈನ್ ಆಗಲೇಬೇಕು. ಹಾಗೇ, ಭಾರತಕ್ಕೆ ವಿಮಾನ ಹತ್ತುವ ಮುನ್ನ 72 ಗಂಟೆಗಳೊಳಗಿನ ಕೊವಿಡ್ ನೆಗೆಟಿವ್ ವರದಿಯನ್ನು ಸಲ್ಲಿಸಬೇಕು. ಅವರು ಭಾರತದ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ 2ನೇ ಬಾರಿಗೆ ಆರ್​ಟಿ-ಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ.

ಈ ಹೊಸ ನಿಯಮಗಳನ್ನು ಇಂದಿನಿಂದ ಕಾರ್ಯರೂಪಕ್ಕೆ ತರುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ಎರಡೂ ಡೋಸ್ ಪಡೆದ ಭಾರತೀಯರಿಗೆ ಇಂಗ್ಲೆಂಡ್​ನಲ್ಲಿ 10 ದಿನಗಳ ಕಾಲ ಕ್ವಾರಂಟೈನ್ ವಿಧಿಸಲಾಗಿತ್ತು. ಇದಕ್ಕೆ ಭಾರತದಿಂದ ವಿರೋಧ ವ್ಯಕ್ತವಾದರೂ ಇಂಗ್ಲೆಂಡ್ ತನ್ನ ನಿರ್ಧಾರವನ್ನು ಬದಲಾಯಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ ಕೂಡ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸುವ ಮೂಲಕ ಭಾರತ ತಿರುಗೇಟು ನೀಡಿದೆ.

ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಇಂದಿನಿಂದ ಅನ್ವಯವಾಗುವಂತೆ ಅ. 1ರಂದು ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿತ್ತು. ಇಂಗ್ಲೆಂಡ್​ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಪರೀಕ್ಷೆಯ ರಿಪೋರ್ಟ್‌ ಕಡ್ಡಾಯಗೊಳಿಸಲಾಗಿದೆ. ಇಂಗ್ಲೆಂಡ್ ಪ್ರಜೆಗಳಿಗೆ ಕೂಡ ಕ್ವಾರಂಟೈನ್ ಕಡ್ಡಾಯಗೊಳಿಸಿ ಇಂಗ್ಲೆಂಡ್‌ಗೆ ಭಾರತ ತಿರುಗೇಟು ನೀಡಿದೆ.

ಭಾರತ ಪ್ರಯಾಣಕ್ಕೆ 72 ಗಂಟೆ ಮುಂಚಿತವಾಗಿ RT-PCR ಪರೀಕ್ಷೆಗೆ ಒಳಗಾಗಬೇಕು. ಭಾರತಕ್ಕೆ ಬಂದ ತಕ್ಷಣವೇ ಏರ್ ಪೋರ್ಟ್ ನಲ್ಲಿ RT-PCR ಪರೀಕ್ಷೆಗೆ ಒಳಗಾಗಬೇಕು. ಲಸಿಕೆ ಪಡೆದಿರಲಿ, ಪಡೆಯದೇ ಇರಲಿ, RT-PCR ಪರೀಕ್ಷೆ, ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಇಂಗ್ಲೆಂಡ್​ನಲ್ಲಿ ನೀಡಲಾಗುವ ಆಸ್ಟ್ರಾಜೆನಿಕಾ ಲಸಿಕೆಯ ಭಾರತದ ಆವೃತ್ತಿಯಾದ ಕೋವಿಶೀಲ್ಡ್‌ನ ಎರಡು ಡೋಸ್ ಪಡೆದಿದ್ದರೂ ಅವರಿಗೆ ಇನ್ನೂ ಲಸಿಕೆ ನೀಡಲಾಗಿಲ್ಲ ಎಂದು ಇಂಗ್ಲೆಂಡ್​ನಲ್ಲಿ ಪರಿಗಣಿಸಲಾಗುತ್ತಿತ್ತು. ಅಲ್ಲದೆ, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ 10 ದಿನಗಳ ಕ್ವಾರಂಟೈನ್ ಕೂಡ ಕಡ್ಡಾಯವಾಗಿತ್ತು. ಕೋವಿಶೀಲ್ಡ್​ಗೆ ಮಾನ್ಯತೆ ನೀಡದಿರುವುದು ಭಾರತೀಯರ ಅಸಮಾಧಾನಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಇಂಗ್ಲೆಂಡ್​ನ ಅನುಮೋದಿತ ಲಸಿಕೆಗಳ ಪಟ್ಟಿಗೆ ಕೋವಿಶೀಲ್ಡ್ ಸೇರ್ಪಡೆ; ಭಾರತೀಯರಿಗೆ ಕ್ವಾರಂಟೈನ್ ಮಾತ್ರ ಕಡ್ಡಾಯ

Coronavirus cases in India: ಭಾರತದಲ್ಲಿ 22,842 ಹೊಸ ಕೊವಿಡ್ ಪ್ರಕರಣ ಪತ್ತೆ, 244 ಸಾವು

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್